ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಕ್ಯಾಬ್‌ ಚಾಲಕರಿಗೆ ಸಿಹಿ ಸುದ್ದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಇಂದಿನಿಂದ ಇಂದಿರಾ ಕ್ಯಾಂಟೀನ್‌

1 min read
 ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟೀನ್‌ ಇಂದಿನಿಂದ(ಮಾರ್ಚ್ 11) ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾರಂಭಗೊಳ್ಳಲಿದೆ.ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪಿ-7 ಪಾರ್ಕಿಂಕ್‌ ಪ್ರದೇಶ ಟರ್ಮಿನಲ್‌ 1 ಮುಂಭಾಗದಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾರ್ಪಣೆಗೊಳಿಸಲಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುಷಿ ಹಂಚಿಕೊಂಡಿದ್ದು, ‘ನಗರ ಪ್ರದೇಶಗಳಲ್ಲಿ ಬಡಜನರಿಗೆ ಕೈಗೆಟುಕುವ ದರದಲ್ಲಿ ಆಹಾರ ಒದಗಿಸುವ ಜನಪರ ಕಾಳಜಿಯೊಂದಿಗೆ ನಾವು ಜಾರಿಗೆ ತಂದಿದ್ದ ಯೋಜನೆ ಇಂದಿರಾ ಕ್ಯಾಂಟೀನ್. ಈ ಯೋಜನೆ ಇಂದು ರಾಜ್ಯಾದ್ಯಂತ ನಿತ್ಯ ಲಕ್ಷಾಂತರ ಬಡಜನರ ಹಸಿವು ನೀಗಿಸುವ ತನ್ನ ಉದ್ದೇಶವನ್ನು ಅತ್ಯಂತ ಯಶಸ್ವಿಯಾಗಿ ಈಡೇರಿಸುತ್ತಿದೆ.”ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕ್ಯಾಬ್ ಚಾಲಕರು, ಕಾರ್ಮಿಕರು ಮತ್ತು ಸುತ್ತಲಿನ ಬಡಜನರ ಅನುಕೂಲಕ್ಕಾಗಿ ವಿಮಾನ ನಿಲ್ದಾಣದ ಆವರಣದಲ್ಲಿ ಇಂದು ನೂತನ ಇಂದಿರಾ ಕ್ಯಾಂಟೀನನ್ನು ಲೋಕಾರ್ಪಣೆಗೊಳಿಸುತ್ತಿದ್ದೇವೆ. ನಮ್ಮ ಈ ಇಂದಿರಾ ಕ್ಯಾಂಟೀನ್ ಮತ್ತಷ್ಟು ಹಸಿದ ಜೀವಗಳಿಗೆ ಘನತೆಯ ಆಹಾರ ನೀಡಲಿ ಎಂಬ ಹಾರೈಕೆ ನನ್ನದು’ ಎಂದಿದ್ದಾರೆ.ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಬೇಕು ಎನ್ನುವುದು ಕ್ಯಾಬ್ ಚಾಲಕರ ಸಂಘದ ಬಹುದಿನಗಳ ಬೇಡಿಕೆಯಾಗಿತ್ತು. ಕ್ಯಾಬ್ ಮತ್ತು ಆಟೋ ಚಾಲಕರ ಸಂಘದ ಒಕ್ಕೂಟವು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಲ್ಲಿಸಿದ 36 ಬೇಡಿಕೆಗಳಲ್ಲಿ ಇದು ಕೂಡ ಒಂದಾಗಿತ್ತು. ಹೀಗಾಗಿ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕಾಂಗ್ರೆಸ್‌ ಸರ್ಕಾರ ಈ ಭರವಸೆ ನೀಡಿದ್ದು, ಇದೀಗ ಸರ್ಕಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಇಂದಿರಾ ಕ್ಯಾಂಟೀನ್‌ನನ್ನು ಲೋಕಾರ್ಪಣೆಗೊಳಿಸುತ್ತಿದೆ.ವರದಿ ಪ್ರಕಾರ ಈ ಹೊಸ ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರತಿದಿನ ಸುಮಾರು 2,000 ಗ್ರಾಹಕರಿಗೆ ಸೇವೆ ಪಡೆಯಲಿದ್ದು, ಕ್ಯಾಬ್ ಚಾಲಕರು ಮತ್ತು ಬಿಎಂಟಿಸಿ ಬಸ್ ಚಾಲಕರಿಗೆ ಪ್ರಯೋಜನವಾಗಲಿದೆ.
* https://youtube.com/@ctvnewschikkaballapura?si=C-CJWuVfM-65JQMa
* LIVE: https://shashwatha.com/player.php?url=https://shashwatha.com/hls/shashwatha/ctvnews.m3u8
* CTV News : https://ctvnewskannada.com/
* Subscribe to Ctv News: https://www.youtube.com/channel/UCHtq26kA5D5anCbPD3HoURw
* Big News Big Update : https://ctvnewskannada.com/
* Download CTV Android App: https://play.google.com/store/apps/details?id=com.ctv.ctvnews
* Like us on Facebook: https://www.facebook.com/ctvnewschikkaballapura
* Follow us on Instagram: https://www.instagram.com/ctvnewschikkaballapura/
* Follow us on Twitter: https://twitter.com/ctvnewscbpura

About The Author

Leave a Reply

Your email address will not be published. Required fields are marked *