ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಕನ್ನಡಿಗ ಕೆಎಲ್ ರಾಹುಲ್!
1 min readಹೌದು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್ ಗಳಿಸುವ ಮೂಲಕ ನೆದರ್ಲ್ಯಾಂಡ್ಸ್ ಗೆಲ್ಲಲು 411ರನ್ ಗಳ ಗುರಿ ನೀಡಿತು. ಈ ಬೃಹತ್ ಮೊಕೆತ್ತ ಪೇರಿಸುವಲ್ಲಿ ಕೆಎಲ್. ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಅಮೋಘ ಪ್ರದರ್ಶನ ಪ್ರಮುಖ ಪಾತ್ರ ವಹಿಸಿತು.
ಐಸಿಸಿ ವಿಶ್ವಕಪ್: ಶ್ರೇಯಸ್, ರಾಹುಲ್ ಭರ್ಜರಿ ಶತಕ, ನೆದರ್ಲ್ಯಾಂಡ್ಸ್ ಗೆ 411 ರನ್ ಗಳ ಗುರಿ ನೀಡಿದ ಭಾರತಶ್ರೇಯಸ್ ಅಯ್ಯರ್ 94 ಎಸೆತಗಳಲ್ಲಿ 128 ರನ್ ಗಳಿಸಿ ಅಜೇಯರಾಗಿ ಉಳಿದರೆ, ಕೆಎಲ್ ರಾಹುಲ್ 64 ಎಸೆತಗಳಲ್ಲಿ 102 ರನ್ ಗಳಿಸಿದರು. ಈ ಮೂಲಕ ಕೆಎಲ್ ರಾಹುಲ್ ಕೇವಲ 62 ಎಸೆತಗಳಲ್ಲಿ ಹೊಸ ಮೈಲಿಗಲ್ಲು ತಲುಪುವ ಮೂಲಕ ವಿಶ್ವಕಪ್ ಪಂದ್ಯದಲ್ಲಿ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರ ಎನಿಸಿಕೊಂಡರು. ಅಫ್ಘಾನಿಸ್ತಾನ ವಿರುದ್ಧ 63 ಎಸೆತಗಳಲ್ಲಿ ಶತಕ ಗಳಿಸಿದ್ದ ರೋಹಿತ್ ಶರ್ಮಾ ಅವರ ಹಿಂದಿನ ದಾಖಲೆಯನ್ನು ಮುರಿದರು.ಈ ಸಾಧನೆ ಮಾಡುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಕೆಎಲ್ ರಾಹುಲ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.