ಬೆಂಗಳೂರಿನಲ್ಲಿ 3 ದಿನ ಭಾರಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ
1 min readಭಾರೀ ಮಳೆಗೆ ತತ್ತರಿಸಿರುವ ಬೆಂಗಳೂರಿನ ಜನತೆಗೆ ಬಿಗ್ ಶಾಕ್, ಇಂದಿನಿಂದ ಮೂರು ದಿನ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹಮಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಗುಡುಗು ಗಾಳಿ ಸಹಿತ ಮೂರು ದಿನಗಳ ಕಾಲ ಭಾರಿ ಮಳೆಯಾಗುತ್ತದೆ ಎಂದು ಹೇಳಿದೆ. ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ.
ಇನ್ನೂ ರಾಜ್ಯದಲ್ಲಿ 3 ದಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.