ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 25, 2024

Ctv News Kannada

Chikkaballapura

ಹೈನು ರೈತರ ೨ರುಪಾಯಿ ನೀಡದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

1 min read

ಹೈನು ರೈತರ ೨ರುಪಾಯಿ ನೀಡದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಕೋಚಿಮುಲ್‌ನಲ್ಲಿ ೨ ರೂ. ಕಡಿತಕ್ಕೆ ಸಂಸದರಿoದ ಖಂಡನೆ

ಪುಷ್ಪ ಮಂಡಳಿ, ರೈಲ್ವೆ ಯೋಜನೆಗಳಿಗೆ ಕೇಂದ್ರಕ್ಕೆ ಮನವಿ

ಮೊದಲ ಸುದ್ದಿಗೋಷ್ಠಿಯಲ್ಲಿ ಸಂಸದ ಗುಡುಗು

ಕೋಚಿಮುಲ್‌ನಲ್ಲಿ ರೈತರಿಗೆ ನೀಡುತ್ತಿದ್ದ ಹಣದಲ್ಲಿ 2 ರೂ. ಕಡಿತ ಮಾಡಿದ ರಾಜ್ಯ ಸರ್ಕಾರದ ಆದೇಶವನ್ನು ಕೂಡಲೇ ಹಿಂಪಡೆಯದಿದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರದ ತಮ್ಮ ಗೃಹ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಕೋಚಿಮುಲ್‌ನಲ್ಲಿ ರೈತರಿಗೆ ನೀಡುತ್ತಿದ್ದ ಹಣದಲ್ಲಿ 2 ರೂ. ಕಡಿತ ಮಾಡಿದ ರಾಜ್ಯ ಸರ್ಕಾರದ ಆದೇಶವನ್ನು ಕೂಡಲೇ ಹಿಂಪಡೆಯದಿದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರದ ತಮ್ಮ ಗೃಹ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ನಾಯಕರು ಚುನಾವಣೆ ಸಮಯದಲ್ಲಿ ದರ ಏರಿಕೆಯ ವಿಷಯ ಇಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದರು. ಸೇವ್ ನಂದಿನಿ ಎಂದು ಅಭಿಯಾನ ಮಾಡಿದ್ದರು. ಆದರೆ ಅಧಿಕಾರಕ್ಕೆ ಬಂದ ನಂತರ ಎಲ್ಲ ದರಗಳನ್ನು ಏರಿಸಿದ್ದಾರೆ ಎಂದರು.

ಹಾಲಿನ ದರವನ್ನು ಮೊದಲಿಗೆ 3 ರೂ. ಏರಿಸಿ, ನಂತರ 2 ರೂ. ಏರಿಕೆ ಮಾಡಿದ್ದಾರೆ. ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ರೈತರಿಗೆ ನೀಡುವ ಹಣದಲ್ಲಿ 2 ರೂ. ಕಡಿತ ಮಾಡಿದೆ. ನ್ಯಾಯವಾಗಿ ರೈತರಿಗೆ ಹೆಚ್ಚು ಹಣ ನೀಡಬೇಕಿತ್ತು ಎಂದರು. ಏರಿಕೆ ಮಾಡಿದ 2 ರೂ. ಹಾಗೂ ರೈತರಿಂದ ಕಡಿತ ಮಾಡಿದ 2 ರೂ. ಸೇರಿದರೆ 4 ರೂ. ಆಗುತ್ತದೆ. ಕೋಚಿಮುಲ್‌ನಲ್ಲಿ 12 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದ್ದು, ಈ ಹೆಚ್ಚುವರಿ 4 ರೂ. ನಿಂದ ದಿನಕ್ಕೆ ೪೮ ಲಕ್ಷ ರೂ. ಹೆಚ್ಚುವರಿಯಾಗಿ ಬರುತ್ತಿದೆ. ಇದನ್ನು ರೈತರಿಗೆ ನೀಡುತ್ತಿಲ್ಲ. ಒಂದು ಹಸುಗೆ ದಿನಕ್ಕೆ ೫ ಕೆಜಿ ಪಶು ಆಹಾರ ಹಾಗೂ ೫೦ ಕೆಜಿ ಮೇವು ಬೇಕಾಗುತ್ತದೆ. ಪಶು ಆಹಾರಕ್ಕೆ 50 ಕೆಜಿಗೆ 1,150 ರೂ. ದರವಿದೆ. ಹೀಗಾದರೆ ರೈತರು ಬದುಕುವುದು ಹೇಗೆ ಎಂದು ಪ್ರಶ್ನೆ ಮಾಡಿದರು.

