ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಬೆಳ್ಳಂಬೆಳಗ್ಗೆ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ

1 min read

ಬೆಳ್ಳಂಬೆಳಗ್ಗೆ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ
ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಮುಂದೆ ಧರಣಿ
ಕಳಪೆ ಆಹಾರ ವಿತರಿಸುತ್ತಿರುವ ಆರೋಪ

ತಮಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಬೆಳ್ಳಂ ಬೆಳಗ್ಗೆ ಅಂಬೇಡ್ಕರ್ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಬಾಗೇಪಲ್ಲಿ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂದೆ ಪ್ರತಿಭ0ಟನೆ ನಡೆಸಿದರು.

ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ಬಾಲಕರ ಹಾಸ್ಟೆಲ್ ನಲ್ಲಿ ಕಳೆದ ಹಲವು ದಿನಗಳಿಂದ ಶುಚಿ ಮತ್ತು ರುಚಿಯಾದ ಆಹಾರ ನೀಡದೆ, ಬೇಕಾಬಿಟ್ಟಿ ಅಡುಗೆ ಮಾಡುತ್ತಿದ್ದಾರೆ. ಹಲವು ಬಾರಿ ಸಂಬ0ಧ0ಪಟ್ಟವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದರು. ಇವರ ಪ್ರತಿಭಟನೆಗೆ ದಸಂಸ, ಎಸ್‌ಎಫ್‌ಐ, ಸಿಪಿಎಂ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಬೆಂಬಲ ವ್ಯಕ್ತ ಪಡಿಸಿದರು.

ಈ ವೇಳೆ ಸಿಪಿಎಂ ಹಿರಿಯ ಮುಖಂಡ ಚನ್ನರಾಯಪ್ಪ ಮಾತನಾಡಿ, ಗಡಿಭಾಗದ ದಲಿತ, ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನುಕೂಲಕ್ಕೆ ಸರಕಾರ ಹಲವು ಸೌಲಭ್ಯಗಳನ್ನು ಒದಗಿಸಿದೆ. ಅವುಗಳ ಸದ್ಬಳಕೆಗಿಂತ ದುರ್ಬಳಕೆಯೇ ಹೆಚ್ಚಾಗುತ್ತಿರುವುದು ಖಂಡನೀಯ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೆನು ಪ್ರಕಾರ ಗುಣಮಟ್ಟದ ಆಹಾರ ನೀಡಬೇಕು. ಆದರೆ ಕಾಟಾಚಾರವೆಂಬ0ತೆ ಇಲ್ಲಿನ ಹಾಸ್ಟೆಲ್ ನಲ್ಲಿ ಅಡುಗೆ ಮಾಡುತ್ತಾರೆ. ಮನುಷ್ಯರು ತಿನ್ನಲಂತೂ ಸಾಧ್ಯವಾಗದಷ್ಟು ಅದ್ವಾನವಾಗಿ ಮಾಡುತ್ತಾರೆ. ಇಂತಹ ನಿರ್ಲಕ್ಷದ ವಿರುದ್ಧ ಶೀಘ್ರದಲ್ಲೆ ದಲಿತ, ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಬೇಜವಬ್ದಾರಿ ಮತ್ತು ಆಡಳಿತ ಯಂತ್ರಾAಗದ ಬೇಜವ್ದಾರಿತನದಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಿಗಬೇಕಾದ ಆಹಾರ ಧಾನ್ಯ ಕಾಳಸಂತೆಯಲ್ಲಿ ದಂಧೆಕೋರರ ಪಾಲಾಗುತ್ತಿದೆ. ಈ ಬಗ್ಗೆ ಕೆಲ ಪ್ರಕರಣಗಳೂ ಬೆಳಕಿಗೆ ಬಂದಿದೆ. ಇಂತಹ ಆಡಳಿತ ದುರುಪಯೋಗದ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲೆ ಸಂಘಟನಾ ಸಂಚಾಲಕ ಎಂ.ಜಿ ಕಿರಣ್ ಕುಮಾರ್ ಮಾತನಾಡಿ, ಈ ಭಾಗದಲ್ಲಿ ದಲಿತ ವಿದ್ಯಾರ್ಥಿಗಳಿಗೆ ಸರಕಾರದ ಸೌಲಭ್ಯಗಳು ನೀಡುವಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮೋಸ ಮಾಡುತ್ತಿದ್ದು, ಈ ಕುರಿತು ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗುತ್ತದೆ. ಜೊತೆಗೆ ವಿದ್ಯಾರ್ಥಿಗಳಿಗೆ ನ್ಯಾಯ ದೊರೆಯುವವರೆಗೂ ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದರು.

ಹಾಸ್ಟೆಲ್ ವಿದ್ಯಾರ್ಥಿ ಬಾಬು ಮಾತನಾಡಿ, ಅಶುಚಿತ್ವ ಮತ್ತು ಕಳಪೆ ಆಹಾರ ನೀಡುತ್ತಿದ್ದು, ಎರಡು ದಿನಗಳ ಹಿಂದೆ ದೋಸೆ ತಿಂದು, ವಾಂತಿ, ಹೊಟ್ಟೆನೋವಿನಿಂದ ಬಳಲುತ್ತಿದ್ದಾನೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಿ ನ್ಯಾಯ ದೊರಕಿಸಬೇಕು. ಅಲ್ಲದೆ ಹಾಸ್ಟೆಲ್ ನಲ್ಲಿ ಬಯೋಮೆಟ್ರಿಕ್ ನಲ್ಲಿ ಮೋಸ ಮಾಡಲಾಗುತ್ತಿದ್ದು, ಹಾಸ್ಟೆಲ್ ಸಿಬ್ಬಂದಿಯಿ0ದಲೇ ವಿದ್ಯಾರ್ಥಿಗಳ ಹಾಜರಾತಿ ಹಾಕಿಸಲಾಗುತ್ತಿದೆ. ಇಂತಹ ಅನ್ಯಾಯಗಳನ್ನು ತಡೆಯಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸಿಪಿಎಂ ತಾಲೂಕು ಕಾರ್ಯದರ್ಶಿ ಎಂ.ಎನ್ ರಘುರಾಮರೆಡ್ಡಿ, ಕರ್ನಾಟಕ ದಲಿತ ಸಂಗರ್ಷ ಸಮಿತಿ ತಾಲೂಕು ಸಂಚಾಲಕ ಎಸ್.ಎನ್ ನರಸಿಂಹಪ್ಪ, ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳಾದ ವೆಂಕಟೇಶ್, ಆದರ್ಶ,ವಿಷ್ಣುವರ್ಧೆನ, ಶಿವ, ನಿತಿನ್, ಗಂಗರಾಜು, ದರ್ಶನ, ಭರತ್, ಬಾಲಾಜಿ, ಅರುಣ್, ನವೀನ್, ನರೇಂದ್ರ, ವಿಜಯ್ ಕುಮಾರ್ ಇದ್ದರು.

About The Author

Leave a Reply

Your email address will not be published. Required fields are marked *