ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಹೀಗಿದೆ ಸಿಎಂ ಸಿದ್ಧರಾಮಯ್ಯ ನಡೆಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

1 min read

• ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ.

ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, 99.75 % ಸಾಧನೆಯಾಗಿದೆ.

• ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು – 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ. ಒದಗಿಸಲಾಗಿದೆ. ಎಸ್‌.ಎಸ್‌.ಎಲ್‌.ಸಿ. ಯಲ್ಲಿ ಶೇ. 77 ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಲು ಸೂಚನೆ ನೀಡಿದರು.
• 2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
• ಹಾಸ್ಟೆಲ್‌ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್‌ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
• ಕೆಲವು ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ. ಮಕ್ಕಳು ರಾತ್ರಿ ಊಟವಾದ ನಂತರ ಮನೆಗೆ ಕರೆದುಕೊಂಡು ಹೋಗುತ್ತಾರೆ. ಚಿಕ್ಕ ಮಕ್ಕಳು ಎಂದು ಮನೆಗೆ ಕರೆದುಕೊಂಡು ಹೋಗುತ್ತಾರೆ. ಎಲ್ಲ ಸೌಲಭ್ಯ ಇದ್ದೂ, ಯಾಕೆ ಮನೆಗೆ ಕರೆದುಕೊಂಡು ಹೋಗುತ್ತಾರೆ. ಈ ಕುರಿತು ಪರಾಮರ್ಶೆ ನಡೆಸಲು ಸೂಚಿಸಿದರು. ಆದಿವಾಸಿ ಬುಡಕಟ್ಟು ವಸತಿ ಶಾಲೆಗಳ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸೂಚಿಸಿದರು. ಇದಕ್ಕಾಗಿ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲು ಆರ್ಥಿಕ ಇಲಾಖೆಗೆ ಸೂಚಿಸಿದರು. ಈ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮಕ್ಕಳು ಇತರ ವಿದ್ಯಾರ್ಥಿಗಳೊಂದಿಗೆ ಸಮರ್ಥವಾಗಿ ಸ್ಪರ್ಧಿಸುವಂತಾಗಬೇಕು ಎಂದು ಸೂಚಿಸಿದರು. ಸ್ಮಾರ್ಟ್‌ ಕ್ಲಾಸ್‌ಗಳ ವ್ಯವಸ್ಥೆ ಸದ್ಬಳಕೆ ಮಾಡುವಂತೆ ಸೂಚಿಸಿದರು.
• ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದೆ ಇದ್ದರೂ, ಹಾಸಿಗೆ, ಬೆಡ್‌ಶೀಟ್‌ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸುವುದನ್ನು ಸಹಿಸಲಾಗದು. ಅನಗತ್ಯವಾಗಿ 4 ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್‌ ಕರೆದು ಖರೀದಿ, ಸೇವೆಗಳನ್ನು ಪಡೆಯಬೇಕೆಂದು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
• ನೀವು ಬಡವರು, ದಲಿತರ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು unfit ಎಂದು ಎಚ್ಚರಿಕೆ ನೀಡಿದರು.
• ವಸತಿ ಶಾಲೆಗಳು ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕು. ಕೇವಲ ಬುದ್ಧಿವಂತರನ್ನು ಇನ್ನಷ್ಟು ಬುದ್ಧಿವಂತರಾಗಿಸುವುದು ಮಾತ್ರವಲ್ಲ; ಕಲಿಕೆಯಲ್ಲಿ ಹಿಂದುಳಿದವರನ್ನೂ ಬುದ್ಧಿವಂತರಾಗಿಸಬೇಕು ಎಂದು ತಿಳಿಸಿದರು.