ಈ ಹಿಂದೆ ನಾನು ಸಚಿವನಾಗಿದ್ದಾಗ ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ರಚಿಸಲಾಗಿತ್ತು. ಆಗ 5 ಎಕರೆ ಜಾಗ ಮತ್ತು 50 ಕೋಟಿ ರೂ. ಅನುದಾನಕ್ಕೆ ತಾತ್ವಿಕ ಒಪ್ಪಿಗೆ ನೀಡಲಾಗಿತ್ತು. ಇಷ್ಟೆಲ್ಲ ಮಾಡಿದರೂ ಹಾಲು ಒಕ್ಕೂಟವನ್ನು ರದ್ದು ಮಾಡಲಾಗಿತ್ತು. ಈಗ ಸರ್ಕಾರ ಮತ್ತೆ ಪ್ರತ್ಯೇಕ ಒಕ್ಕೂಟ ಮಾಡಲು ಪ್ರಯತ್ನ ಆರಂಭಿಸಿದೆ. ಇದನ್ನು ಸುಸಜ್ಜಿತವಾಗಿ ಮಾಡಲಿ ಎಂದರು. ಕೋಚಿಮುಲ್‌ನಲ್ಲಿ ಅಧ್ಯಕ್ಷ ಕೆ.ವೈ. ನಂಜೇಗೌಡರ ಅವಧಿ ಮುಗಿದ ನಂತರವೂ ಚುನಾವಣೆ ಮುಂದೂಡಲಾಗುತ್ತಿದೆ. ನೇಮಕಾತಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಒಕ್ಕೂಟವನ್ನು ಹೇಗೆ ನಡೆಸಬೇಕು ಎಂಬ ಬಗ್ಗೆ ಅಧ್ಯಕ್ಷರಿಗೆ ಅಥವಾ ಸರ್ಕಾರಕ್ಕೆ ಖಚಿತತೆ ಇಲ್ಲ ಎಂದು ದೂರಿದರು.

ಎಸ್ಸಿಎಸ್ಪಿ, ಟಿಎಸ್ಪಿ ಗೆ ಸೇರಿದ 14 ಸಾವಿರ ಕೋಟಿ ರೂಪಾಯಿಯನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗೆ ಬಳಸಿ ಅನ್ಯಾಯ ಮಾಡಿದೆ. ಇನ್ನು ದಲಿತ ಸಂಘಟನೆಗಳು ಮನೆಯಲ್ಲಿ ಕೂರದೆ ರಸ್ತೆಗಿಳಿದು ಪ್ರತಿಭಟನೆ ಮಾಡಬೇಕು. ಇದಕ್ಕೆ ಬಿಜೆಪಿ ಸದಾ ಬೆಂಬಲ ನೀಡಲಿದೆ ಎಂದು ಹೇಳಿದರು. ಸಂಸತ್ತಿನಲ್ಲಿ ಶಾಶ್ವತ ನೀರಾವರಿ ಕುರಿತು ಮನವಿ ಮಾಡಿದ್ದೇನೆ. ಆದರೆ ಕಾಂಗ್ರೆಸ್‌ನವರ ಪ್ರತಿಭಟನೆಯಿಂದಾಗಿ ಅದು ಚರ್ಚೆಗೆ ಬಂದಿಲ್ಲ. ಇದರ ಜೊತೆಗೆ ಪುಷ್ಪ ಮಂಡಳಿ ಆರಂಭಕ್ಕೆ ಮನವಿ ಮಾಡಿದ್ದೇನೆ. ಹೂ ಕೃಷಿಯಲ್ಲಿ ೮೦೦ ಕೋಟಿ ಗೂ ಅಧಿಕ ವಹಿವಾಟು ನಡೆದಿದ್ದು, ಇಡೀ ದೇಶಕ್ಕೆ ಪುಷ್ಪ ಮಂಡಳಿ ಬೇಕಿದೆ. ಚಿಕ್ಕಬಳ್ಳಾಪುರದಲ್ಲೇ ಇದು ಸ್ಥಾಪನೆಯಾದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕೋರಿದ್ದೇನೆ. ಅದಕ್ಕೆ ಉತ್ತರ ಶೀಘ್ರ ಸಿಗಲಿದೆ ಎಂದು ತಿಳಿಸಿದರು.

