ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

1 min read

2008ರಲ್ಲಿ ನಡೆದ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ನವದೆಹಲಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ದೆಹಲಿಯ ಸಾಕೇತ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ಆದೇಶ ಪ್ರಕಟಿಸಿದೆ.

ಅಲ್ಲದೇ, ಅಪರಾಧಿಗಳಿಗೆ 5 ಲಕ್ಷ ರೂಪಾಯಿ ದಂಡವನ್ನೂ ಹಾಕಲಾಗಿದೆ. ಮತ್ತೊಬ್ಬ ಅಪರಾಧಿ ಅಜಯ್ ಸೇಥಿ ಎಂಬಾತನಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ದೆಹಲಿಯಲ್ಲಿ 2008ರ ಸೆಪ್ಟೆಂಬರ್ 30ರಂದು ಬೆಳಗಿನ ಜಾವ 3:30ರ ಸುಮಾರಿಗೆ ಕಚೇರಿಯಿಂದ ಮನೆಗೆ ಹಿಂದಿರುಗುವಾಗ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದೀಗ 15 ವರ್ಷಗಳ ಬಳಿಕ ತೀರ್ಪು ಹೊರ ಬಂದಿದೆ. ರವಿ ಕಪೂರ್, ಅಜಯ್ ಕುಮಾರ್, ಅಮಿತ್ ಶುಕ್ಲಾ ಮತ್ತು ಬಲ್ಜೀತ್ ಮಲಿಕ್ ಎಂಬುವವರೇ ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಅಕ್ಟೋಬರ್ 18ರಂದು ಸಾಕೇತ್ ನ್ಯಾಯಾಲಯವು ಈ ಎಲ್ಲ ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು.

ಈ ನಾಲ್ವರು ಆರೋಪಿಗಳನ್ನು ಮಹಾರಾಷ್ಟ್ರದ ಕಠಿಣ ಕಾನೂನಾದ ಎಂಸಿಒಸಿಎ (ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಕಾಯ್ದೆ ಅಡಿ ಸೆಕ್ಷನ್ 3 (1) (i)ರ ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿತ್ತು. ಈ ಪ್ರಕರಣದ ನಾಲ್ಕನೇ ಆರೋಪಿ ಅಜಯ್ ಸೇಥಿಯನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 411 ಮತ್ತು ಎಂಸಿಒಸಿಎಯ ಸೆಕ್ಷನ್ 3(2) ಮತ್ತು 3(5) ಅಡಿ ತಪ್ಪಿತಸ್ಥ ಎಂದು ಪ್ರಕಟಿಸಿತ್ತು.

ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದ ಹಿನ್ನೆಲೆ: ದೆಹಲಿಯಲ್ಲಿಟಿವಿ ಪತ್ರಕರ್ತೆಯಾಗಿದ್ದ ಸೌಮ್ಯಾ ವಿಶ್ವನಾಥನ್ 2008ರ ಸೆಪ್ಟೆಂಬರ್ 30ರಂದು ಕೆಲಸ ಮುಗಿಸಿಕೊಂಡು ಮನೆಗೆ ತೆರಳಿದ್ದರು. ಈ ವೇಳೆ ಹಿಂಬಾಲಿಸಿಕೊಂಡು ಬಂದಿದ್ದ ಐವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಸೌಮ್ಯಾ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಇದಾದ ಬಳಿಕ ಹಂತಕರು ತಮ್ಮ ಕೃತ್ಯ ಬಯಲಾಗದಂತೆ ಮಾಡಲು ರಸ್ತೆ ಅಪಘಾತ ಎಂಬಂತೆ ಬಿಂಬಿಸಿದ್ದರು.

ಅಂತೆಯೇ, ಆರಂಭದಲ್ಲಿ ಕಾರು ದುರಂತ ಎಂಬಂತೆ ಕಂಡುಬಂದಿತ್ತು. ಆದರೆ, ವಿಧಿವಿಜ್ಞಾನ ವರದಿಗಳಲ್ಲಿ ಸೌಮ್ಯಾ ತಲೆಗೆ ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಎಂದು ಬಹಿರಂಗವಾಗಿತ್ತು. ಇದರಿಂದ ಇದೊಂದು ಕೊಲೆ ಎಂದು ಸ್ಪಷ್ಟವಾಗಿ, ಇದರ ಆಧಾರದ ಮೇಲೆ ದೆಹಲಿ ಪೊಲೀಸರು ತನಿಖೆ ಪ್ರಾರಂಭಿಸಿದ್ದರು.

ತನಿಖೆಯ ಭಾಗವಾಗಿ ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳಿಗಳ ಪರಿಶೀಲನೆಯಲ್ಲಿ ಸೌಮ್ಯಾ ಅವರನ್ನು ಕಾರೊಂದು ಹಿಂಬಾಲಿಸಿದ್ದು ಬಯಲಿಗೆ ಬಂದಿತ್ತು. ನಂತರ 2009ರಲ್ಲಿ ಪೊಲೀಸರು ರವಿ ಕಪೂರ್ ಮತ್ತು ಅಮಿತ್ ಶುಕ್ಲಾನನ್ನು ಬಂಧಿಸಿದ್ದರು. ಅದಾದ ಬಳಿಕ ತನಿಖೆಯು ಮಹತ್ವದ ತಿರುವು ಪಡೆದುಕೊಂಡು, ಈ ಇಬ್ಬರೂ ಇನ್ನೊಂದು ಕೊಲೆ ಕೇಸ್​ನಲ್ಲಿ ಭಾಗಿಯಾಗಿದ್ದು ಪತ್ತೆಯಾಗಿತ್ತು. ಅಲ್ಲದೇ, ಎರಡೂ ಕೊಲೆಗಳಿಗೆ ಒಂದೇ ಕಾರನ್ನು ಬಳಸಿದ್ದು ಕಂಡು ಬಂದಿತ್ತು.

ಇದಾದ ಬಳಿಕ ಈ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ 2010ರಲ್ಲಿ ಇತರ ಮೂವರು ಆರೋಪಿಗಳಾದ ಬಲ್ಜೀತ್ ಮಲಿಕ್, ಅಜಯ್ ಕುಮಾರ್ ಮತ್ತು ಅಜಯ್ ಸೇಥಿಯನ್ನು ಬಂಧಿಸಿ, ಐವರ ವಿರುದ್ಧ ಕೋರ್ಟ್​ಗೆ ಆರೋಪಪಟ್ಟಿ ಸಲ್ಲಿಸಲಾಗಿತ್ತು. 2010ರ ನವೆಂಬರ್ 16ರಂದು ಸಾಕೇತ್ ನ್ಯಾಯಾಲಯದಲ್ಲಿ ವಿಚಾರಣೆಯು ಪ್ರಾರಂಭವಾಗಿತ್ತು. 2016ರ ಜುಲೈ 19ರಂದು ನ್ಯಾಯಾಲಯವು ಪ್ರಕರಣದ ವಿಚಾರಣೆ ಮುಕ್ತಾಯಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

About The Author

Leave a Reply

Your email address will not be published. Required fields are marked *