ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 26, 2024

Ctv News Kannada

Chikkaballapura

ತೂಬಗೆರೆಯಲ್ಲಿ ಪಾರಂಪರಿಕ ಭೂತ ನೆರಿಗೆ ಆಚರಿಸಲು ಸಿದ್ಧತೆ

1 min read

ತೂಬಗೆರೆಯಲ್ಲಿ ಪಾರಂಪರಿಕ ಭೂತ ನೆರಿಗೆ ಆಚರಿಸಲು ಸಿದ್ಧತೆ

ಏಕಾದಶಿ ಮುಗಿದ ಮಾರನೇ ದಿನ ದ್ವಾದಶಿಯಂದು ಭೂತ ನೆರಿಗೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಆಚರಣೆ ಭೂತ ನೆರಿಗೆ ಜುಲೈ 18ರ ಮಧ್ಯಾಹ್ನ 3 ಗಂಟೆಗೆ ನಡೆಸಲು ಇಲ್ಲಿನ ಲಕ್ಷಿ ವೆಂಕಟರಮಣ ಸ್ವಾಮಿ ದೇವಾಲಯಲ್ಲಿ ಭೂತ ನೆರಿಗೆ ಆಚರಣಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಆಚರಣೆ ಭೂತ ನೆರಿಗೆ ಜುಲೈ 18 ರ ಮಧ್ಯಾಹ್ನ 3 ಗಂಟೆಗೆ ನಡೆಸಲು ಇಲ್ಲಿನ ಲಕ್ಷಿ ವೆಂಕಟರಮಣ ಸ್ವಾಮಿ ದೇವಾಲಯಲ್ಲಿ ಭೂತ ನೆರಿಗೆ ಆಚರಣಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಆಷಾಢ ಮಾಸದ ಏಕಾದಶಿಯಾದ ಮಾರನೇ ದಿನ ದ್ವಾದಶಿಯಂದು ಭೂತ ನೆರಿಗೆ ಹಬ್ಬ ಆಚರಿಸಲು ಸಜ್ಜಾಗಿದ್ದಾರೆ.

ಕರಿಯಣ್ಣ ಕೆಂಚಣ್ಣರ ವೇಷಧಾರಿಯಾದವರ ಮೇಲೆ ಭೂತ ಆಹ್ವಾನಿಸಿ, ಆರ್ಭಟಿಸುತ್ತವೆ. ಈ ವೇಳೆ, ಇವರ ಹಸಿವು ತಣಿಸುವ ಕೆಲಸ ಆಗುತ್ತದೆ. ವೇಷಧಾರಿಗಳು ಮನೆಗೆ ಬಂದರೆ ಮನೆಯಲ್ಲಿನ ದ್ವೆವ್ವ ಪಿಶಾಚಿಗಳು ಓಡಿ ಹೋಗುತ್ತವೆ ಎಂಬ ನಂಬಿಕೆಯೂ ಇದೆ. ಈ ಕುರಿತು ಮಾತನಾಡಿದ ಭೂತ ನೆರಿಗೆ ಆಚರಣಾ ಸಮಿತಿಯ ಚಿದಾನಂದ ಗುರೂಜಿ, ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ.

ಸುಮಾರು 500 ವರ್ಷಗಳ ಇತಿಹಾಸವಿರುವ ಈ ಭೂತನೆರಿಗೆ ಹಬ್ಬ ಇಂದಿಗೂ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿದೆ. ಭೂತನೆರಿಗೆ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಒಂದು ಕೈಯಲ್ಲಿ ಭೂತದ ಮುಖ ಹೋಲುವ ವರ್ತುಲಾಕಾರದ ನೆರಿಗೆ ಹಿಡಿದಿರುತ್ತಾರೆ. ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದಿರುತ್ತಾರೆ. ಲಕ್ಷ್ಮಿನರಸಿಂಹಸ್ವಾಮಿ ಭಕ್ತರು ಕೆಂಚಣ್ಣ-ಕರಿಯಣ್ಣರ ಮುಂದೆ ವಿಷ್ಣುವಿನ ನಾಮಸ್ಮರಣೆ ಮತ್ತು ಗುಣಗಾನ ಮಾಡುತ್ತಾ ಇವರನ್ನು ಕೆಣಕುತ್ತಾರೆ.

ವಿಷ್ಣುವಿನ ನಾಮಸ್ಮರಣೆ ಸಹಿಸದ ಈ ಕರಿಯಣ್ಣ ಮತ್ತು ಕೆಂಚಣ್ಣ ಭಕ್ತರ ಮೇಲೆ ಕೋಪಗೊಂಡು ಅವರೆಡೆಗೆ ನುಗ್ಗುತ್ತಾರೆ. ಕೋಪಗೊಂಡ ಕರಿಯಣ್ಣ ಕೆಂಚಣ್ಣರನ್ನು ಸಮಾಧಾನ ಮಾಡಲು ಇತರರು ಅವರ ಬಾಯಿಗೆ ಬಾಳೆ ಹಣ್ಣಿನ, ಹಲಸಿನ ಹಣ್ಣಿನಿಂದ ತಯಾರಿಸಿದ ರಸಾಯನವನ್ನು ತಿನ್ನಿಸುತ್ತಾರೆ. ಆವೇಶಕ್ಕೆ ಒಳಗಾದ ಈ ಭೂತಗಳು ಆ ಸಂದರ್ಭದಲ್ಲಿ ಏನು ಕೊಟ್ಟರೂ ತಿನ್ನುತ್ತಾರೆ ಎಂಬುದು ಜಾನಪದರ ನಂಬಿಕೆ. ಕೆಲವು ಗ್ರಾಮಗಳಲ್ಲಿ ನಡೆಯುವ ಈ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣರ ಬಾಯಿಗೆ ಕುರಿ-ಕೋಳಿಗಳನ್ನು ನೀಡುತ್ತಾರೆ. ಇವುಗಳ ರಕ್ತ ಹೀರುವುದರೊಂದಿಗೆ ಕರಿಯಣ್ಣ-ಕೆಂಚಣ್ಣ ಶಾಂತರಾಗುತಾರೆ ಎನ್ನುವುದು ಈ ಭಾಗದ ಭಕ್ತರ ನಂಬಿಕೆ ಆದ್ದರಿಂದ ತೂಬಗೆರೆ ಸುತ್ತ ಮುತ್ತಲಿನ ಸಕಲ ಆಸ್ತಿಕರು ಈ ಆಚರಣೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

About The Author

Leave a Reply

Your email address will not be published. Required fields are marked *