ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 25, 2024

Ctv News Kannada

Chikkaballapura

ಜಿಲ್ಲಾ ಉಸ್ತುವಾರಿ ಸಚಿವರಿಂದ ಹೂ ಮಾರುಕಟ್ಟೆ ಜಾಗ ಪರಿಶೀಲನೆ

1 min read

ಜಿಲ್ಲಾ ಉಸ್ತುವಾರಿ ಸಚಿವರಿಂದ ಹೂ ಮಾರುಕಟ್ಟೆ ಜಾಗ ಪರಿಶೀಲನೆ
ಹೂ ಮಾರುಕಟ್ಟೆ ಉದ್ಧೇಶಿತ ಜಾಗ ವೀಕ್ಷಿಸಿದ ಸಚಿವ ಸುಧಾಕರ್
ಶಿಡ್ಲಘಟ್ಟದಲ್ಲಿ 200 ಕೋಟಿ ವೆಚ್ಚದಲ್ಲಿ ಹೈಟೆಕ್ ಮಾರುಕಟ್ಟೆ

ಶಿಡ್ಲಘಟ್ಟದಲ್ಲಿ 200 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಸೌಕರ್ಯಗಳ ಸುಸಜ್ಜಿತ ಹೈಟೆಕ್ ರೇಷ್ಮೇ ಗೂಡಿನ ಮಾರುಕಟ್ಟೆ ನಿರ್ಮಿಸಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದ ಯಲುವಳ್ಳಿ ಸಮೀಪ ಇರುವ ತೋಟಗಾರಿಕೆ ಇಲಾಖೆ ಜಾಗದಲ್ಲಿ ಹೂ ಮಾರುಕಟ್ಟೆ ನಿರ್ಮಿಸಲು ನೀಡಿರುವ 20 ಎಕರೆ ಜಮೀನು ಪರಿಶೀಲನೆ ಮಾಡಿ, ರೈತರೊಂದಿಗೆ ಸಂವಾದ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ಬಜೆಟ್‌ನಲ್ಲಿ ಜಿಲ್ಲೆಯ ಶಿಡ್ಲಘಟ್ಟದಲ್ಲಿ 75 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಹಂತಗಳಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ಘೋಷಣೆ ಮಾಡಲಾಗಿತ್ತು ಎಂದರು.

ಭವಿಷ್ಯದ ಮತ್ತು ದೂರ ದೃಷ್ಟಿಯಿಂದ ಮತ್ತಷ್ಟು ಸೌಲಭ್ಯಗಳೊಂದಿಗೆ ಬೃಹತ್ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಿಸಲು 200 ಕೋಟಿ ರೂಪಾಯಿ ವೆಚ್ಚದಲ್ಲಿ ಮಾರುಕಟ್ಟೆಯನ್ನು ನಿರ್ಮಿಸಲು ಉದ್ದೇಶಿಸಿ ಹೊಸ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, 75 ಕೋಟಿ ರೂಪಾಯಿ ನಬಾರ್ಡ್ ನೆರವಿನಿಂದ ಹಾಗೂ 125 ಕೋಟಿ ರೂಪಾಯಿ ಸರ್ಕಾರದಿಂದ ಧರಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಆರ್ಥಿಕ ಇಲಾಖೆಯೂ ಒಪ್ಪಿಗೆ ನೀಡಿದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಹಂತಗಳಲ್ಲಿ ಕಾಮಗಾರಿ ಪೂರ್ಣಗೊಂಡು ಜಿಲ್ಲೆಯ ರೇಷ್ಮೆ ಬೆಳೆಗಾರರು ಮತ್ತು ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ. ಶೀಡ್ಲಘಟ್ಟ ಹೈಟೆಕ್ ರೇಷ್ಮೇ ಗೂಡಿನ ಮಾರುಕಟ್ಟೆ ಕಾಮಗಾರಿ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.

ಈ ವೇಳೆ ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾ ಧಿಕಾರಿ ಪಿ.ಎನ್.ರವೀಂದ್ರ ಹಾಜರಿದ್ದರು. ಇದೇ ವೇಳೆ ಸಚಿವರು ಜಿಲ್ಲೆಯ ಹೂ ಬೆಳೆಗಾರರು ಮತ್ತು ವ್ಯಾಪಾರಿಗಳೊಂದಿಗೆ ಸಂವಾದ ನಡೆಸಿ ಹೂ ಮಾರುಕಟ್ಟೆ ನಿರ್ಮಾಣದ ಕುರಿತು ಅಭಿಪ್ರಾಯ ಸಂಗ್ರಹಿಸಲಾಯಿತು.

 

About The Author

Leave a Reply

Your email address will not be published. Required fields are marked *