ಧಾರ್ಮಿಕ ಕಾರ್ಯಗಳಿಂದ ಸಾಮರಸ್ಯ ಸಾಧ್ಯ
1 min readಧಾರ್ಮಿಕ ಕಾರ್ಯಗಳಿಂದ ಸಾಮರಸ್ಯ ಸಾಧ್ಯ
ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಸಂದೀಪ್ ರೆಡ್ಡಿ
ಧಾರ್ಮಿಕ ಸೇವಾ ಕಾರ್ಯಗಳಿಂದ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯ ಸಾಧ್ಯ ಎಂದು ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ ತಿಳಿಸಿದರು,
ಚಿಕ್ಕಬಳ್ಳಾಪುರ ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಏರ್ಪಡಿ ಸಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಭಗತ್ ಸಿಂಗ್ ಚಾಪಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್‌ರೆಡ್ಡಿ, ಬೆಟ್ಟದಷ್ಟು ಪರಿಶ್ರಮ ಅಪಾರ ಆತ್ಮವಿಶ್ವಾಸ, ಬೆವರು ಸುರಿಸಿ ದುಡಿಯುವ ಕೆಲಸ ಮಾಡಿದರೂ ಗುಲಗಂಜಿ ಅಷ್ಟಾದರೂ ಭಗವಂತನ ಆಶೀರ್ವಾದ ಹರಕೆ ಹಾರೈಕೆ ಇದ್ದರೆ ಎಂತಹ ಉದ್ಯಮ ಕೆಲಸವಾದರೂ ಯಶಸ್ಸು ಸಾಧ್ಯ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ಗ್ರಾಮೀಣ ಪ್ರದೇಶಗಳಲ್ಲಿ ದೈವ ಕಾರ್ಯಗಳ ಮೂಲಕ ಸಾಮಾಜಿಕ ಸೇವಾಕಾರ್ಯಗಳ ಮೂಲಕ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಲ್ಲಿ ಆರ್ಥಿಕ ಚೈತನ್ಯ ತುಂಬುವ ಕೆಲಸ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ. ನಗರದಲ್ಲಿ ಏರ್ಪಡಿಸಿರುವ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮಕ್ಕೆ ಆಹ್ವಾನಿಸಿ, ಮಾತನಾಡಲು ಅವಕಾಶ ಮಾಡಿಕೊಟ್ಟ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಹೆಗ್ಗಡೆಯವರಿಗೆ ಅಭಿನಂದನೆ ತಿಳಿಸಿದರು.
ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರ ಕೃಪಾ ಆಶೀರ್ವಾದದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ರಾಜ್ಯದಲ್ಲಿ ಮಹಿಳಾ ಸಬಲೀಕರಣಕ್ಕೆ ಅಹಿರ್ನಿಶಿ ಶ್ರಮಿಸುತ್ತಿದೆ. ಈ ಸಂಸ್ಥೆ ಮೂಲಕ ಹಳ್ಳಿ ಹಳ್ಳಿಗಳಲ್ಲಿ ಪ್ರಗತಿ ಬಂದು ಸ್ವಸಹಾಯ ಸಂಘಗಳ ಸ್ಥಾಪನೆ ಮಾಡಿ ಮಹಿಳೆಯರಲ್ಲಿ ಆರ್ಥಿಕ ಶಿಸ್ತನ್ನು ತರಲು ಶ್ರಮಿಸುತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಸಾಮರಸ್ಯ ಐಕ್ಯತೆ ಶಾಂತಿ ಮೂಡಿಸಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
ಹಳ್ಳಿಗಾಡಿನಲ್ಲಿ ಬಡವರು, ಕೂಲಿ ಕಾರ್ಮಿಕರು, ದೀನ ದಲಿತರಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆಯನ್ನು ನಡೆಸಬೇಕೆಂಬ ಆಸೆ ಇರುತ್ತದೆ. ಆದರೆ ಎಲ್ಲರಿಂದಲೂ ಇದು ಸಾಧ್ಯವಾಗುವುದಿಲ್ಲ. ಹೀಗಾಗಿ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಇರುವ ಸರ್ವರನ್ನು ಒಂದೆಡೆ ಒಗ್ಗೂಡಿಸಿ ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮವನ್ನು ಏರ್ಪಡಿಸುವ ಮೂಲಕ ಅವರ ಮನೋರಥ ಈಡೇರುವಂತೆ ಮಾಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಾರ್ಯ ಶ್ಲಾಘನೀಯ. ಇಂತಹ ಸತ್ಕಾರ್ಯಕ್ಕೆ ಆಹ್ವಾನಿಸಿರುವುದು ಪುಣ್ಯ ಎಂದರು. ಕಾರ್ಯಕ್ರಮದಲ್ಲಿ ಜಿ¯್ಲÁ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಆರ್. ಜಯರಾಮ್, ರಾಜ್ಯ ರೈತ ಸಂಘದ ಸುಷ್ಮಾ ಶ್ರೀನಿವಾಸ್ ಇದ್ದರು