ನಲ್ಲಿಮರದಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ಉದ್ಘಾಟನೆ
1 min readನಲ್ಲಿಮರದಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ಉದ್ಘಾಟನೆ
ಶಿಡ್ಲಘಟ್ಟ ತಾಲೂಕಿನ ನಲ್ಲಿಮರದಹಳ್ಳಿಯಲ್ಲಿ ನೂತನ ಕಟ್ಟಡಕ್ಕೆ ಚಾಲನೆ
ಹಾಲಿನ ಗುಣಮಟ್ಟ ಹೆಚ್ಚಿಸುವ ಜವಾಬ್ದಾರಿ ರೈತರದ್ದಾಗಿದೆ. ಹಾಲು ಉತ್ಪಾದಕರು ಡೈರಿಗಳಿಗೆ ಹಾಕುವ ಹಾಲಿನ ಗುಣಮಟ್ಟ ಉತ್ತಮವಾಗಿ ಇದ್ದಲ್ಲಿ, ಉತ್ಪಾದಕರಿಗೆ ಉತ್ತಮ ಬೆಲೆ ಸಿಗುತ್ತದೆ. ಸಾಂಘಿಕ ಶಕ್ತಿಯಿಂದ ಸಹಕಾರ ಸಂಘವನ್ನು ಉತ್ತಮವಾಗಿ ಬೆಳೆಸಿ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ಶಿಡ್ಲಘಟ್ಟ ನಗರ ಹೊರವಲಯದ ನಲ್ಲಿಮರದಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ರವಿಕುಮಾರ್, ಪಕ್ಷಾತೀತವಾಗಿ ಸಹಕಾರ ಸಂಘವನ್ನು ಕಟ್ಟಿ ಬೆಳೆಸಬೇಕು. ಹಾಲು ಉತ್ಪಾದಕರೆಲ್ಲೂ ಒಂದೇ. ಸಂಘದಲ್ಲಿ ಜಾತಿ, ಧರ್ಮ, ರಾಜಕೀಯ ಪಕ್ಷ ನುಸುಳದಂತೆ ನೋಡಿಕೊಳ್ಳಿ. ರೈತರು ಹೈನುಗಾರಿಕೆಯಲ್ಲಿ ಯಶಸ್ಸನ್ನು ಕಾಣುವಂತಾಗಲಿ ಎಂದು ಹೇಳಿದರು.
ಉತ್ತಮ ಗುಣಮಟ್ಟದ ಹಾಲು ಶೇಖರಣೆಯಾದಾಗ ಹಾಲಿಗೆ ಒಳ್ಳೆಯ ಬೆಲೆ ಸಿಗುತ್ತದೆ. ಆ ಮೂಲಕ ಸಹಕಾರ ಸಂಘವೂ ಉತ್ತಮವಾಗಿ ಅಭಿವೃದ್ಧಿಯಾಗುತ್ತದೆ ಮತ್ತು ಹಾಲು ಉತ್ಪಾದಕರಿಗೂ ಆರ್ಥಿಕವಾಗಿ ಸಹಾಯವಾಗುತ್ತದೆ ಎಂದರು. ನಲ್ಲಿಮರದಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ.ನರಸಿAಹಮೂರ್ತಿ, ಆರ್. ಶ್ರೀನಿವಾಸ್, ಕೆ. ಗುಡಿಯಪ್ಪ, ಕೋಚಿಮುಲ್ ಉಪವ್ಯವಸ್ಥಾಪಕ ಬಿ.ಆರ್. ರವಿಕಿರಣ್, ಅಭಿವೃದ್ಧಿ ಅಧಿಕಾರಿ ಮಂಜುನಾಥ, ಎಂ.ಪಿ.ಸಿ.ಎಸ್. ನಿರ್ದೇಶಕ ಎಂ.ಮುನಿಯಪ್ಪ, ಸಿ.ದೇವರಾಜು ಇದ್ದರು.