ಇನ್ಮುಂದೆ ‘ಕೌನ್ಸೆಲಿಂಗ್’ ಮೂಲಕವೇ ಸಬ್ ರಿಜಿಸ್ಟ್ರಾರ್ ಗಳ ವರ್ಗಾವಣೆ ; ರಾಜ್ಯ ಸರ್ಕಾರ
1 min readಇನ್ಮುಂದೆ ಕೌನ್ಸೆಲಿಂಗ್ ಮೂಲಕವೇ ಸಬ್ ರಿಜಿಸ್ಟ್ರಾರ್ ಗಳ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತರುವ ಉದ್ದೇಶದಿಂದ ಸಬ್ರಿಜಿಸ್ಟ್ರಾರ್ ಗಳ ವರ್ಗಾವಣೆಗೆ ಕೌನ್ಸೆಲಿಂಗ್ ಪದ್ಧತಿ ಅಳವಡಿಕೆ ಮಾಡಲು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಚೆಗೆ ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾ ರಿಗಳು ಸೇರಿ ವಿವಿಧ ಹುದ್ದೆಗಳ ವರ್ಗಾ ವಣೆಗೆ ಕೌನ್ಸೆಲಿಂಗ್ ಪದ್ಧತಿ ಜಾರಿಗೊಳಿ ಸಲಾಗಿದೆ. ಈಗ ನೋಂದಣಿ, ಮುದ್ರಾಂಕ ಇಲಾಖೆ ಯಲ್ಲೂ ವರ್ಗಾವಣೆಗೆ ಕೌನ್ಸೆಲಿಂಗ್ ಪದ್ಧತಿ ಪರಿಚಯಿಸಲು ನಿರ್ಧರಿಸಿದೆ.
ಈ ಸಂಬಂಧ ಗುರು ವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಒಟ್ಟು 257 ಉಪನೋಂದಣಾಧಿಕಾರಿಗಳ ಕಚೇರಿಗಳಿದ್ದು ಅವುಗಳಲ್ಲಿ 51 ಕಚೇರಿಗಳು ಬೆಂಗಳೂರು ನಗರ ಮತ್ತು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಲ್ಲಿವೆ. ಅಂದರೆ ಇವು ಬಿಎಂಆರ್ಡಿಎ ವ್ಯಾಪ್ತಿಯಲ್ಲಿ ಬರುತ್ತವೆ. ಇಲ್ಲಿನ ಅಧಿಕಾರಿಗಳಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಕಂದಾಯ ಇಲಾಖೆ ಸಂಪುಟದ ಮುಂದೆ ಪ್ರಸ್ತಾಪಿಸಿತ್ತು.