• 1994-95 ರಲ್ಲಿ ಹಣಕಾಸು ಸಚಿವನಾಗಿದ್ದಾಗ, ದಲಿತ ಸಂಘರ್ಷ ಸಮಿತಿಯವರು ಸಾರಾಯಿ ಬೇಡ; ವಸತಿ ಶಾಲೆಗಳು ಬೇಕು ಎಂಬ ಬೇಡಿಕೆಯಿಟ್ಟಿದ್ದರು. ಅವಕಾಶ ವಂಚಿತರಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ ಎಂದು ಸ್ಮರಿಸಿದರು.
• ಪರಿಶಿಷ್ಟ ಪಂಗಡದ ವಸತಿ ಶಾಲೆಗಳಲ್ಲಿ 108 ಸ್ವಂತ ಕಟ್ಟಡ ಹೊಂದಿದ್ದು, 30 ಬಾಡಿಗೆ ಕಟ್ಟಡಗಳಲ್ಲಿ ಹಾಗೂ 6 ಬಾಡಿಗೆ ರಹಿತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಖುದ್ದಾಗಿ ಅನುಸರಣೆ ಮಾಡುವಂತೆ ಸೂಚಿಸಿದರು.
• ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಇಲಾಖೆಯ ಸೂಚನೆಯಂತೆ 2023-24 ರಲ್ಲಿ ಲಭ್ಯವಿದ್ದ 263 ಕೋಟಿ ರೂ. ಖಜಾನೆಗೆ ಜಮಾ ಮಾಡಲಾಗಿದೆ. ಯಾವುದೇ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಾಗಿಲ್ಲ. ಪ್ರತಿ ವರ್ಷ ಮಾಡಬೇಕಲ್ಲ. ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದಾಗ, ಶಾಸಕರು ಫಲಾನುಭವಿಗಳ ಪಟ್ಟಿ ನೀಡಿಲ್ಲ. ಆಯ್ಕೆ ಮಾಡಬೇಕಾದ ಫಲಾನುಭವಿಗಳ ಸಂಖ್ಯೆ ಅತ್ಯಂತ ಕಡಿಮೆ ಇರುವುದರಿಂದ ಸಂದಿಗ್ಧ ಪರಿಸ್ಥಿತಿ ಎದುರಾಗುವ ಹಿನ್ನೆಲೆಯಲ್ಲಿ ಶಾಸಕರು ಆಯ್ಕೆ ಮಾಡಲು ಆಸಕ್ತಿ ತೋರಿಸುತ್ತಿಲ್ಲ ಎಂದು ತಿಳಿಸಿದರು. ಫಲಾನುಭವಿಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
• 22 ಪ್ರಕರಣಗಳಲ್ಲಿ ಸಿಂಧುತ್ವ ಪ್ರಮಾಣ ಪತ್ರ ಹಲವು ವರ್ಷಗಳಿಂದ ಇತ್ಯರ್ಥಕ್ಕೆ ಬಾಕಿ ಇದ್ದು, ಇವುಗಳಲ್ಲಿ ಎಲ್ಲ ಪ್ರಕರಣಗಳನ್ನು ಸಿ.ಆರ್.ಇ. ಸೆಲ್‌ಗೆ ಕಳುಹಿಸದಂತೆ, ಗೊಂದಲವಿದ್ದಲ್ಲಿ ಮಾತ್ರ ಕಳುಹಿಸುವಂತೆ ಸುತ್ತೋಲೆ ಹೊರಡಿಸಲು ಸೂಚಿಸಿದರು.
• ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಹಿರಿಯ ಕೆ.ಎ.ಎಸ್. ಅಧಿಕಾರಿಯನ್ನು ನಿರ್ದೇಶಕರಾಗಿ ನೇಮಕ ಮಾಡುವುದು ಸೂಕ್ತ ಎಂದು ಅಪರ ಮುಖ್ಯ ಕಾರ್ಯದರ್ಶಿಗಳು ಅಭಿಪ್ರಾಯಪಟ್ಟರು. ಹಿರಿಯ ಕೆ.ಎ.ಎಸ್. ಅಧಿಕಾರಿಯನ್ನು ನಿರ್ದೇಶಕರನ್ನಾಗಿ ನೇಮಕ ಮಾಡಿ, ಮಾನವಶಾಸ್ತ್ರಜ್ಞರನ್ನು ಅವರ ಅಧೀನದಲ್ಲಿ ನೇಮಕಗೊಳಿಸುವ ಬಗ್ಗೆ ಪರಿಶೀಲನೆ ನಡೆಸಿ, ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಕೇರಳ ಮಾದರಿಯಲ್ಲಿ ಆಡಳಿತ ಮತ್ತು ಸಂಶೋಧನಾ ವಿಭಾಗಗಳನ್ನು ಪ್ರತ್ಯೇಕವಾಗಿ ರಚಿಸುವ ಬಗ್ಗೆ ಅಥವಾ ಒಡಿಶಾ ರಾಜ್ಯದ ಮಾದರಿ ಏನು ಎಂದು ಮಾಹಿತಿ ತರಿಸಿ, ಪರಿಶೀಲಿಸುವಂತೆ ಸೂಚಿಸಿದರು.
• ಆಶ್ರಮ ಶಾಲೆಗಳಲ್ಲಿ ಆಯಾ ಸಮುದಾಯದವರನ್ನೇ ಕೇರ್‌ ಟೇಕರ್‌ ಆಗಿ ನೇಮಕ ಮಾಡಿದರೆ, ಈ ಶಾಲೆಗಳು ಸಮುದಾಯಗಳಿಗೆ ಹತ್ತಿರವಾಗುವ ಸಾಧ್ಯತೆ ಇದೆ ಎಂದು ಬುಡಕಟ್ಟು ಸಂಶೋಧನಾ ಸಂಸ್ಥೆಯ ಸಂಶೋಧನಾ ಅಧಿಕಾರಿ, ಸ್ವತಃ ಇರುಳಿಗ ಬುಡಕಟ್ಟು ಸಮುದಾಯದವರಾದ ಡಾ. ಕೆ.ವಿ. ಕೃಷ್ಣಮೂರ್ತಿ ಅವರು ವಿವರಿಸಿದರು.
• ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪಿಸುವಂತೆ ಸೂಚಿಸಿದರು.

ಈ ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

#ctvnews #ctvNews #ctv

About The Author

Leave a Reply

Your email address will not be published. Required fields are marked *