ಸಿದ್ದರಾಮಯ್ಯ ರಾಜಿನಾಮೆ ನೀಡಿ ತನಿಖೆಗೆ ಸಹಕರಿಸಲಿ
1 min readಸಿದ್ದರಾಮಯ್ಯ ರಾಜಿನಾಮೆ ನೀಡಿ ತನಿಖೆಗೆ ಸಹಕರಿಸಲಿ
ಶಿಡ್ಲಘಟ್ಟದಲ್ಲಿ ಮಾಜಿ ಸಂಸದ ಮುನಿಸ್ವಾಮಿ ಒತ್ತಾಯ
ಹುಬ್ಬಳ್ಳಿ ದಾಳಿಕೋರರ ಕೋಸ್ ವಾಪಸ್‌ಗೆ ಖಂಡನೆ
ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು, ನಿಷ್ಪಕ್ಷಪಾತ ತನಿಖೆಗೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಕೋಲಾರ ಕ್ಷೇತ್ರದ ಮಾಜಿ ಸಂಸದ ಎಸ್. ಮುನಿಸ್ವಾಮಿ ಆಗ್ರಹಿಸಿದರು.
ಶಿಡ್ಲಘಟ್ಟ ನಗರದ ಬಿಜೆಪಿ ಸೇವಾ ಸೌಧ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಲಾರ ಮಾಜಿ ಸಂಸದ ಮುನಿಸ್ವಾಮಿ, ಯಡಿಯೂರಪ್ಪ ಅವರ ವಿರುದ್ಧ ಎಐಆರ್ ಆದಾಗ ನಿಷ್ಪಕ್ಷಪಾತ ತನಿಖೆಗೆ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದರು. ಆಗ ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಇದೀಗ ಸಿದ್ದರಾಮಯ್ಯ ಅವರು ಆತ್ಮಸಾಕ್ಷಿಯಂತೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಏಕೆ ನೀಡಬಾರದು ಎಂದು ಪ್ರಶ್ನಿಸಿದರು.
ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ, ಪೊಲೀಸರ ಮೇಲೆ ಹಲ್ಲೆ, ವಿಧಾನಸೌಧದಲ್ಲಿ ಪಾಕಿಸ್ತಾನ್‌ಗೆ ಜಿಂದಾಬಾದ್ ಘೋಷಣೆ ಕೂಗಿದವರ ವಿರುದ್ದದ ಕೇಸುಗಳನ್ನು ರಾಜ್ಯ ಸರಕಾರ ವಾಪಸ್ ಪಡೆಯುವ ಕೀಳು ಮಟ್ಟದ ರಾಜಕೀಯಕ್ಕೆ, ಪೊಲೀಸರ ನೈತಿಕ ಸ್ಥೆರ್ಯವನ್ನು ಕುಗ್ಗಿಸುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ದೇಶ, ರಾಜ್ಯಕ್ಕಾಗಿ, ನೀರಾವರಿ ಹೋರಾಟ, ವಿದ್ಯಾರ್ಥಿಗಳ ಹೋರಾಟದ ಕೇಸುಗಳನ್ನು ವಾಪಸ್ ಪಡೆಯಲಿ ಅಭ್ಯ0ತರವಿಲ್ಲ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದವರು, ಪೊಲೀಸರ ಮೇಲೆ ಕಲ್ಲು ತೂರುವವರ ವಿರುದ್ದ ಕೇಸು ವಾಪಸ್ ಪಡೆಯುವುದೆಂದರೆ ಸರಿಯಲ್ಲ ಎಂದು ರಾಜ್ಯ ಸರ್ಕಾರದ ಕ್ರಮ ಖಂಡಿಸಿದರು.
ಕೇವಲ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಒಂದು ಕೋಮು, ಒಂದು `ಧರ್ಮದ ಪರ ನಿಲ್ಲುವುದನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಕಾಂಗ್ರೆಸ್ ದುರಾಡಳಿತದಿಂದ ಈಗಾಗಲೆ ರಾಜ್ಯದ ಜನತೆ ಬೇಸತ್ತಿದ್ದು, ಈಗಿಂದೀಗಲೆ ವಿಧಾನಸಭಾ ಚುನಾವಣೆ ನಡೆದರೂ ಕಾಂಗ್ರೆಸ್ ಮಕಾಡೆ ಮಲಗುತ್ತದೆ. 150 ಸೀಟುಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಿಲ್ಲ ಎನ್ನುವುದು ಅವರ ವಯುಕ್ತಿಕ ಅಭಿಪ್ರಾಯ. ನಾವು ರಾಜೀನಾಮೆ ಕೇಳುತ್ತೇವೆ ಎಂದು ಸಮರ್ಥಿಸಿಕೊಂಡರು.
ಇತ್ತೀಚೆಗಷ್ಟೆ ನಡೆದ ಜಮ್ಮು ಕಾಶ್ಮೀರ, ಹರಿಯಾಣದ ವಿಧಾನಸಭ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ದೂಳಿಪಟವಾಗಿದ್ದು, ಮತ್ತೊಮ್ಮೆ ಬಿಜೆಪಿ ಸಾಮಥ್ರ ಸಾಭೀತುಪಡಿಸಿದ್ದು, ಮೋದಿ ನಾಯಕತ್ವ ಅಬಾಧಿತವಾಗಿ ಮುಂದುವರೆದಿದೆ ಎಂದರು. ಸೀಕಲ್ ರಾಮಚಂದ್ರಗೌಡ, ಗ್ರಾಮಾಂತರ ಅಧ್ಯಕ್ಷ ಸೀಕಲ್ ಆನಂದಗೌಡ, ಮಾಜಿ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಪುರುಷೋತ್ತಮ, ರಾಮಕೃಷ್ಣಪ್ಪ, ಕನಕಪ್ರಸಾದ್, ಮಂಜುಳಮ್ಮ ಇದ್ದರು.