ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 23, 2024

Ctv News Kannada

Chikkaballapura

ಎಪಿಎಂಸಿಯಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

1 min read

ಎಪಿಎಂಸಿಯಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಶಾಸಕ ದರ್ಶನ್ ಧ್ರುವನಾರಾಯಣ್‌ರಿಂದ ಚಾಲನೆ

ನಂಜನಗೂಡು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಸುಮಾರು ೨.೫೧ ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಇಂದು ಗುದ್ದಲಿ ಪೂಜೆ ನೆರವೇರಿಸಿದರು.

ನಂಜನಗೂಡು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಸುಮಾರು ೨.೫೧ ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಇಂದು ಗುದ್ದಲಿ ಪೂಜೆ ನೆರವೇರಿಸಿದರು. ೨೦೨೩-೨೪ನೇ ಸಾಲಿನ ಆರ್‌ಐಡಿಎಫ್ ಯೋಜನೆಯಡಿ ನಂಜನಗೂಡು ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು ೨.೫೧ ಕೋಟಿ ರೂ.ವೆಚ್ಚದಲ್ಲಿ ಮುಚ್ಚಿದ ಹರಾಜು ಕಟ್ಟೆ, ಕಾಂಕ್ರೀಟ್ ರಸ್ತೆ, ಒಳಚರಂಡಿ ನಿರ್ಮಾಣ ಹಾಗೂ ಜಾನುವಾರು ಮಾರುಕಟ್ಟೆ ಉಪ ಪ್ರಾಂಗಣದಲ್ಲಿ ಮುಚ್ಚಿದ ಹರಾಜು ಕಟ್ಟೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.

ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಕೃಷಿ ಮಾರುಕಟ್ಟೆ ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಎಸ್ ಪಾಟೀಲ್ ಅವರು ಮೂರು ಕೋಟಿ ಅನುದಾನ ನೀಡಿz್ದÁರೆ. ಎಪಿಎಂಸಿಯಲ್ಲಿ ಮೂಲ ಸೌಕರ್ಯ ಕಲ್ಪಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ನಂಜನಗೂಡಿನ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಹಳೆ ಕೃಷಿ ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಸಿಸಿ ರಸ್ತೆ ಒಳಚರಂಡಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ನಡೆಸಲು ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು.

ರೈತರಿಗೆ ಯಾವುದೇ ರಜೆ ಇಲ್ಲ, ಪ್ರತಿದಿನ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯನಿರ್ವಹಿಸಬೇಕು. ಮುದ್ದಹಳ್ಳಿ ಮತ್ತು ಸಿಂಧುವಳ್ಳಿಪುರ ಬಳಿ ಮಾರುಕಟ್ಟೆ ಸ್ಥಾಪನೆ ಮಾಡುವಂತೆ ರೈತರು ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ಮಾರುಕಟ್ಟೆ ಸ್ಥಾಪನೆಗೆ ಮುಂದಾಗುತ್ತೇವೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು. ಗುಣಮಟ್ಟದಿಂದ ಕಾಮಗಾರಿಯನ್ನು ನಡೆಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದ್ದುಮಾದ ಶೆಟ್ಟಿ, ಕೆ ಆರ್ ಮಾದಪ್ಪ ಕೆಂಡಗಣಪ್ಪ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಬಿ.ಮಹೇಶ್ ಇದ್ದರು.

About The Author

Leave a Reply

Your email address will not be published. Required fields are marked *