ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿರುವ ಎಂಜಿ ಮೋಟಾರ್ ಕಂಪನಿ ಎಲೆಕ್ಟ್ರಿಕ್ ಕಾರಿನ ದರ, ವಿಶೇಷತೆ ತಿಳಿಯಿರಿ
1 min readಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಲಗ್ಗೆ ಇಡುತ್ತಿದ್ದಂತೆ ಆಟೋಮೊಬೈಲ್ ಕ್ಷೇತ್ರದಲ್ಲಿ ಪೈಪೋಟೀ ಹೆಚ್ಚಾಗಿದೆ. ಕಡಿಮೆ ದರದಲ್ಲಿ ಉತ್ತಮ ಸೌಲಭ್ಯಗಳನ್ನೊಳಗೊಂಡ ಕಾರು, ಬೈಕ್‌ಗಳು ಎಲೆಕ್ಟ್ರಿಕ್ ವಿಭಾಗದಲ್ಲಿ ಬಿಡುಗಡೆಯಾಗುತ್ತಿವೆ.
ಇದರಿಂದ ಇದೀಗ ಎಲ್ಲಾ ಕಂಪನಿಗಳು ತಾವೇನು ಕಡಿಮೆಯಿಲ್ಲವೆಂಬಂತೆ ಹೊಸ ಹೊಸ ಮಾದರಿಯಲ್ಲಿ ವಾಹನಗಳನ್ನು ಮಾರುಕಟ್ಟೆಗೆ ತರುವ ಮೂಲಕ ಗ್ರಾಹಕರನ್ನು ಸೆಳೆಯುವ ಕೆಲಸ ಮಾಡುತ್ತಿವೆ. ಹಾಗೆಯೇ ಇದೀಗ ಎಂಜಿ ಮೋಟಾರ್ ಕಂಪನಿಯು ಕೂಡ ಹೊಸ ಎಲೆಕ್ಟ್ರಿಕ್ ಕಾರು ಬಿಡಲು ಮುಂದಾಗಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆನೆ ಶೀಘ್ರದಲ್ಲಿಯೇ ಎಂಜಿ ಮೋಟಾರ್ ಕಂಪನಿ ಸಹ ತನ್ನ ಹೊಸ ಕ್ಲೌಡ್ ಎಲೆಕ್ಟ್ರಿಕ್ ಎಂಪಿವಿ ಪರಿಚಯಿಸಲು ನಿರ್ಧರಿಸಿದೆ. ಹೊಸ ಇವಿ ಕಾರನ್ನು ಬಿಡುಗಡೆ ಮಾಡಲು ಈಗಾಗಲೇ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಮಧ್ಯಮ ಕ್ರಮಾಂಕದ ಕಾರು ಮಾರಾಟ ವಿಭಾಗದಲ್ಲಿ ಬೇಡಿಕೆ ಹೆಚ್ಚಾಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಲೇ ಇವೆ.
ಭಾರತದಲ್ಲಿ ಸದ್ಯ ಜೆಡ್‌ಎಸ್ ಇವಿ ಮತ್ತು ಕಾಮೆಟ್ ಇವಿ ಕಾರುಗಳ ಮೂಲಕ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಇದನ್ನು ಗಮನಿಸಿದ ಎಂಜಿ ಮೋಟಾರ್ ಕಂಪನಿಯು ಇದೀಗ ಕ್ಲೌಡ್ ಇವಿ ಕಾರನ್ನು ರಸ್ತೆಗಿಳಿಸಲಿ ನಿರ್ಧರಿಸಿದೆ. ಇದು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರಲಿದೆ. ಅಲ್ಲದೆ, ಇದಯ ಜೆಡ್‌ಎಸ್ ಇವಿ ಮತ್ತು ಕಾಮೆಟ್ ಇವಿ ಕಾರುಗಳ ವಿನ್ಯಾಸದಲ್ಲಿ ಮಾರುಕಟ್ಟೆಗೆ ಬರಲಿದೆ.
ಚೀನಾ ಮಾರುಕಟ್ಟೆಯಲ್ಲಿ ಸದ್ಯ ಮಾರಾಟದಲ್ಲಿರುವ ವುಲ್ಲಿಂಗ್ ಮೋಟಾರ್ ನಿರ್ಮಾಣದ ಕ್ಲೌಡ್ ಇವಿ ಕಾರು ಮಾದರಿಯನ್ನೇ ಎಂಜಿ ಮೋಟಾರ್ ಕಂಪನಿ ಭಾರತದಲ್ಲಿ ಹೊಸ ಬದಲಾವಣೆಗೊಂದಿಗೆ ಬಿಡುಗಡೆ ಮಾಡಲು ಮುಂದಾಗಿದೆ. ಈ ಕಾರು ದೇಶಿಯ ಮಾರುಕಟ್ಟೆಯಲ್ಲಿ ಹೊಸ ವಿನ್ಯಾಸಗಳೊಂದಿಗೆ ಗ್ರಾಹಕರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕಂಪನಿಯ ಮೂಲಗಳು ಹೇಳುತ್ತಿವೆ.
ಚೀನಾದಲ್ಲಿರುವ ವುಲ್ಲಿಂಗ್ ಮೋಟಾರ್ ಕಂಪನಿ ಸದ್ಯ ಎಂಜಿ ಮಾತೃ ಸಂಸ್ಥೆಯಾದ ಸೈಕ್ ಜೊತೆ ಕಾರ್ಯನಿರ್ವಹಿಸುತ್ತಿದ್ದು, ಉದ್ಯಮ ವಿಸ್ತರಣೆಯ ಭಾಗವಾಗಿ ಎಂಜಿ ಕಂಪನಿಯು ವುಲ್ಲಿಂಗ್ ಕಂಪನಿಯ ಜನಪ್ರಿಯ ಇವಿ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ.
ವುಲ್ಲಿಂಗ್ ಕಂಪನಿಯ ಕಾಮೆಟ್ ಇವಿ ಬಳಿಕ ಇದೀಗ ಕ್ಲೌಡ್ ಎಂಪಿವಿ ಕಾರನ್ನು ಸಹ ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ವಿನ್ಯಾಸಗಳೊಂದಿಗೆ ಬಿಡುಗಡೆ ಮಾಡಲಾಗುತ್ತಿದೆ. ಇದು 4,295 ಎಂಎಂ ಉದ್ದ ಇರಲಿದ್ದು, ಇದು ಅತ್ಯಾಧುನಿಕ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ.
ಇನ್ನು ಈ ಹೊಸ ಇವಿ ಕಾರು ಮಾದರಿಯಲ್ಲಿ ಎಂಜಿ ಕಂಪನಿಯು ಭರ್ಜರಿ ಮೈಲೇಜ್ ನೀಡುವ ವಿವಿಧ ಬ್ಯಾಟರಿ ಪ್ಯಾಕ್ ಆಯ್ಕೆ ನೀಡಲಿದ್ದು, ಹೊಸ ಕಾರಿನ ಟಾಪ್ ಎಂಡ್ ಮಾದರಿಯು 50.6 kWh ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ ಒಂದು ಬಾರಿ ಚಾರ್ಜ್ ಮಾಡಿದರೆ, 460 ಕಿಲೋ ಮೀಟರ್ ಮೈಲೇಜ್ ಕೊಡಲಿದೆ ಎನ್ನಲಾಗುತ್ತಿದೆ.
ಈ ಕಾರಿನಲ್ಲಿ ಎಲ್‌ಇಡಿ ಲೈಟ್ಸ್, ಫ್ಲಶ್ ಡೋರ್ ಹ್ಯಾಂಡಲ್ಸ್, ಡ್ಯುಯಲ್ ಡಿಜಿಟಲ್ ಸ್ಕ್ರೀನ್, 360 ಡಿಗ್ರಿ ಕ್ಯಾಮೆರಾ, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಕನೆಕ್ಡೆಡ್ ಕಾರ್ ಟೆಕ್ ಸೇರಿದಂತೆ ವಿವಿಧ ಸೌಲಭ್ಯಗಳು ಇರಲಿವೆ. ಗರಿಷ್ಠ ಸುರಕ್ಷತೆಗಾಗಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ನೀಡಲಾಗುತ್ತಿದ್ದು, ಇದು ಅಪಘಾತಗಳನ್ನು ತಡೆಯುವ ಮೂಲಕ ಪ್ರಾಣಹಾನಿ ಆಗುವುದನ್ನು ನಿಯಂತ್ರಿಸಲಿದೆ. ಇನ್ನು ಇದರ ಎಕ್ಸ್‌ಶೋ ರೂಂ ದರ 18 ಲಕ್ಷದಿಂದ 20 ಲಕ್ಷದವರೆಗೂ ಇರಲಿದೆ ಎನ್ನುವ ಅಪ್ಡೇಟ್ ಮಾಹಿತಿ ಲಭ್ಯವಾಗಿದೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday