ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 23, 2024

Ctv News Kannada

Chikkaballapura

ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ

1 min read

ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ
ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಅಪರ ಜಿಲ್ಲಾಧಿಕಾರಿ
ದೈಹಿಕ, ಮಾನಸಿಕ ಒತ್ತಡಕ್ಕೆ ಕ್ರೀಡೆ ಸಹಕಾರಿ ಎಂದ ಎಡಿಸಿ

ಕ್ರೀಡೆ ದೈಹಿಕ ಆರೋಗ್ಯ ಕಾಪಾಡಿದರೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಾನಸಿಕ ಒತ್ತಡ ದೂರ ಮಾಡಲಿದೆ. ಹಾಗಾಗಿ ಪ್ರತಿಯೊಬ್ಬರೂ ಕ್ರೀಡಾಸಕ್ತಿ ಬೆಳೆಸಿಕೊಂಡು ಕ್ರೀಡೆಗಳಲ್ಲಿ ಭಾಗವಹಿಸಬೇಕು, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್ ತಿಪ್ಪೇಸ್ವಾಮಿ ಹೇಳಿದರು.

ನಗರದ ಸರ್‌ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಇಂದು 2023-24 ನೇ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ದೇ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಪರ ಜಿಲ್ಲಾಧಿಕಾರಿ ಡಾ. ಎನ್ ತಿಪ್ಪೇಸ್ವಾಮಿ, ಕ್ರೀಡೆ ದೈಹಿಕ ಆರೋಗ್ಯ ಕಾಪಾಡಿದರೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಾನಸಿಕ ಒತ್ತಡ ದೂರ ಮಾಡಲಿದೆ. ಹಾಗಾಗಿ ಪ್ರತಿಯೊಬ್ಬರೂ ಕ್ರೀಡಾಸಕ್ತಿ ಬೆಳೆಸಿಕೊಂಡು ಕ್ರೀಡೆಗಳಲ್ಲಿ ಭಾಗವಹಿಸಬೇಕು, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು.

ಪ್ರತಿಯೊಬ್ಬರಲ್ಲೂ ಕ್ರೀಡಾ ಮನೋಭಾವನೆ ಇರುತ್ತದೆ. ಅದು ಗುಣಾತ್ಮಕವಾದ ಕ್ರೀಡಾಸ್ಪರ್ಧೆ ಇದ್ದರೆ ಒಳಿತು. ಜಿಲ್ಲೆಯಲ್ಲಿ ಸುಮಾರು 18 ಸಾವಿರಕ್ಕೂ ಅಧಿಕ ಮಂದಿ ಸರ್ಕಾರಿ ನೌಕರರಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘ ಚಿಕ್ಕಬಳ್ಳಾಪುರ ಜಿಲ್ಲಾ ಘಟಕ ಎಲ್ಲ ಸರ್ಕಾರಿ ನೌಕರರ ಒಳತಿಗಾಗಿ ಕಾರ್ಯಕ್ರಮ ರೂಪಿಸಿದೆ. ಇಂದಿನ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಪಾಡಿಕೊಳ್ಳಲು ಸದಾವಕಾಶ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಜಿ ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಡಾ. ಗಾಯಿತ್ರಿ, ಸರ್ಕಾರಿ ನೌಕರ ಸಂಘದ ವಿವಿಧ ತಾಲೂಕುಗಳ ಅಧ್ಯಕ್ಷರಾದ ಕೆ.ಎನ್ ಸುಬ್ಬರಡ್ಡಿ, ಟಿ.ವಿ ನಾರಾಯಣಸ್ವಾಮಿ, ಡಾ. ಮುನಿರೆಡ್ಡಿ, ಮಧುಸೂದನ್, ಸತ್ಯನಾರಾಯಣರೆಡ್ಡಿ, ಕೆ.ಆರ್ ಶಿವಶಂಕರ್, ಶಿವಕುಮಾರ್, ಗಂಗಾಧರ್, ಅಶೋಕ್ ಕುಮಾರ್, ಬಸವರಾಜ್, ಕೆ.ಜೆ ಶ್ರೀನಿವಾಸ್, ನಾರಾಯಣಸ್ವಾಮಿ, ಬಾಲರಾಜು ಇದ್ದರು.

About The Author

Leave a Reply

Your email address will not be published. Required fields are marked *