ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಈ ರೈಲುಗಳ ಸೇವೆಯಲ್ಲಿ ಬದಲಾವಣೆ, ಸಂಚಾರ ರದ್ದು | Indian Railway
1 min readವಿವಿಧ ಕಾರಣಗಳಿಂದಾಗಿ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಿದ್ದರೇ, ಮತ್ತೆ ಕೆಲ ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ಇಲಾಖೆಯು ರದ್ದುಗೊಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೆಂಗೇರಿ-ಹೆಜ್ಜಾಲ ನಿಲ್ದಾಣಗಳ ನಡುವಿನ ರೈಲ್ವೆ ಲೆವೆಲ್ ಕ್ರಾಸಿಂಗ್ (ರೈಲ್ವೆ ಗೇಟ್) ನಂ.
15 ಮತ್ತು ಕೆಎಸ್‌ಆರ್ ಬೆಂಗಳೂರು-ಬೆಂಗಳೂರು ಕ್ಯಾಂಟ್ ನಿಲ್ದಾಣಗಳ ನಡುವಿನ ಸೇತುವೆ ಸಂಖ್ಯೆ 855ರಲ್ಲಿ ತಾತ್ಕಾಲಿಕ ಗರ್ಡರ್‌ಗಳನ್ನು ಅಳವಡಿಸುವ ಮತ್ತು ತೆರವುಗೊಳಿಸುವುದಕ್ಕಾಗಿ ಲೈನ್ ಬ್ಲಾಕ್ / ಪವರ್ ಬ್ಲಾಕ್ ಇರುವುದರಿಂದ ಈ ಕೆಳಗಿನ ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅವುಗಳ ವಿವರ ಈ ಕೆಳಗಿನಂತಿವೆ ಅಂತ ತಿಳಿಸಿದೆ.
ಎ) ರೈಲುಗಳ ಸಂಚಾರ ರದ್ದು:
- ಜುಲೈ 1, 2, 8 ಮತ್ತು 9, 2024 ರಂದು ರೈಲು ಸಂಖ್ಯೆ16021 ಡಾ. ಎಮ್‌ಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ದೈನಂದಿನ ಎಕ್ಸ್‌ಪ್ರೆಸ್ ರೈಲು ಸಂಚಾರ ರದ್ದಾಗಲಿದೆ.
- ಜುಲೈ 2, 3, 9 ಮತ್ತು 10, 2024 ರಂದು ರೈಲು ಸಂಖ್ಯೆ 16022 ಮೈಸೂರು-ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್ ದೈನಂದಿನ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 20623/20624 ಮೈಸೂರು-ಕೆಎಸ್‌ಆರ್ ಬೆಂಗಳೂರು-ಮೈಸೂರು ಮಾಲ್ಗುಡಿ ದೈನಂದಿನ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ರದ್ದಾಗಲಿವೆ.
- ಜುಲೈ 1 ಮತ್ತು 8, 2024 ರಂದು ರೈಲು ಸಂಖ್ಯೆ 16219 ಚಾಮರಾಜನಗರ-ತಿರುಪತಿ ದೈನಂದಿನ ಎಕ್ಸ್‌ಪ್ರೆಸ್ ರೈಲು ಸಂಚಾರ ರದ್ದಾಗಲಿದೆ.
- ಜುಲೈ 2 ಮತ್ತು 9, 2024 ರಂದು ರೈಲು ಸಂಖ್ಯೆ 16203/16204 ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್-ತಿರುಪತಿ-ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್ ದೈನಂದಿನ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16220 ತಿರುಪತಿ-ಚಾಮರಾಜನಗರ ದೈನಂದಿನ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 06267 ಅರಸೀಕೆರೆ-ಮೈಸೂರು ದೈನಂದಿನ ಪ್ಯಾಸೆಂಜರ್ ಸ್ಪೆಷಲ್, ರೈಲು ಸಂಖ್ಯೆ 06269 ಮೈಸೂರು-ಎಸ್‌ಎಂವಿಟಿ ಬೆಂಗಳೂರು ದೈನಂದಿನ ಪ್ಯಾಸೆಂಜರ್ ಸ್ಪೆಷಲ್, ರೈಲು ಸಂಖ್ಯೆ 06560 ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ಸ್ಪೆಷಲ್, ರೈಲು ಸಂಖ್ಯೆ 06270 ಎಸ್‌ಎಂವಿಟಿ ಬೆಂಗಳೂರು-ಮೈಸೂರು ದೈನಂದಿನ ಪ್ಯಾಸೆಂಜರ್ ಸ್ಪೆಷಲ್ ಮತ್ತು ರೈಲು ಸಂಖ್ಯೆ 12658 ಕೆಎಸ್‌ಆರ್ ಬೆಂಗಳೂರು-ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ರದ್ದಾಗಲಿವೆ.
- ಜುಲೈ 3 ಮತ್ತು 10, 2024 ರಂದು ರೈಲು ಸಂಖ್ಯೆ 06268 ಮೈಸೂರು-ಅರಸೀಕೆರೆ ದೈನಂದಿನ ಪ್ಯಾಸೆಂಜರ್ ಸ್ಪೆಷಲ್, ರೈಲು ಸಂಖ್ಯೆ 06559 ಕೆಎಸ್‌ಆರ್ ಬೆಂಗಳೂರು-ಮೈಸೂರು ಮೆಮು ಸ್ಪೆಷಲ್, ರೈಲು ಸಂಖ್ಯೆ 01763 ಕೆಎಸ್‌ಆರ್ ಬೆಂಗಳೂರು-ಚನ್ನಪಟ್ಟಣ ಮೆಮು ಸ್ಪೆಷಲ್ ಮತ್ತು ರೈಲು ಸಂಖ್ಯೆ 12657 ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್‌ಆರ್ ಬೆಂಗಳೂರು ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ರದ್ದಾಗಲಿವೆ.
ಬಿ) ರೈಲುಗಳ ಸಂಚಾರ ಭಾಗಶಃ ರದ್ದು:
- ಜುಲೈ 2 ಮತ್ತು 9 ರಂದು ಮೈಸೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 06526 ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ಸ್ಪೆಷಲ್ ಚನ್ನಪಟ್ಟಣ – ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.
- ಜುಲೈ 2 ಮತ್ತು 9 ರಂದು ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12657 ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್‌ಆರ್ ಬೆಂಗಳೂರು ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ವೈಟ್‌ಫೀಲ್ಡ್ – ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.
- ಜುಲೈ 2 ಮತ್ತು 9 ರಂದು ಹಜೂರ್ ಸಾಹಿಬ್ ನಾಂದೇಡ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ16594 ಹಜೂರ್ ಸಾಹಿಬ್ ನಾಂದೇಡ್-ಕೆಎಸ್‌ಆರ್ ಬೆಂಗಳೂರು ದೈನಂದಿನ ಎಕ್ಸ್‌ಪ್ರೆಸ್ ರೈಲು ಯಲಹಂಕ-ಕೆಎಸ್‌ಆರ್ ಬೆಂಗಳೂರುನಿಲ್ದಾಣಗಳ ನಡುವಿನ ಸಂಚಾರ ಭಾಗಶಃ ರದ್ದುಗೊಳಿಸಲಾಗುತ್ತಿದೆ.
- ಜುಲೈ 2 ಮತ್ತು 9 ರಂದು ಹೊಸಪೇಟೆ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 06244 ಹೊಸಪೇಟೆ-ಕೆಎಸ್‌ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ಸ್ಪೆಷಲ್ ರೈಲು ಯಶವಂತಪುರ-ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.
- ಜುಲೈ 2 ಮತ್ತು 9 ರಂದು ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ17392 ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ದೈನಂದಿನ ಎಕ್ಸ್‌ಪ್ರೆಸ್ ರೈಲು ಯಶವಂತಪುರ-ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಪಡಿಸಲಾಗುತ್ತದೆ.
- ಜುಲೈ 2 ಮತ್ತು 9 ರಂದು ಬಂಗಾರಪೇಟೆ ನಿಲ್ದಾಣದಿಂದ ಹೊರಡುವ ರೈಲು 16521 ಬಂಗಾರಪೇಟೆ-ಕೆಎಸ್‌ಆರ್ ಬೆಂಗಳೂರು ದೈನಂದಿನ ಎಕ್ಸ್‌ಪ್ರೆಸ್ ರೈಲು ಬಯ್ಯಪ್ಪನಹಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಪಡಿಸಲಾಗುತ್ತದೆ.
- ಜುಲೈ 3 ಮತ್ತು 10 ರಂದು ರೈಲು ಸಂಖ್ಯೆ 17391 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ದೈನಂದಿನ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು – ಯಶವಂತಪುರ ನಡುವೆ ಭಾಗಶಃ ರದ್ದುಪಡಿಸಲಾಗುತ್ತದೆ.
