ಸರ್ಕಾರಿ ಆದರ್ಶ ಶಾಲೆಯಲ್ಲಿ ಸನ್ಮಾನ ಕಾರ್ಯಕ್ರಮ
1 min readಸರ್ಕಾರಿ ಆದರ್ಶ ಶಾಲೆಯಲ್ಲಿ ಸನ್ಮಾನ ಕಾರ್ಯಕ್ರಮ
ಜಮೀಯತ್ ಉಲ್ಮ ಸಂಘಟನೆಯಿoದ ಸನ್ಮಾನ
ಬಾಗೆಪಲ್ಲಿ ತಾಲೂಕಿನ ಗಡಿದಂ ಬಳಿ ಇರುವ ಸರ್ಕಾರಿ ಆದರ್ಶ ಶಾಲೆಯಲ್ಲಿ ಜಮೀಯತ್ ಉಲ್ಮ ಸಂಘಟನೆಯಿoದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರ್ಶ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 10ನೇ ತರಗತಿಯಲ್ಲಿ ಅತ್ಯುತ್ತಮ ಅಂಕ ಪಡೆದಿರುವ ವಿದ್ಯಾರ್ಥಿ ಅಖಿಲ್.ಬಿ.ಆರ್ ಮತ್ತು ವಿಷ್ಣುಪ್ರಿಯ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.
ಬಾಗೆಪಲ್ಲಿ ತಾಲೂಕಿನ ಗಡಿದಂ ಬಳಿ ಇರುವ ಸರ್ಕಾರಿ ಆದರ್ಶ ಶಾಲೆಯಲ್ಲಿ ಜಮೀಯತ್ ಉಲ್ಮ ಸಂಘಟನೆಯಿoದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರ್ಶ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 10ನೇ ತರಗತಿಯಲ್ಲಿ ಅತ್ಯುತ್ತಮ ಅಂಕ ಪಡೆದಿರುವ ವಿದ್ಯಾರ್ಥಿ ಅಖಿಲ್.ಬಿ.ಆರ್ ಮತ್ತು ವಿಷ್ಣುಪ್ರಿಯ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ಈ ಜಮಿಯತ್ ಉಲ್ಮಾ ಸಂಘಟನೆಯ ಉದ್ದೇಶ ಎಲ್ಲಾ ಜನಾಂಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುತ್ತದೆ ಎಂಬುದಾಗಿದೆ.
ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಬೇಕು, ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಪ್ರೇರಣೆಯಾಗಿ ಶಿಕ್ಷಣದಲ್ಲಿ ಅತ್ಯುತ್ತಮ ಅಂಕ ಪಡೆದು ಉನ್ನತ ಸ್ಥಾನಕ್ಕೆ ಹೋಗಬೇಕು ಆದ್ದರಿಂದ ಜಮಿಯತ್ ಉಲ್ಮಾ ಸಂಘಟನೆಯಿoದ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲಾ ಶಾಲೆಗಳಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಆಯಾ ಶಾಲೆಗಳಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಂತ ಹಂತವಾಗಿ ಮಾಡಲಾಗುತ್ತಿದೆ ಎಂದು ಸಂಘಟಕರು ಹೇಳಿದರು.
ಶಾಲೆಯ ಮುಖ್ಯ ಶಿಕ್ಷಕ ಎನ್.ವಿ. ಬೈರೆಡ್ಡಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದಿರುವ ಮಕ್ಕಳು ಖಾಸಗಿ ಶಾಲೆಗಳಲ್ಲಿ ಓದಿರುವ ಮಕ್ಕಳಿಗೆ ಸಮಾನವಾಗಿ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ, ಮಕ್ಕಳ ಕಾಳಜಿಯಿಂದ ಉತ್ತಮ ಅಂಕ ಪಡೆಯಲು ಸಾಧ್ಯ. ಇಂತಹ ವಿದ್ಯಾರ್ಥಿಗಳಿಗೆ ಜಮೀಯತ್ ಉಲ್ಮ ಸಂಘಟನೆ ಯಾವುದೇ ಧರ್ಮ ಜಾತಿ ಎನ್ನದೆ ಅತ್ಯುತ್ತಮ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಸನ್ಮಾನದಿಂದ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಜಮೀಯತ್ ಉಲ್ಮ ಸಂಘಟನೆ ಉತ್ತಮ ಕಾರ್ಯಕ್ರಮಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.
ನಂತರ ಕರವೇ ಸ್ವಾಭಿಮಾನಿ ಬಣ ಉಪಾಧ್ಯಕ್ಷ ಜಬಿವುಲ ಮಾತನಾಡಿ ವಿದ್ಯಾರ್ಥಿಗಳು ಇತ್ತೀಚಿಗೆ ಕೆಟ್ಟ ಚಟುವಟಿಕೆಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ, ಕೆಟ್ಟ ಚಟುವಟಿಕೆಗಳಿಂದ ದೂರ ಇದ್ದು, ಓದಿದರೆ ಮಾತ್ರ ಪ್ರತಿಫಲ ಸಿಗುತ್ತದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂದು ಹೇಳಬಹುದು. ಹಾಗೆ ಮಕ್ಕಳಿಗೆ ಆದರ್ಶ ವ್ಯಕ್ತಿಗಳಾದ ಅಂಬೇಡ್ಕರ್ ,ಎಪಿಜೆ ಅಬ್ದುಲ್ ಕಲಾಂ ಸ್ಪೂರ್ತಿಯನ್ನು ಪಡೆದು ಉನ್ನತ ಸ್ಥಾನಕ್ಕೆ ಹೋಗಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮೌಲಾನ ರಿಜ್ವಾನ್ ಅಹಮದ್, ಹಾಫೀಸ್ ಕಲೀಮುಲ್ಲಾ, ಜಬೀವುಲ್ಲಾ, ಆಸಿಬುಲ್ಲ ಹಾಗೂ ಶಾಲಾ ಶಿಕ್ಷಕರು ಇದ್ದರು .
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday