ನೀಟ್ ಹಗರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜಿನಾಮೆ ನೀಡಲಿ
1 min readನೀಟ್ ಹಗರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜಿನಾಮೆ ನೀಡಲಿ
ಬಾಗೇಪಲ್ಲಿಯಲ್ಲಿ ಸಿಪಿಎಂ ನೇತೃತ್ವದಲ್ಲಿ ಪ್ರತಿಭಟನೆ
ನೀಟ್ ಹಗರದ ಮೂಲಕ ಕೇಂದ್ರ ಬಿಜೆಪಿ ಸರಕಾರ ಲಕ್ಷಾಂತರ ಮಂದಿ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನುಚ್ಚುನೂರು ಮಾಡಿದೆ. ಇದು ಶಿಕ್ಷಣ ಕ್ಷೇತ್ರದ ಅತಿದೊಡ್ಡ ಹಗರಣವಾಗಿದ್ದು, ಇದರ ನೇರ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮ ನೀಡಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನಿ ವೆಂಕಟಪ್ಪ ಒತ್ತಾಯಿಸಿದರು.
ನೀಟ್ ಹಗರದ ಮೂಲಕ ಕೇಂದ್ರ ಬಿಜೆಪಿ ಸರಕಾರ ಲಕ್ಷಾಂತರ ಮಂದಿ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನುಚ್ಚುನೂರು ಮಾಡಿದೆ. ಇದು ಶಿಕ್ಷಣ ಕ್ಷೇತ್ರದ ಅತಿದೊಡ್ಡ ಹಗರಣವಾಗಿದ್ದು, ಇದರ ನೇರ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮ ನೀಡಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನಿ ವೆಂಕಟಪ್ಪ ಒತ್ತಾಯಿಸಿದರು. ಪಟ್ಟಣದಲ್ಲಿ ಮಂಗಳವಾರ ನೀಟ್ ಪರೀಕ್ಷಾ ಪದ್ಧತಿ ವಾಪಸ್ಸಿಗೆ ಒತ್ತಾಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಎಂ ತಾಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ.ಪಿ ಮುನಿವೆಂಕಟಪ್ಪ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಹಿಂದೆoದೂ ನಡೆಯದ ಅತಿ ದೊಡ್ಡ ಹಗರಣವನ್ನು ಕೇಂದ್ರ ಬಿಜೆಪಿ ಸರಕಾರ ಮಾಡಿದೆ. ನೀಟ್ ಹೆಸರಲ್ಲಿ ವೈಧ್ಯರಾಗಲು ಕನಸು ಕಂಡ ಪ್ರತಿಭಾವಂತ ಗ್ರಾಮೀಣ ಹಾಗೂ ಶ್ರಮ ಪಟ್ಟು ಓದುವವರಿಗೆ ಅವಕಾಶಗಳಿಂದ ವಂಚಿತರಾಗುವoತೆ ಹಗರಣ ಮಾಡಲಾಗಿದೆ. ಹಾಗಾಗಿ ಇಂತಹ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುವ ನೀಟ್ ಪರೀಕ್ಷಾ ಪದ್ಧತಿ ವಾಪಸ್ಸಾಗಬೇಕು. ನೀಟ್ ಹಗರಣದ ಹೊಣೆಗಾರಿಕೆಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ರವರು ಹೊತ್ತು,ಕೂಡಲೇ ರಾಜಿನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹೊಸ ಶಿಕ್ಷಣ ನೀತಿಯನ್ನು 2020ರಲ್ಲಿ ಜಾರಿ ಮಾಡಿ, ದುಡ್ಡಿದ್ದವರ ಮಕ್ಕಳು ಮಾತ್ರ ಓದಲು ಅವಕಾಶಗಳನ್ನು ರೂಪಿಸಿದೆ. ಇದರಿಂದಾಗಿ ಕೃಷಿಕೂಲಿ ಕಾರ್ಮಿಕರ, ದಲಿತರ, ದಿನಗೂಲಿಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗುವoತೆ ಮಾಡಿದೆ. ಹಾಗಾಗಿ ಬಂಡವಾಳಶಾಹಿಗಳು ಶಿಕ್ಷಣ ಕ್ಷೇತ್ರದಲ್ಲಿ ಬಂಡವಾಳ ಹೂಡಿ ವ್ಯಾಪಾರ ಮಾಡಲು ಶಿಕ್ಷಣ ವ್ಯಾಪಾರೀಕರಣಕ್ಕೆ ಕುಮ್ಮಕ್ಕು ನೀಡಿದೆ ಎಂದು ಮುನಿವೆಂಕಟಪ್ಪ ಆಕ್ರೋಶ ವ್ಯಕ್ತ ಪಡಿಸಿದರು.