ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಹಾಳು, ಸಿಎಂ ಎಷ್ಟು ದಿನ ರಾಜ್ಯಭಾರ ಮಾಡ್ತಾರೋ ಗೊತ್ತಿಲ್ಲ: ಮೋದಿ

1 min read

ಕಾಂಗ್ರೆಸ್ ಆಡಳಿತದಿಂದಾಗಿ ಕರ್ನಾಟಕ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ, ಕಾಂಗ್ರೆಸ್ ಸರ್ಕಾರವು ರಾಜ್ಯವನ್ನು ಹಾಳುಗೆಡವಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿಗಳು ಎಷ್ಟು ದಿನಗಳವರೆಗೆ ಆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂಬ ಬಗ್ಗೆ ಅನುಮಾನ ಹುಟ್ಟುಹಾಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು.

ಮಧ್ಯಪ್ರದೇಶದ ಖಾಂಡ್ವಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ. ಅವರು ಎಲ್ಲಿ ಸರ್ಕಾರ ರಚಿಸಿದ್ದಾರೋ ಆ ರಾಜ್ಯಗಳ ಅಭಿವೃದ್ಧಿ ಕುಂಠಿತಗೊಂಡಿದೆ. ನಾಯಕರು ಪರಸ್ಪರ ಆಂತರಿಕ ಕಚ್ಚಾಟದಲ್ಲಿ ತೊಡಗಿದ್ದು, ಸಾರ್ವಜನಿಕರ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕದಲ್ಲಿ ಕಳೆದ ಆರು ತಿಂಗಳ ಹಿಂದೆಯಷ್ಟೇ ರಚನೆಯಾದ ಕಾಂಗ್ರೆಸ್ ಸರ್ಕಾರವನ್ನು ನೋಡಿ, ಸಿಎಂ ಎಷ್ಟು ದಿನ ರಾಜ್ಯಭಾರ ಮಾಡುತ್ತಾರೋ ಗೊತ್ತಿಲ್ಲ. ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಇಡೀ ರಾಜ್ಯವನ್ನೇ ಹಾಳು ಮಾಡಿದ್ದಾರೆ. ಇದು ಕಾಂಗ್ರೆಸ್‌ನ ಸಂಸ್ಕೃತಿ ಎಂದರು.

ದೆಹಲಿಯಲ್ಲಿ ಕುಳಿತುಕೊಳ್ಳುವ ಅವರ ನ್ಯಾಯಾಧೀಶರು ತೀರ್ಪು ನೀಡುತ್ತಾರೆ, ಅದರಂತೆ ಸರ್ಕಾರ ನಡೆಸುತ್ತಾರೆ. ಯಾವ ಯಾವ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಪ್ಪಾಗಿ ರಚನೆಯಾಗಿದೆಯೋ ಅಲ್ಲಿನ ಮುಖ್ಯಮಂತ್ರಿ ಮತ್ತು ಅವರ ಉಪನಾಯಕರ ನಡುವೆ ರಾಜ್ಯವನ್ನು ಲೂಟಿ ಮಾಡುವ ಪೈಪೋಟಿ ನಡೆಯುತ್ತಿದೆ. ಕರ್ನಾಟಕದಿಂದ ಇಂತಹ ಸುದ್ದಿಗಳು ನಿಯಮಿತವಾಗಿ ಕೇಳಿ ಬರುತ್ತಿವೆ ಎಂದು ಹೇಳಿದರು.

ಬಳಿಕ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ವೈಷಮ್ಯ ಮತ್ತು ಎರಡು ಗುಂಪುಗಳ ನಡುವಿನ ಅಂತಃಕಲಹಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡು ಮೋದಿ ವಾಗ್ದಾಳಿ ನಡೆಸಿದರು.

ಇನ್ನು ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯನವರು, ರಾಜ್ಯದಲ್ಲಿ ಸಿಎಂ ಬದಲಾವಣೆಯ ಬಗ್ಗೆ ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಸರ್ಕಾರ ರಚಿಸುವ ತಮ್ಮ ಕನಸು ನನಸಾಗದಿದ್ದರಿಂದ ಬಿಜೆಪಿ ಮತ್ತು ಜೆಡಿಎಸ್ ಹತಾಶೆಗೊಂಡಿವೆ. ಅವರು ಹೇಳುವುದೆಲ್ಲಾ ನಿಜವಾಗುವುದಿಲ್ಲ ಎಂದಿದ್ದಾರೆ.

ಈ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಮಧ್ಯಪ್ರದೇಶವೂ ಕೂಡ ಒಂದು. 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

About The Author

Leave a Reply

Your email address will not be published. Required fields are marked *