ಶಾಂತಿನಿಕೇತನ್ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
1 min readಶಾಂತಿನಿಕೇತನ್ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
ವಿದ್ಯಾರ್ಥಿ ಜೀವನದಲ್ಲಿ ದಾರಿ ತಪ್ಪದಂತೆ ಅರಿವು ಮೂಡಿಸಿದ ಗಣ್ಯರು
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘದ ಸಹಯೋಗದಲ್ಲಿ ರಾಷ್ಟಿಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಶಾಂತಿನಿಕೇತನ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಚಿಕ್ಕಬಳ್ಳಾಪುರ ನಗರದ ಶಾಂತಿನಿಕೇತನ್ ಪಿಯು ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘದ ಸಹಯೋಗದಲ್ಲಿ ರಾಷ್ಟಿಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎನ್ ಭವಾನಿ ಅವರು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಡಿವೈಎಸ್ಪಿ ಶಿವಕುಮಾರ್, ತಂದೆ ತಾಯಿ ಮಕ್ಕಳನ್ನು ಚೆನ್ನಾಗಿ ಬೆಳೆಸಬೇಕೆಂದು ಹಗಳಿರುಳು ದುಡಿದು ಶಾಲಾ ಕಾಲೇಜಿಗೆ ಕಳುಹಿಸುತ್ತಾರೆ. ಅದೇ ರೀತಿ ಮಕ್ಕಳೂ ಚೆನ್ನಾಗಿ ಓದಿ ಬೆಳೆಯಬೇಕು. ದುಶ್ಚಟಗಳ ಕಡೆ ಮುಖ ಮಾಡಬಾರದು, ಮೊಬೈಲ್ ಬಳಕೆ ಒಳ್ಳೆಯ ವಿಚಾರವಾಗಿ ಬಳಸಿ. ಸ್ನೇಹವನ್ನು ಮಾಡುವಾಗ ಯೋಚನೆ ಮಾಡಿ, ನಿಮ್ಮನ್ನು ದಾರಿ ತಪ್ಪಿಸುವ ಕೆಲಸ ಮಾಡ್ತಾರೆ ಅಂತಹ ವಿಚಾರಗಳು ಕಂಡು ಬಂದಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿ ಎಂದರು.
ಈ ವೇಳೆ ಬಾಲ್ಯವಿವಾಹ, ಜಮೀನು ವಿವಾದ, ಪೋಷಕರ ಕುರಿತು ಕೆಂಪೇಗೌಡ ಕಾನೂನು ಕಾಲೇಜು ವಿದ್ಯಾರ್ಥಿಗಳಿಂದ ಕಾನೂನು ಅರಿವಿನ ನಾಟಕ ಮಾಡಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಶಾಂತಿನಿಕೇತನ ಪಿಯು ಕಾಲೇಜಿನ ವ್ಯವಸ್ಥಾಪಕ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸ ಸಂದರ್ಭದಲ್ಲಿ ಯಾವುದೆ ಕಾರಣಕ್ಕೂ ದಾರಿ ತಪ್ಪುವ ನಿರ್ಣಯಗಳನ್ನು ತೆಗೆದುಕೊಳ್ಳಬೇಡಿ, ಅತುರದಿಂದ ತೆಗೆದುಕೊಂಡು ನಿರ್ಧಾರಗಳು ನಿಮ್ಮ ಭವಿಷ್ಯವನ್ನು ಹಾಳು ಮಾಡುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ನ್ಯಾಯಾಧೀಶರಾದ ಶಿವಪ್ರಸಾದ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಉಮೇಶ್, ಭಾರತಿ, ಪ್ರೇಮ್ ಕುಮಾರ್, ಮಾನಸಶೇಖರ್, ಶೃತಿ ಇದ್ದರು.