ಬೆಂಗಳೂರಿoದ ಹೈದರಾಬಾದ್‌ಗೆ ಹೋಗುವ ೫೦೦ ಕಿ.ಮೀ. ಉದ್ದದ ರಾಷ್ಟಿಯ ಹೆದ್ದಾರಿಯನ್ನು 10 ಪಥದ ರಸ್ತೆಯಾಗಿ ವಿಸ್ತರಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೋರಿದ್ದು, ಅವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಇದನ್ನು 5 ಪ್ಯಾಕೇಜ್‌ಗಳಾಗಿ ಮಾಡುವಂತೆ ಅವರು ಸೂಚನೆ ನೀಡಿದ್ದಾರೆ. ರೈಲ್ವೆ ಸಚಿವರು ಹಾಗೂ ಮಂಡಳಿಯನ್ನು ಭೇಟಿ ಮಾಡಿ, ಚಿಕ್ಕಬಳ್ಳಾಪುರ-ಪುಟ್ಟಪರ್ತಿ ಹೊಸ ಮಾರ್ಗ ನಿರ್ಮಾಣಕ್ಕೆ ಮನವಿ ಮಾಡಿದ್ದೇನೆ. ಅದರ ಜೊತೆಗೆ ಇನ್ನಷ್ಟು ಹೊಸ ಮಾರ್ಗಗಳಿಗೆ ಕೋರಿದ್ದೇನೆ. 44 ಕಿ.ಮೀ. ಉದ್ದದ ಚಿಕ್ಕಬಳ್ಳಾಪುರ-ಗೌರಿಬಿದನೂರು ಹಾಗೂ 103 ಕಿ.ಮೀ. ಉದ್ದದ ಚಿಕ್ಕಬಳ್ಳಾಪುರ-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮಾರ್ಗದ ನಿರ್ಮಾಣಕ್ಕೆ ಒತ್ತು ನೀಡಿ ಮನವಿ ಮಾಡಿದ್ದೇನೆ ಎಂದರು.

ನಗರೋತ್ಥಾನ ೪ನೇ ಹಂತದಡಿ ೫೦ ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಇದನ್ನು ರದ್ದುಪಡಿಸಿತ್ತು. ಸ್ಥಳೀಯ ಶಾಸಕರು ನಗರಕ್ಕೆ ಒಂದು ರೂಪಾಯಿ ತಂದಿಲ್ಲ. ನಗರದ ಬಗ್ಗೆ ಯಾವುದೇ ಮುನ್ನೋಟವಿಲ್ಲದೆ, ಟೆಂಡರ್ ರೂಪಿಸಿ ಈಗ ನಾವೇ ೫೦ ಕೋಟಿ ರೂ. ತಂದಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಹಿಂದಿನ ಕಾಮಗಾರಿಗಳನ್ನೇ ಮತ್ತೆ ಕೈಗೆತ್ತಿಕೊಂಡಿರುವುದಕ್ಕೆ ಏನು ಕಾರಣ ಎಂದರೆ ಅದಕ್ಕೆ ಗುತ್ತಿಗೆದಾರರು ಉತ್ತರ ಹೇಳುತ್ತಾರೆ. ಬಿಜೆಪಿ ಮಾಡಿದ್ದನ್ನೇ ಮರಳಿ ಮಾಡುವ ಬದಲು ಹೊಸದಾಗಿ ಅನುದಾನ ತನ್ನಿ ಎಂದು ಒತ್ತಾಯಿಸಿದರು.

 

About The Author

Leave a Reply

Your email address will not be published. Required fields are marked *