ಸಿದ್ದಗಂಗ ಮಠದ ಆವರಣದಲ್ಲಿ ಚಿರತೆ ಪ್ರತ್ಯಕ್ಷ
1 min readಸಿದ್ದಗಂಗ ಮಠದ ಆವರಣದಲ್ಲಿ ಚಿರತೆ ಪ್ರತ್ಯಕ್ಷ
ಚಿರತೆ ಓಡಾಟದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಕಲ್ಪತರುನಾಡು ತುಮಕೂರು ಜಿಲ್ಲೆಯಲ್ಲಿ ಕೆಲ ದಿನಗಳಿಂದ ಚಿರತೆಗಳ ಹಾವಳಿ ಹೆಚ್ಚಾಗಿದೆ. ಎಲ್ಲೆ0ದರಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಜನರು ಭಯಬೀತರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ತುಮಕೂರು ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಕಾಡು ಬಿಟ್ಟು ನಾಡಿನತ್ತ ಮುಖ ಮಾಡಿರುವ ಚಿರತೆಗಳು ರಾತ್ರಿ ವೇಳೆ ಜನರು ಓಡಾಟ ನಡೆಸಲು ಭಯಬೀತರಾಗಿದ್ದಾರೆ. ಇದೀಗ ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿದ್ದಗಂಗಾ ಮಠದ ಮಕ್ಕಳಲ್ಲಿ ಆತಂಕ ಸೃಷ್ಟಿಯಾಗಿದೆ.
ಕಳೆದ ಶನಿವಾರ ರಾತ್ರಿ 11.30ರ ಸಮಯದಲ್ಲಿ ಸಿದ್ದಗಂಗಾ ಹಳೆ ಮಠದ ಆವರಣದಲ್ಲಿ ಚಿರತೆಯೊಂದು ಓಡಾಟ ನಡೆಸಿದೆ. ಚಿರತೆ ಓಡಾಟದ ದೃಶ್ಯ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಇದೀಗ ಚಿರತೆ ಓಡಾಟದಿಂದ ಸಿದ್ದಗಂಗಾ ಮಠದಲ್ಲಿ ಓದುತ್ತಿರುವ ಸಾವಿರಾರು ಮಕ್ಕಳಲ್ಲಿ ಆತಂಕ ಸೃಷ್ಟಿ ಮಾಡಿದೆ. ಸದ್ಯ ಘಟನೆ ಸಂಬ0ಧ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಬೋನ್ ಇಡಲು ಮುಂದಾಗಿದ್ದಾರೆ. ಒಟ್ಟಿನಲ್ಲಿ ಸಿದ್ದಗಂಗಾ ಮಠದ ಆವರಣದಲ್ಲಿ ಚಿರತೆ ಪ್ರತ್ಯಕ್ಷದಿಂದ ಭಕ್ತರು ಹಾಗೂ ವಿದ್ಯಾರ್ಥಿಗಳಲ್ಲಿ ಆಂತಕ ಸೃಷ್ಟಿಯಾಗಿದೆ.