ಮಜರಾಹೊಸಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಲೀಲಮ್ಮಪಿಳ್ಳೆಗೌಡ
1 min readಮಜರಾಹೊಸಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಲೀಲಮ್ಮಪಿಳ್ಳೆಗೌಡ
ಪಕ್ಷಾತೀತವಾಗಿ ಅಧ್ಯಕ್ಷ, ಉಪಾಧ್ಯಕ್ಷರು ಅವಿರೋಧ ಆಯ್ಕೆ
ದೊಡ್ಡಬಳ್ಳಾಪುರ ತಾಲ್ಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ವೀರಾಪುರ ಸದಸ್ಯೆ ಲೀಲಮ್ಮಪಿಳ್ಳೆಗೌಡ, ಉಪಾಧ್ಯಕ್ಷರಾಗಿ ಮಾರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 18 ಸದಸ್ಯ ಬಲ ಹೊಂದಿರುವ ದೊಡ್ಡಬಳ್ಳಾಪುರ ತಾಲೂಕಿನ ಮಜರಾಹೊಸಹಳ್ಳಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಇಂದು ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ವೀರಾಪುರ ವಾರ್ಡ್ ಸದಸ್ಯೆ ಲೀಲಮ್ಮಪಿಳ್ಳೆಗೌಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಾರಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಇಬ್ಬರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಶಶಿಶೇಖರ್ ಘೋಷಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನ ಅಭಿನಂದಿಸಿ ಮಾತನಾಡಿದ ಕೆಎಂಎ ನಿರ್ದೇಶಕ ಬಿಸಿ ಆನಂದ್ ಕುಮಾರ್, ಈ ಭಾಗದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಶ್ ಮೂವರು ಸಮಾನ ಮನಸ್ಕರಾಗಿ ಕೆಲಸ ಮಾಡುತ್ತೇವೆ. ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಒಂದು ಸಲ ಹೊರತುಪಡಿಸಿ ಈವರೆಗೂ ಅವಿರೋಧವಾಗಿಯೇ ಆಯ್ಕೆ ಪ್ರಕ್ರಿಯೆ ನಡೆದಿದೆ. ಈ ಭಾಗದಲ್ಲಿ ಯಾವುದೇ ಪಕ್ಷ, ಜಾತಿ ಮುಖ್ಯವಲ್ಲ. ಹಿರಿಯ ಮುಖಂಡರಾದ ರಂಗರಾಜು ಅವರ ಮಾರ್ಗದರ್ಶನದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಅಭಿವೃದ್ಧಿಗೆ ಶಾಸಕ ಧೀರಜ್ ಮುನಿರಾಜು ಸಹಕಾರ ನೀಡಿದ್ದಾರೆ. ಯಾವುದೇ ಅಕ್ರಮ, ಭ್ರಷ್ಟಾಚಾರಗಳಿಗೆ ಅವಕಾಶ ಇಲ್ಲದಂತೆ ಇಲ್ಲಿನ ಸದಸ್ಯರು ಪ್ರಾಮಾಣಿಕವಾಗಿ ಕೆಲಸ ಮಾಡಲಿ ಎಂದು ಶುಭಾಹಾರೈಸಿದರು.