- ಜುಲೈ 3 ಮತ್ತು 10 ರಂದು ರೈಲು ಸಂಖ್ಯೆ 06243 ಕೆಎಸ್‌ಆರ್ ಬೆಂಗಳೂರು-ಹೊಸಪೇಟೆ ದೈನಂದಿನ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್‌ಆರ್ ಬೆಂಗಳೂರು – ಯಶವಂತಪುರ ನಡುವೆ ಭಾಗಶಃ ರದ್ದುಪಡಿಸಲಾಗುತ್ತದೆ.
ಸಿ) ರೈಲುಗಳ ನಿಯಂತ್ರಣ:
- ಜುಲೈ 2 ಮತ್ತು 9 ರಂದು ಮುಂಬೈಯಿಂದ ಹೊರಡುವ ರೈಲು ಸಂಖ್ಯೆ 11301 ಸಿಎಸ್‌ಎಂಟಿ ಮುಂಬೈ-ಕೆಎಸ್‌ಆರ್ ಬೆಂಗಳೂರು ಉದ್ಯಾನ್ ದೈನಂದಿನ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 30 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.
- ಜುಲೈ 2 ಮತ್ತು 9 ರಂದು ಮೈಲಾಡುತುರೈಯಿಂದ ಹೊರಡುವ ರೈಲು ಸಂಖ್ಯೆ 16231 ಮೈಲಾಡುತುರೈ-ಮೈಸೂರು ದೈನಂದಿನ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 15 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.
- ಜುಲೈ 2 ಮತ್ತು 9 ರಂದು ಮುರುಡೇಶ್ವರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16586 ಮುರುಡೇಶ್ವರ-ಎಸ್‌ಎಂವಿಟಿ ಬೆಂಗಳೂರು ದೈನಂದಿನ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 15 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.
- ಜುಲೈ 2 ಮತ್ತು 9 ರಂದು ತಾಳಗುಪ್ಪದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16228 ತಾಳಗುಪ್ಪ-ಮೈಸೂರು ದೈನಂದಿನ ಎಕ್ಸ್‌ಪ್ರೆಸ್ ರೈಲನ್ನು ನಾಯಂಡಹಳ್ಳಿ ನಿಲ್ದಾಣದಲ್ಲಿ 10 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.
ಡಿ) ರೈಲು ತಡವಾಗಿ ಪ್ರಾರಂಭ / ಮಾರ್ಗ ಬದಲಾವಣೆ:
- ಜುಲೈ 2 ಮತ್ತು 9 ರಂದು ರೈಲು ಸಂಖ್ಯೆ 16593 ಕೆಎಸ್‌ಆರ್ ಬೆಂಗಳೂರು-ಹಜೂರ್ ಸಾಹಿಬ್ ನಾಂದೇಡ್ ದೈನಂದಿನ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರಿನಿಂದ 80 ನಿಮಿಷ ತಡವಾಗಿ ಪ್ರಾರಂಭವಾಗಲಿದೆ ಮತ್ತು ಈ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಯಲಹಂಕ ಮಾರ್ಗದ ಮೂಲಕ ಸಂಚರಿಸಲಿದೆ, ಹೀಗಾಗಿ ಬೆಂಗಳೂರಿನ ಕ್ಯಾನ್ಟೋನ್‌ಮೆಂಟ್‌ನಲ್ಲಿ ನಿಲುಗಡೆ ಇರುವುದಿಲ್ಲ.
- ಜುಲೈ 2 ಮತ್ತು 9 ರಂದು ಲೋಕಮಾನ್ಯ ತಿಲಕ್ ಟರ್ಮಿನಸ್ ದಿಂದ ಹೊರಡುವ ರೈಲು ಸಂಖ್ಯೆ 11013 ಲೋಕಮಾನ್ಯ ತಿಲಕ್ ಟರ್ಮಿನಸ್-ಕೊಯಮತ್ತೂರು ದೈನಂದಿನ ಎಕ್ಸ್‌ಪ್ರೆಸ್ ರೈಲು ಗೌರಿಬಿದನೂರು, ಬಯ್ಯಪ್ಪನಹಳ್ಳಿ, ಎಸ್‌ಎಂವಿಟಿ ಬೆಂಗಳೂರು, ಬಯ್ಯಪ್ಪನಹಳ್ಳಿ ಮತ್ತು ಹೊಸೂರು ಮಾರ್ಗದ ಮೂಲಕ ಸಂಚರಿಸಲಿದೆ, ಹೀಗಾಗಿ ಬೆಂಗಳೂರು ಪೂರ್ವ, ಬೆಂಗಳೂರು ಕ್ಯಾನ್ಟೋನ್‌ಮೆಂಟ್ ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ. ಈ ರೈಲು ಎಸ್‌ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ಹೊಂದಿರಲಿದೆ.
- #ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday