ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 25, 2024

Ctv News Kannada

Chikkaballapura

ಮಹರ್ಷಿ ವಾಲ್ಮೀಕಿ ನಾಯಕರ ಸಂಘಟ ಉದ್ಘಾಟನೆ

1 min read

ಮಹರ್ಷಿ ವಾಲ್ಮೀಕಿ ನಾಯಕರ ಸಂಘಟ ಉದ್ಘಾಟನೆ
ಗ್ರಾಮದ ಅಭಿವೃದ್ಧಿಗೆ ಸಂಘ ಶ್ರಮಿಸಲು ಕರೆ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಮರಳೂರು-ಗೊದ್ದನಪುರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ನಾಯಕರ ಸಂಘವನ್ನು ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ.ಚಿಕ್ಕರಂಗನಾಯಕ ಮತ್ತು ಎಸ್.ಸಿ ಬಸವರಾಜು ಇಂದು ಉದ್ಘಾಟಿಸಿದರು.

ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಂಘದ ನಾಮಫಲಕ ಅನಾವರಣಗೊಳಿಸಿದ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ಮಾತನಾಡಿ, ವಾಲ್ಮೀಕಿ ಅವರು ಅರಿವಿನ ಸಂಕೇತವಾಗಿದ್ದಾರೆ. ಕವಿ, ಲೇಖಕ ಮಾತ್ರವಲ್ಲ ಅರಿವಿನ ಬೆಳಕಾಗಿದ್ದಾರೆ. ಅವರ ಬೆಳಕು ಜಗತ್ತಿನಾದ್ಯಂತ ಹಬ್ಬಿದೆ ಎಂದರು. ರಾಮಾಯಾಣದಲ್ಲಿ ಬರುವ ಪಾತ್ರಗಳನ್ನು ಜನ ಪೂಜಿಸುತ್ತಾರೆ. ಆದರೆ, ಜಗತ್ತಿಗೆ ರಾಮಾಯಾಣ ನೀಡಿದ ವ್ಯಕ್ತಿಯನ್ನು ಕಡೆಗಣಿಸಲಾಗುತ್ತಿದೆ. ರಾಷ್ಟ ನಾಯಕರನ್ನು ಒಂದೇ ಸಮುದಾಯಗಳಿಗೆ ಸೀಮಿತ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಬುದ್ಧ, ಬಸವ, ಅಂಬೇಡ್ಕರ್, ಕನಕದಾಸರ ತತ್ವ ಆದರ್ಶಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು. ಯಾವುದೇ ಸಂಘ ಒಂದು ನಿರ್ದಿಷ್ಟ ಗುರಿ ಹೊಂದಿರಬೇಕು ಮತ್ತು ಸರ್ಕಾರದ ಸೌಲಭ್ಯ ಪಡೆದು ಗ್ರಾಮವನ್ನು ಅಭಿವೃದ್ಧಿ ಪಡಿಸಬೇಕು. ಯುವಕರು ಗ್ರಾಮದಲ್ಲಿರುವ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ, ಅಂಬೇಡ್ಕರ್ ಅವರು ಹೇಳಿದಂತೆ ಶಿಕ್ಷಣ ಸಂಘಟನೆ ಹೋರಾಟ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ಬಂಗಾರ ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ವಾಲ್ಮೀಕಿ ನಾಯಕರ ಸಂಘದ ರಾಜ್ಯಾಧ್ಯಕ್ಷ ದೇವರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ್, ಉಪಾಧ್ಯಕ್ಷೆ ಮಹದೇವಮ್ಮ, ಸಂಘದ ಅಧ್ಯಕ್ಷ ಶಂಕರ ನಾಯ ಇದ್ದರು.

About The Author

Leave a Reply

Your email address will not be published. Required fields are marked *