ರಾಜಕೀಯದಲ್ಲಿ ಕುಮಾರಸ್ವಾಮಿ ವಿಲನ್; ಕನಕಪುರ ವಿಚಾರ ನನಗೆ ಗೊತ್ತಿಲ್ಲ, ಡಿಕೆಶಿಯನ್ನೆ ಕೇಳಿ: ಸಿದ್ದರಾಮಯ್ಯ
1 min readಕನಕಪುರ ವಿಚಾರದಲ್ಲಿ ಮಾತನಾಡಿದ ಅವರು, ಆ ವಿಷಯವನ್ನು ಡಿ.ಕೆ ಶಿವಕುಮಾರ್ ಅವರನ್ನೆ ಕೇಳಿ. ನನಗೆ ಅದು ಗೊತ್ತಿಲ್ಲ. ನನ್ನ ಜೊತೆ ಅವರು ಚರ್ಚೆ ಮಾಡಿಲ್ಲ. ನನಗೆ ಅವರ ಮೈಂಡ್ ನಲ್ಲಿ ಏನೂ ಇದೆ ಎಂಬುದು ಗೊತ್ತಿಲ್ಲ. ಗೊತ್ತಿಲ್ಲದ ವಿಚಾರದ ಬಗ್ಗೆ ಹೆಚ್ಚಾಗಿ ಮಾತಾಡುವುದಿಲ್ಲ ಎಂದರು.
ರಾಜಕೀಯದಲ್ಲಿ ವಿಲನ್ ಇದ್ದರೆ ಅದು ಮಿಸ್ಟರ್ ಕುಮಾರಸ್ವಾಮಿ. ಸಮ್ಮಿಶ್ರ ಸರ್ಕಾರ ಬೀಳುವಾಗ ಅಮೆರಿಕದಲ್ಲಿ ಕೂತಿದ್ದರು ಇದಕ್ಕೆ ಏನೂ ಕರೆಯಬೇಕು. ಇಡೀ ಒಂದು ವರ್ಷ ಎರಡು ತಿಂಗಳು ತಾಜ್ ವೆಸ್ಟ್ ಎಂಡ್ ನಲ್ಲಿ ಕಾಲ ಕಳೆದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರ ಬೀಳುವಾಗ ಅಮೆರಿಕದಲ್ಲಿ ಕೂತಿದ್ದರು. ಇದಕ್ಕೆ ಏನನ್ನಬೇಕು? ಒಂದು ವರ್ಷ ಎರಡು ತಿಂಗಳು ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲೇ ಕಾಲ ಕಳೆದರು, ವಿಧಾನಸಭೆಯಲ್ಲಿ ಬಿಜೆಪಿ ಅವರೇ ಸರಕಾರ ಬೀಳಿಸಿದ್ದು ಅಂತಾ ಹೇಳಿದರು. ಇದು ರೆಕಾರ್ಡ್ ಆಗಿದೆ. ಅಸೆಂಬ್ಲಿ ರೆಕಾರ್ಡ್ ಬೇಕಾದರೆ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ.
ಬಿಜೆಪಿಯವರು ಹತಾಶರಾಗಿದ್ದಾರೆ. ಆ ಪಕ್ಷದವರಿಗಿಂತಲೂ ಕುಮಾರಸ್ವಾಮಿ ಜಾಸ್ತಿ ಹತಾಶರಾಗಿದ್ದಾರೆ ಎಂದು ವ್ಯಂಗ್ಯವಾಡಿದರು. ಬಿಜೆಪಿ – ಜೆಡಿಎಸ್‌ನದ್ದು ಕುರುಡರ ಕಥೆಯಾಗಿದೆ. ಇವರು ಅವರ ಮೇಲೆ, ಅವರು ಇವರ ಮೇಲೆ ಅವಲಂಬಿತರಾಗಿದ್ದಾರೆ. ಖಾಲಿ ಡಬ್ಬ ಮಾತ್ರ ಶಬ್ದ ಜಾಸ್ತಿ ಮಾಡುತ್ತದೆ. ತುಂಬಿದ ಕೊಡ ಎಂದಿಗೂ ತುಳುಕುವುದಿಲ್ಲ ಎಂದು ಬಿಜೆಪಿ–ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದರು.