40 ಎಸೆತಗಳಲ್ಲೇ ಶತಕ, 8 ಸಿಕ್ಸರ್‌ಗಳೊಂದಿಗೆ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್‌ವೆಲ್!
1 min read
1 year ago
ಆಸ್ಟ್ರೇಲಿಯಾದ ದೈತ್ಯ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ನೂತನ ವಿಶ್ವ ದಾಖಲೆ ಬರೆದಿದ್ದಾರೆ. ಪ್ರಸಕ್ತ ಸಾಲಿನ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ 24ನೇ ಪಂದ್ಯದಲ್ಲಿ ಕ್ರಿಕೆಟ್ ಕೂಸು ನೆದರ್ಲೆಂಡ್ಸ್ ಎದುರು ಆರ್ಭಟಿಸಿದ ಮ್ಯಾಕ್ಸ್‌ವೆಲ್ ಕೇವಲ 40 ಎಸೆತಗಳಲ್ಲಿ ಶತಕ ಬಾರಿಸಿ ನೂತನ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ದಾಖಲಾದ ಅತ್ಯಂತ ವೇಗದ ಶತಕವಾಗಿದೆ. ಇದಕ್ಕೂ ಮುನ್ನ ಪ್ರಸಕ್ತ ಟೂರ್ನಿಯಲ್ಲೇ ದಕ್ಷಿಣ ಆಫ್ರಿಕಾದ ಏಡೆನ್ ಮಾಕ್ರಮ್, 49 ಎಸೆತಗಳಲ್ಲಿ ಶತಕ ಬಾರಿಸಿ ದಾಖಲೆ ನಿರ್ಮಿಸಿದ್ದರು.
ಸ್ಪೋಟಕ ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 40 ಎಸೆತರಗಳಲ್ಲಿ ಶತಕ ಬಾರಿಸಿದ್ದಾರೆ. ಪ್ರಸಕ್ತ ಸಾಲಿನ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ 24ನೇ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡದ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಆಸ್ಟ್ರೇಲಿಯಾದ ದೈತ್ಯ ಬ್ಯಾಟರ್ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಅತಿ ವೇಗದ ಶತಕ ಬಾರಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.