ಚಿಂತಾಮಣಿಯಲ್ಲಿ ಮಾನವ ಹಕ್ಕುಗಳ ದಿನಾಚರಣೆ
1 min readಚಿಂತಾಮಣಿಯಲ್ಲಿ ಮಾನವ ಹಕ್ಕುಗಳ ದಿನಾಚರಣೆ
ಸರ್ಕಾರದ ಯೋಜನೆ ಸದ್ಬಳಕೆ ಮಾಡಿಕೊಳ್ಳಲು ಕರೆ
ಚಿಂತಾಮಣಿ ನಗರದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಅಂತಾರಾಷ್ಟಿçÃಯ ವಿಶೇಷ ಚೇತನರ ಹಾಗೂ ಮಾನವ ಹಕ್ಕುಗಳ ದಿನಾಚರಣೆಯನ್ನು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಂ. ಪ್ರಕಾಶ್ ಅವರು ಉದ್ಘಾಟಿಸಿದರು.
ಚಿಂತಾಮಣಿಯಲ್ಲಿ ಇಂದು ಹಮ್ಮಿಕೊಂಡಿದ್ದ ಮಾನವ ಹಕ್ಕು ದಿನಚಾರಣೆ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಂ. ಪ್ರಕಾಶ್ ಅವರು, ವಿಕಲಚೇತನರ ಅಂಗ ವೈಫಲ್ಯ ಹೊಂದಿರುವವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಅವರು ಶೈಕ್ಷಣಿಕ, ಸಾಮಾಜಿಕವಾಗಿ ಚುನಾವಣೆಗೆ ಸ್ಪರ್ಧಿಸುವ ಅವಕಾಶ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು. ಪ್ರತಿಯೊಬ್ಬ ವ್ಯಕ್ತಿ ಸಮಾಜದಲ್ಲಿ ಗೌರವ, ಘನತೆಯಿಂದ ಬದುಕಲು ಸಂವಿಧಾನದ ಅಡಿಯಲ್ಲಿ ಹಕ್ಕುಗಳನ್ನು ರಚಿಸಿದೆ ಎಂದು ಅವರು ಹೇಳಿದರು.
ಈ ಹಕ್ಕುಗಳು ನಿರಂತರವಾಗಿ ಉಲ್ಲಂಘನೆಯಾಗಿರುವ ಪ್ರಕರಣಗಳು ದಾಖಲಾಗುತ್ತಿವೆ. ಇದನ್ನು ಹೋಗಲಾಡಿಸಲು ಕಾಯಿದೆ ಜಾರಿಗೆ ತರಲಾಗಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗ. ರಾಷ್ಟಿಯ ಮಾನವ ಹಕ್ಕುಗಳ ಆಯೋಗ ರಚಿಸಲಾಗಿದೆ. ಇಲ್ಲಿ ದೂರು ಸಲ್ಲಿಸಿದರೆ ವಿಚಾರಣೆ ಮಾಡಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ತಿಳಿಸಿದರು. ತಾಲೂಕು ಪಂಚಾಯಿತಿ ಇಒ ಆನಂದ್ ಮಾತನಾಡಿ, ಉದ್ಯೋಗ ಖಾತ್ರಿ, ಕೋಳಿ, ಕುರಿ ಸಾಕಾಣಿಕೆ ಮುಂತಾದ ಯೋಜನೆಗಳು ವಿಕಲಚೇತನರ ಅಭಿವೃದ್ಧಿಗೆ ಸರ್ಕಾರ ಜಾರಿಗೆ ತಂದಿದೆ ಇದನ್ನು ಸದ್ಬಳಿಕೆ ಮಾಡಿಕೊಳ್ಳಬೇಕು ಎಂದರು.
ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ಅವರು ತಾಲೂಕಿನಾದ್ಯಂತ ಇರುವ ವಿಕಲಚೇತನರಿಗೆ ವೀಲ್ ಚೇರ್ ನೀಡಲು ಸರ್ಕಾರದಿಂದ ಎರಡು ಕೋಟಿ ವಿಶೇಷ ಅನುದಾನ ತಂದಿದ್ದಾರೆ ಎಂದರು. ವಕೀಲರ ಸಂಘದ ಅಧ್ಯಕ್ಷ ಬಿ. ಶ್ರೀನಿವಾಸ್. ಉಪಾಧ್ಯಕ್ಷ ಜಿ. ಶಿವಾನಂದ, ಖಜಾಂಚಿ ಎಂ. ಎಸ್. ಚೌಡಪ್ಪ, ವಿಚಲಚೇತನ ರ ಅಧಿಕಾರಿ ಉಸ್ಮಾನ್, ಆರೋಗ್ಯ ಇಲಾಖೆ ಅಧಿಕಾರಿ ಶ್ರೀನಿವಾಸರೆಡ್ಡಿ ಇದ್ದರು.