ಏರ್‌ಪೋರ್ಟ್ ಸ್ಥಾಪನೆಗೆ ಅಧಿಕಾರಿಗಳ ಮುಂದಿನ ಸವಾಲುಗಳು
1 min readರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಎಲ್ಲಿ ನಿರ್ಮಿಸಲಾಗುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲಿ ಕಾಡತೊಡಗಿದೆ. ಈಗಾಗಲೇ ಬೆಂಗಳೂರಿನಿಂದ 50ರಿಂದ 60 ಕಿಲೋ ಮೀಟರ್ ದೂರದಲ್ಲೇ ಜಾಗ ಗುರುತಿಸುವ ಕಾರ್ಯ ನಡೆಯುತ್ತಿದೆ. ಸದ್ಯ ಅಧಿಕಾರಿಗಳಿಗೆ ಇದೆಲ್ಲವನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದೇ ಸವಾಲಾಗಿದೆ.
ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸವಾಲುಗಳನ್ನು ಸ್ವೀಕರಿಸಿರುವ ಅಧಿಕಾರಿಗಳು ಮತ್ತು ಉದ್ಯಮಿಗಳು ಅಗತ್ಯ ಸಲಹೆಗಳನ್ನು ಕೇಳುತ್ತಿದ್ದಾರೆ. ಈ ಸಂಬಂಧ ಬುಧವಾರ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಬೃಹತ್ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ವಿಸ್ತೃತ ಸಭೆ ನಡೆಯಿತು.
ಹೌದು, ರಾಜಧಾನಿಯ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧಸಚಿವ ಎಂ.ಬಿ.ಪಾಟೀಲ ಅವರು ವಿಮಾನಯಾನ ವಲಯದ ಪ್ರಮುಖರ ಜತೆ ವಿಸ್ತೃತ ಚರ್ಚಿಸಿದ್ದಾರೆ.
ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಪ್ರಯಾಣಿಕರ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಎರಡನ್ನೂ ಯೋಜನೆಯಲ್ಲಿ ಪರಿಗಣಿಸುವ ಚಿಂತನೆ ಇದೆ. ಜೊತೆಗೆ ಭೂಮಿಯ ಲಭ್ಯತೆ ಸೇರಿದಂತೆ ತಾಂತ್ರಿಕ ಅಂಶಗಳ ಕಡೆಗೂ ಗಮನಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ್ ಅವರು, ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮತ್ತು ವಿಮಾನ ಪ್ರಯಾಣಿಕರ ದಟ್ಟಣೆ ಅನುಭವಿಸುತ್ತಿರುವ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೆನ್ನುವುದರಲ್ಲಿ ಅನುಮಾನವಿಲ್ಲ. ಸ್ಥಳದ ಆಯ್ಕೆ ಇತ್ಯಾದಿಗಳನ್ನು ಇನ್ನೂ ಆಖೈರುಗೊಳಿಸಿಲ್ಲ. ಈ ಬಗ್ಗೆ ಮತ್ತಷ್ಟು ಸಮಾಲೋಚನಾ ಸಭೆಗಳನ್ನು ನಡೆಸುವ ಅಗತ್ಯವಿದೆ’ ಎಂದು ಹೇಳಿದರು.
ಈ ಯೋಜನೆಯನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎನ್ನುವ ಬಗ್ಗೆ ಉದ್ಯಮಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಸಲಹೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಸಭೆಗಳು ನಡೆಯಲಿವೆ ಎಂದು ಅವರು ಹೇಳಿದರು
ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್ ಮಂಜುಳಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ಕೋರ್ಲಪಟ್ಟಿ ಪಾಲ್ಗೊಂಡಿದ್ದರು.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday