ಶಿಡ್ಲಘಟ್ಟದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
1 min readಶಿಡ್ಲಘಟ್ಟದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಶಾಸಕ ರವಿಕುಮಾರ್ ಸೇರಿ ಅಧಿಕಾರಿಗಳು ಭಾಗಿ
ಶಿಡ್ಲಘಟ್ಟ ತಾಲೂಕಿನ ಲಕ್ಕಹಳ್ಳಿ ಗೇಟ್‌ನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಶಾಸಕ ರವಿಕುಮಾರ್ ಚಾಲನೆ ನೀಡಿದರು. ಸ್ವಾತಂತ್ರ ಹೋರಾಟಗಾರರ ಬದುಕು ಬವಣೆ, ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಂವಿಧಾನದ ಮಹತ್ವವನ್ನು ಎಲ್ಲರೂ ಅರಿಯುವ ಅಗತ್ಯವಿದೆ. ಆಗ ಮಾತ್ರ ಎಲ್ಲರಲ್ಲೂ ದೇಶ ಪ್ರೇಮ, ಕಾನೂನಿನ ಮೇಲೆ ಗೌರವ ಹೆಚ್ಚುತ್ತದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಲಕ್ಕಹಳ್ಳಿ ಗೇಟ್‌ನಲ್ಲಿ ಅಂತಾರಾಷ್ಟ್ರೀಯಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಿರ್ಮಿಸಿದ್ದ ಮಾನವ ಸರಪಳಿಯಲ್ಲಿ ತಾವೂ ಕೈ ಜೋಡಿಸಿ ಸಂವಿಧಾನ ಪ್ರತಿಜ್ಞೆ ಸ್ವೀಕರಿಸಿ ಮಾತನಾಡಿದ ಶಿಡ್ಲಘಟ್ಟ ಶಾಸಕ ರವಿಕುಮಾರ್, ರಾಜ್ಯ ಸರಕಾರ ಪ್ರಜಾಪ್ರಭುತ್ವ ದಿನಾಚರಣೆ ಹಮ್ಮಿಕೊಂಡಿದ್ದು ಬೀದರ್‌ನಿಂದ ಚಾಮರಾಜನಗರದವರೆಗೂ ಇಡೀ ರಾಜ್ಯದ ಉದ್ದಗಲಕ್ಕೂ ಮಾನವ ಸರಪಳಿ ನಿರ್ಮಿಸಿ ಈಗಿನ ಎಲ್ಲರಲ್ಲೂ ಸ್ವಾತಂತ್ರ, ಪ್ರಜಾಪ್ರಭುತ್ವ, ಸಂವಿಧಾನ ಕುರಿತು ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದರು.
ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾಗರಿಕರು, ಅಧಿಕಾರಿ ಮತ್ತು ಸಿಬ್ಬಂದಿ ಎಲ್ಲರೂ ಈ ದಿನಾಚರಣೆಯಲ್ಲಿ ಭಾಗವಹಿಸಿ ಮಾನವ ಸರಪಳಿ ನಿರ್ಮಿಸಿದ್ದು, ಎಲ್ಲರಿಗೂ ಧನ್ಯವಾದ ತಿಳಿಸಿದರು. ತಹಸೀಲ್ದಾರ್ ಬಿ.ಎನ್. ಸ್ವಾಮಿ ಸಂವಿಧಾನದ ಪೀಠಿಕೆ ಓದಿ ಪ್ರತಿವಿಧಿ ಬೋಧಿಸಿದರು. ತಾಲೂಕಿನ ಚಿಕ್ಕಬಳ್ಳಾಪುರ ಗಡಿಭಾಗ ಲಕ್ಕಹಳ್ಳಿ ಗೇಟ್‌ನಿಂದ ಕೋಲಾರ ಗಡಿ ಎಚ್.ಕ್ರಾಸ್‌ವರೆಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾನಾ ಇಲಾಖೆ ಅಧಿಕಾರಿ, ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮಾನವ ಸರಪಳಿ ನಿರ್ಮಿಸಿದ್ದರು.
ಇಒ ಹೇಮಾವತಿ, ಬಿಇಒ ನರೇಂದ್ರ ಕುಮಾರ್, ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗಧೀಶ್, ಟಿಎಚ್‌ಒ ಡಾ.ವೆಂಕಟೇಶಮೂರ್ತಿ, ನಗರಸಭೆ ಅಧ್ಯಕ್ಷ ವೆಂಕಟಸ್ವಾಮಿ, ಅನಿಲ್ ಕುಮಾರ್, ಮಂಜುನಾಥ್, ಫುಡ್ ಮನೋಹರ್, ಡಾಲ್ಫಿನ್ ನಾಗರಾಜ್, ಬಂಕ್ ಮುನಿಯಪ್ಪ ಇದ್ದರು.