ಬಾಬರ್ ಆಝಮ್‌ಗೆ ಗೇಟ್ ಪಾಸ್? ಪಾಕ್ ತಂಡಕ್ಕೆ ನಾಯಕನಾಗಬಲ್ಲ ಮೂವರು!
1 min read
1 year ago
ಪ್ರಸ್ತುತ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ನೀರಸ ಪ್ರದರ್ಶನ ತೋರಿದೆ. ಆಡಿರುವ 5 ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಬಾಬರ್ ಆಝಮ್ ಅವರನ್ನು ನಾಯಕತ್ವದಿಂದ ತೆಗೆಯುವ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ ಬೆಳವಣಿಗೆಗಳು ನಡೆಯುತ್ತಿವೆ. ಒಟ್ಟಿನಲ್ಲಿ ಮೂವರು ಆಟಗಾರರ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇವರ ಪೈಕಿ ಒಬ್ಬರು ಆಝಮ್ ಸ್ಥಾನ ತುಂಬಬಹುದು ಎಂದು ಹೇಳಲಾಗುತ್ತಿದೆ.
ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ನೀರಸ ಪ್ರದರ್ಶನ ತೋರುತ್ತಿದೆ. ಈ ಹಿನ್ನೆಲೆಯಲ್ಲಿ ಪಾಕ್ ನಾಯಕತ್ವದಿಂದ ಬಾಬರ್ ಆಝಮ್ ಅವರನ್ನು ಕೆಳಗಿಳಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ ಬೆಳವಣೆಗೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.