ಜಾನುವಾರು ಮೈ ತೊಳೆಯಲು ನೀರಿಗಿಳಿದಿರುವ ವ್ಯಕ್ತಿ ಮೃತಪಟ್ಟಿರುವ ಶಂಕೆ
1 min readದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ವಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ಜಾನುವಾರು ಮೈ ತೊಳೆಯಲು ನೀರಿಗಿಳಿದ ವ್ಯಕ್ತಿಯೊಬ್ಬ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ, ರಾಮಪುರ ಗ್ರಾಮದ ೪೩ ವರ್ಷದ ಕುಮಾರ್ ಮಂಗಳವಾರ ಜಾಲಿಕಟ್ಟೆಯಲ್ಲಿ ದನಗಳ ಮೈ ತೊಳೆಯಲು ಬಂದಿದ್ದರು.
ಮೈ ತೊಳೆದ ಆರು ದನಗಳು ಮನೆಗೆ ಹಿಂತಿರುಗಿದರೂ ಕುಮಾರ್ ಬಂದಿರಲಿಲ್ಲ. ಅನುಮಾನಗೊಂಡ ಕುಟುಂಬಸ್ಥರು ಜಾಲಿಕಟ್ಟೆ ಬಳಿ ಬಂದು ನೋಡಿದಾಗ ಚಪ್ಪಲಿ ಕಂಡು ಬಂದಿದೆ. ಆತಂಕಗೊAಡ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಎಂ.ಆರ್.ಹರೀಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು. ರಾತ್ರಿಯಾದ ಕಾರಣ ಶೋಧ ಕಾರ್ಯಾಚರಣೆ ನಡೆಸಿರಲಿಲ್ಲ. ಬುಧವಾರ ಬೆಳಿಗ್ಗೆ ಅಗ್ನಿಶಾಮಕ ಸಿಬ್ಬಂದಿ ಬೋಟ್ ಗಳ ಮೂಲಕ ಮೃತದೇಹದ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.