ಮಾಲೂರಿಗೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆ
1 min read
ಮಾಲೂರಿಗೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆ
ಕರ್ನಾಟಕದಲ್ಲಿ ಜನಿಸಿದ ಎಲ್ಲರೂ ಒಂದೇ ಎಂಬ ಸಂದೇಶ
ಮಾಲೂರಿನಲ್ಲಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
ರಾಜ್ಯವನ್ನು ಮೈಸೂರಿನಿಂದ ಕರ್ನಾಟಕ ಎಂದು ಮರು ನಾಮಕರಣ ಮಾಡುವ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಸಂಭ್ರಮ-50 ಆಚರಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ವಿ. ಹನುಮಂತಪ್ಪ ಹೇಳಿದರು.
ರಾಜ್ಯವನ್ನು ಮೈಸೂರಿನಿಂದ ಕರ್ನಾಟಕ ಎಂದು ಮರು ನಾಮಕರಣ ಮಾಡುವ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಸಂಭ್ರಮ-50 ಆಚರಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ವಿ. ಹನುಮಂತಪ್ಪ ಹೇಳಿದರು.
ಮಾಲೂರು ಪಟ್ಟಣದಲ್ಲಿ ಕರ್ನಾಟಕ ಸಂಭ್ರಮ 50ರ ರಥೋತ್ಸವ ಅದ್ದೂರಿಯಾಗಿ ಸ್ವಾಗತಿಸಿ ಅವರು ಮಾತನಾಡಿದರು.
ಕರ್ನಾಟಕವೆಂದು ನಾಮಕರಣವಾಗಿ 50 ವರ್ಷ ಪೂರೈಸಿದ ಪ್ರಯುಕ್ತ ಕನ್ನಡ ನಾಡಿನಾದ್ಯಂತ ಸಂಚರಿಸುತ್ತಿರುವ ಕರ್ನಾಟಕ ಸಂಭ್ರಮ-50 ರಥ ಕನ್ನಡ ನಾಡು ಸಂಸ್ಕೃತಿ ಹಾಗೂ ವೈವಿಧ್ಯತೆ ಕುರಿತು ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕನ್ನಡಿಗರಾದ ನಾವೆಲ್ಲರೂ ಒಂದೆ ಎಂಬ ಸೌಹಾರ್ಧ ಸಂದೇಶ ಸಾರುವ ಈ ರಥ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರದೊಂದಿಗೆ ಕರ್ನಾಟಕದ ಎಲ್ಲರ ಮನೆ ಮನ ಬೆಳಗಲಿದೆ ಎಂದರು.
ಕನ್ನಡ ನಮ್ಮ ಉಸಿರು, ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿದ ಕರ್ನಾಟಕ ಸಾಂಸ್ಕೃತಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಭವ್ಯ ಪರಂಪರೆ ಹೊಂದಿದೆ, ಅಂತಹ ಭವ್ಯ ಪರಂಪರೆಯನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವುದೆ ಈ ಕರ್ನಾಟಕ ಸಂಭ್ರಮ-೫೦ರ ಆಶಯವಾಗಿದೆ ಎಂದರು. ಈ ವೇಳೆ ತಹಶೀಲ್ದಾರ್ ಕೆ.ರಮೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಕೃಷ್ಣಪ್ಪ, ಬಿಇಒ ಚಂದ್ರಕಲಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್, ಪುರಸಭೆ ಸದಸ್ಯೆ ವಿ.ಮುರಳೀಧರ್ ಇದ್ದರು.