ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಚಿಕ್ಕಬಳ್ಳಾಪುರ ಮಾದರಿಯಾಗಲಿ

1 min read

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಚಿಕ್ಕಬಳ್ಳಾಪುರ ಮಾದರಿಯಾಗಲಿ

ಎಲ್ಲರೂ ಪಕ್ಷದ ಘಟಕಗಳ ಅಧ್ಯಕ್ಷರ ಆದೇಶ ಪಾಲಿಸಿ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಡಾ.ಕೆ.ಸುಧಾಕರ್ ಕರೆ

ಸದಸ್ಯತ್ವ ಅಭಿಯಾನದಲ್ಲಿ ಸಂಸದ ಡಾ.ಕೆ.ಸುಧಾಕರ್ ಕರೆ

ಬಯಲುಸೀಮೆ ಎಂದರೆ ಬಿಜೆಪಿಗೆ ಮರುಭೂಮಿ ಎನ್ನಲಾಗುತ್ತಿತ್ತು. ಇಂತಹ ಪ್ರದೇಶದಲ್ಲೆ ಬಿಜೆಪಿಯನ್ನು ಗಟ್ಟಿಯಾಗಿ ಕಟ್ಟಿ, ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಸದಸ್ಯತ್ವ ಅಭಿಯಾನದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಾಗಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಕಾರ್ಯಕರ್ತರಿಗೆ ಕರೆ ನೀಡಿದರು.

ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಿದ್ದ ಜಿಲ್ಲಾ ಬಿಜೆಪಿ ಸದಸ್ಯತ್ವ ಅಭಿಯಾನದ ಸಭೆಯಲ್ಲಿ ಮಾತನಾಡಿದ ಸಂಸದ ಡಾ.ಕೆ. ಸುಧಾಕರ್, ಒಂದು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕೆ ಹೆಚ್ಚು ಸದಸ್ಯರಿದ್ದರೆ, ಚುನಾವಣೆ ಬಂದಾಗ ಅಲ್ಲಿ ನಮ್ಮ ಅಭ್ಯರ್ಥಿಯನ್ನು ನಿಲ್ಲಿಸಬಹುದು ಎಂಬ ವಿಶ್ವಾಸ ಮೂಡುತ್ತದೆ. ಜನರ ಬಳಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಸಾಧನೆಗಳನ್ನು ತಿಳಿಸಬೇಕು. ಬಯಲುಸೀಮೆ ಎಂದರೆ ಬಿಜೆಪಿಗೆ ಮರುಭೂಮಿ ಎನ್ನಲಾಗುತ್ತಿತ್ತು. ಇಂತಹ ಪ್ರದೇಶದಲ್ಲೆ ಬಿಜೆಪಿಯನ್ನು ಗಟ್ಟಿಯಾಗಿ ಕಟ್ಟಬೇಕು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಜನರ ಹೆಸರು ನೋಂದಾಯಿಸಿ, ಇಡೀ ರಾಜ್ಯಕ್ಕೆ ಮಾದರಿ ಮಾಡಬೇಕು ಎಂದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 15 ಸಾವಿರ, ಶಿಡ್ಲಘಟ್ಟದಲ್ಲಿ 10 ಸಾವಿರ ಜನರು ಬಿಜೆಪಿ ಸದಸ್ಯರಾಗಿ ಹೆಸರು ನೋಂದಾಯಿಸಿಕೊ0ಡಿದ್ದಾರೆ. ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಒಂದೂವರೆಯಿ0ದ ಎರಡು ಸಾವಿರ ಜನರು ನೋಂದಾಯಿಸಿಕೊ0ಡಿದ್ದಾರೆ. ಆದರೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 1 ಲಕ್ಷದ ಗುರಿ ಇದೆ. ಇನ್ನಷ್ಟು ಜನರನ್ನು ನೋಂದಾಯಿಸಲು ಶ್ರಮಿಸಲಾಗುವುದು ಎಂದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿಲ್ಲ. ಇಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಜನರ ಹೆಸರು ನೋಂದಾಯಿಸಲಾಗಿದೆ. ಚಿಂತಾಮಣಿಯಲ್ಲಿ ಮುಖಂಡರು ಮನಸ್ಸು ಮಾಡಿದರೆ 50 ಸಾವಿರ ಜನರ ಹೆಸರು ನೋಂದಾಯಿಸಬಹುದು. ಯಾರೂ ವ್ಯಕ್ತಿಯ ಹಿಂದೆ ಹೋಗುವುದು ಬೇಡ. ಆದರೆ ಪಕ್ಷವನ್ನು ಎಲ್ಲರೂ ಅನುಸರಿಸಬೇಕು. ಪಕ್ಷದ ಯಾವುದೇ ಘಟಕದ ಅಧ್ಯಕ್ಷರ ಆದೇಶವನ್ನು ಎಲ್ಲರೂ ಪಾಲಿಸಬೇಕು. ಸದಸ್ಯತ್ವ ನೋಂದಣಿ ಕುರಿತು ಪ್ರತಿ ದಿನ ಸಭೆಗಳನ್ನು ಮಾಡಿ ಚರ್ಚಿಸುತ್ತೇನೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ಇಂದು ನಡೆದ ಬಿಜೆಪಿ ಸದಸ್ಯತ್ವ ಅಭಿಯಾನ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿಜಯ ರಾಹಟ್ಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಸದಸ್ಯತ್ವ ಅಭಿಯಾನದ ಸಂಚಾಲಕ ಪಿ.ಸಿ.ಮೋಹನ್ ಸೇರಿದಂತೆ ಇತರರು ಭಾಗವಹಿಸಿದ್ದರು.



        

About The Author

Leave a Reply

Your email address will not be published. Required fields are marked *