ಜಿಎಸ್‌ಟಿ ವಂಚನೆ: ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ 1 ಲಕ್ಷ ಕೋಟಿ ರೂ. ಶೋಕಾಸ್ ನೋಟಿಸ್!
1 min readಜಿಎಸ್‌ಟಿ ಅಧಿಕಾರಿಗಳು ಇಲ್ಲಿಯವರೆಗೆ ತೆರಿಗೆ ವಂಚನೆಗಾಗಿ ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ 1 ಲಕ್ಷ ಕೋಟಿ ರೂ. ಮೌಲ್ಯದ ಶೋಕಾಸ್ ನೋಟಿಸ್‌ಗಳನ್ನು ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಅಕ್ಟೋಬರ್ 1 ರಿಂದ ವಿದೇಶಿ ಗೇಮಿಂಗ್ ಕಂಪನಿಗಳು ಭಾರತದಲ್ಲಿ ನೋಂದಾಯಿಸಿದ ಬಗ್ಗೆ ಯಾವುದೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ
ಕೇಂದ್ರ ಸರ್ಕಾರ ಜಿಎಸ್‌ಟಿ ಕಾನೂನಿಗೆ ತಿದ್ದುಪಡಿ ತಂದಿದ್ದು, ವಿದೇಶಿ ಆನ್‌ಲೈನ್ ಗೇಮಿಂಗ್ ಕಂಪನಿಗಳು ಅಕ್ಟೋಬರ್ 1 ರಿಂದ ಭಾರತದಲ್ಲಿ ನೋಂದಾಯಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್‌ಗಳಿಗೆ ಶೇಕಡಾ 28 ರಷ್ಟು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ವಿಧಿಸಲಾಗುವುದು ಎಂದು ಜಿಎಸ್‌ಟಿ ಕೌನ್ಸಿಲ್ ಕಳೆದ ಆಗಸ್ಟ್‌ನಲ್ಲಿ ಸ್ಪಷ್ಟಪಡಿಸಿತ್ತು.
ಡ್ರೀಮ್11 ನಂತಹ ಆನ್ಲೈನ್ ಗೇಮಿಂಗ್ ಕಂಪನಿಗಳು, ಡೆಲ್ಟಾ ಕಾರ್ಟ್ ಇತ್ಯಾದಿ ಕ್ಯಾಸಿನೋ ಆಪರೇಟಿಂಗ್ ಕಂಪನಿಗಳಿಗೆ ಇದೇ ಸೆಪ್ಟೆಂಬರ್ ತಿಂಗಳಲ್ಲಿ ಜಿಎಸ್‌ಟಿ ಇಲಾಖೆಯಿಂದ ಶೋಕಾಸ್ ನೋಟೀಸ್ ಜಾರಿ ಮಾಡಲಾಗಿದೆ.