ಇಡಿ ಸಮನ್ಸ್‌ನ ಕಾನೂನುಬದ್ಧತೆ ಪ್ರಶ್ನಿಸಿದ ಕೇಜ್ರಿವಾಲ್;
1 min readದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಅಬಕಾರಿ ನೀತಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ತಮಗೆ ನೀಡಿರುವ ಸಮನ್ಸ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿದ್ದಾರೆ.
ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಕ್ಟೋಬರ್ 30 ರಂದು ದೆಹಲಿ ಸಿಎಂ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ. ಈ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದಿರುವ ದೆಹಲಿ ಸಿಎಂ, ನೋಟಿಸ್ ಹಿಂಪಡೆಯುವಂತೆ ಕೇಂದ್ರ ತನಿಖಾ ಸಂಸ್ಥೆಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ನಾನು ಹೋಗದಂತೆ ತಡೆಯಲು, ಬಿಜೆಪಿ ಒತ್ತಾಯದ ಮೆರೆಗೆ ನನಗೆ ನೋಟಿಸ್ ಕಳುಹಿಸಲಾಗಿದೆ. ಇಡಿ ತಕ್ಷಣ ಈ ನೋಟಿಸ್ ಅನ್ನು ಹಿಂಪಡೆಯಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯ ತನಿಖಾ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ, ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ.
ಆಡಳಿತಾರೂಢ ಆಮ್ ಆದ್ಮಿ ಪಕ್ಷ(ಎಎಪಿ)ದ ಮೂಲಗಳ ಪ್ರಕಾರ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ. ಮಧ್ಯ ಪ್ರದೇಶ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ.
“ಅವರು ಮಧ್ಯಪ್ರದೇಶದ ಸಿಂಗ್ರೌಲಿಗೆ ಹೋಗಲಿದ್ದು, ಅಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಸ್ವಲ್ಪ ಸಮಯದ ನಂತರ ಅವರು ಮಧ್ಯಪ್ರದೇಶಕ್ಕೆ ತೆರಳಲಿದ್ದಾರೆ” ಎಂದು ಪಕ್ಷದ ಮೂಲಗಳು ತಿಳಿಸಿವೆ.
“ಕೇಜ್ರಿವಾಲ್ ಅವರು ಮಧ್ಯಪ್ರದೇಶದ ಸಿಂಗ್ರೌಲಿಗೆ ಹೋಗಲಿದ್ದು, ಅಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸ್ವಲ್ಪ ಸಮಯದಲ್ಲೇ ಅವರು ಮಧ್ಯಪ್ರದೇಶಕ್ಕೆ ತೆರಳಲಿದ್ದಾರೆ” ಎಂದು ಪಕ್ಷದ ಮೂಲಗಳು ತಿಳಿಸಿವೆ.