ರಾಜ್ಯದಲ್ಲಿ ಆ. 3ರವರೆಗೆ ಭಾರಿ ‘ಮಳೆ’ ಮುನ್ನೆಚ್ಚರಿಕೆ ; 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ
1 min readಆಗಸ್ಟ್ 3ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರವರೆಗೆ ವ್ಯಾಪಕ ಮಳೆ ಸಾಧ್ಯತೆ ಇದೆ. ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಆಗಸ್ಟ್ 3ರವರೆಗೆ ಮಳೆಯಾಗಲಿದೆ, ರಾಜ್ಯಾದ್ಯಂತ 30ರಿಂದ 40 ಕಿ.ಮೀ.
ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆ.1ರಂದು ಆರೆಂಜ್ ಅಲರ್ಟ್, ಆ.2 & 3ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜು.31, ಆಗಸ್ಟ್ 1ರಂದು ಆರೆಂಜ್ ಅಲರ್ಟ್, ಉತ್ತರ ಕನ್ನಡ ಜಿಲ್ಲೆಯಲ್ಲಿ ಆ.2, 3ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿನಲ್ಲಿ ಆ.1ರಂದು ಆರೆಂಜ್ ಅಲರ್ಟ್, ಬೆಳಗಾವಿ ಜಿಲ್ಲೆಯಲ್ಲಿ ಜು.30, 31, ಆಗಸ್ಟ್ 1, 2ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಹಲವೆಡೆ ಭೂಕುಸಿತ ಅವಘಡಗಳು ಹೆಚ್ಚುತ್ತಿವೆ. ಒಂದು ವಾರದ ಹಿಂದಷ್ಟೇ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೆ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ. ರಾಜ್ಯದಲ್ಲಿ ಮಳೆ ಅಬ್ಬರ ಜೊರಾಗಿದ್ದು, ನದಿ, ಹಳ್ಳಕೊಳ್ಳಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ. ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ.
ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದ್ದು, ತ್ರಿವೇಣಿ ಸಂಗಮ ಸಂಪೂರ್ಣ ಮುಳುಗಡೆಯಾಗಿದೆ.ಭಾರಿ ಮಳೆಗೆ ತ್ರಿವೇಣಿ ಸಂಗಮ ಮುಳುಗಡೆಯಾಗಿದ್ದು, ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮೆಟ್ಟುಲುಗಳವರೆಗೂ ನೀರು ನಿಂತಿದ್ದು, ದೇವಾಲಯದ ಸುತ್ತ ಜಲಾವೃತಗೊಂಡಿದೆ
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday #ctv -news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday #rtodaybreakingnews #chikkaballapuranews #flashnews #liveupdatenews @ctv-news