ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಕೆಆರ್‌ಎಸ್ ಪಣ

ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಿಗಲಿ

3.7 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಚಿಂತಾಮಣಿಯಲ್ಲಿ ಮುಂದುವರಿದ ಫುಟ್‌ಪಾತ್ ಒತ್ತುವರಿ ತೆರುವು

December 28, 2024

Ctv News Kannada

Chikkaballapura

ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶಕ್ಕೆ ಪಣ ತೊಡೋಣ

1 min read

ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶಕ್ಕೆ ಪಣ ತೊಡೋಣ

ಬಿಇಒ ಎನ್. ವೆಂಕಟೇಶಪ್ಪ, ಶಾಸಕ ಸುಬ್ಬಾರೆಡ್ಡಿ ಸಹಕಾರ

ಬಾಗೇಪಲ್ಲಿ ತಾಲೂಕಿನ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮುಂದಿನ ಪರೀಕ್ಷೆಯಲ್ಲಿ ಅತ್ಯುತ್ತಮ ರೀತಿಯಲ್ಲಿ ಉತ್ತೀರ್ಣರಾಗುವ ಚಟುವಟಿಕೆಗಳ ಮೂಲಕ ಅತ್ಯುತ್ತಮ ಫಲಿತಾಂಶ ಬರುವಂತೆ ಮಾಡೋಣ ಎಂದು ಬಿಇಒ ಎನ್. ವೆಂಕಟೇಶಪ್ಪ ಕರೆ ನೀಡಿದರು.

ಬಾಗೇಪಲ್ಲಿ ಪಟ್ಟಣದ ಯಂಗ್ ಇಂಡಿಯಾ ಶಾಲೆ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳಲ್ಲಿ ವಿಷಯವಾರು ಪ್ರಶ್ನೆ ಪತ್ರಿಕೆ ರಚನೆ ಮತ್ತು ವಿನ್ಯಾಸ ಕಾರ್ಯಗಾರವನ್ನು ಶಿಕ್ಷಣ ಇಲಾಖೆಯಿಂದ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಬಿಇಒ ವೆಂಕಟೇಶಪ್ಪ, ತಾಲೂಕಿನಲ್ಲಿ ಬಹುತೇಕ ಆರ್ಥಿಕವಾಗಿ ಬಡತನದ ಹಿನ್ನಲೆಯುಳ್ಳ ಕುಟುಂಬಗಳ ವಿದ್ಯಾರ್ಥಿಗಳೇ ಹೆಚ್ಚಿದ್ದಾರೆ. ಆದರೆ ಶೈಕ್ಷಣಿಕವಾಗಿ ಉತ್ತಮ ಕೌಶಲ್ಯ ಹೊಂದಿದ್ದು, ಅವರಿಗೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಬೇಕಿದೆ ಎಂದರು.

ಮಧ್ಯವಾರ್ಷಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 2,450 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ತಾಲೂಕಿನ ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆಯಲು ಶ್ರಮಿಸಬೇಕು ಎಂದರು. ತಾಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಮತ್ತು ಏರಿಕೆಗೆ ಅನುಕೂಲವಾಗಲು ಶಿಕ್ಷಣ ಇಲಾಖೆ ಕೈಗೊಳ್ಳುವ ಚಟುವಟಿಕೆಗಳಿಗೆ ಶಾಸಕರ ವೈಯಕ್ತಿಕ ಮತ್ತು ಆಡಳಿತಾತ್ಮಕ ಬೆಂಬಲ ಸೂಚಿಸಿದ್ದಾರೆ. ಮಾದರಿ ಪರೀಕ್ಷೆಗಳ ನಿರ್ವಹಣೆ, ವಿಶೇಷ ಶೈಕ್ಷಣಿಕ ಮೇಳದಂತಹ ಕಾರ್ಯಕ್ರಮಗಳ ಆಯೋಜನೆಗೆ ಬೇಕಾದ ವೆಚ್ಚವನ್ನು ಶಾಸಕ ಸುಬ್ಬಾರೆಡ್ಡಿ ಧರಿಸುವುದಾಗಿ ತಿಳಿಸಿದ್ದಾರೆ ಎಂದರು.

ಇದೇ ವೇಳೆ ಯಂಗ್ ಇಂಡಿಯಾ ಶಾಲೆಯ ಮುಖ್ಯಸ್ಥ ಶಿವಣ್ಣ ಮಾತನಾಡಿ, ತಾಲೂಕಿನ ಉತ್ತಮ ಫಲಿತಾಂಶಕ್ಕೆ ಶಿಕ್ಷಕರ ಶ್ರಮ ಅತಿ ಮುಖ್ಯವಾಗಿದ್ದು, ಮಕ್ಕಳ ಬೌದ್ಧಿಕ ಮಟ್ಟಕ್ಕೆ ತಕ್ಕಂತೆ ಚಟುವಟಿಕೆಗಳನ್ನು ಹಮ್ಮಿಕೊಂಡು, ಉತ್ತಮ ಫಲಿತಾಂಶ ಸಾಧಿಸಲು ಖಾಸಗಿ ಶಿಕ್ಷಣ ಸಂಸ್ಥೆಗಗಳಿ0ದಲೂ ಬೆಂಬಲ ಮತ್ತು ಸಹಕಾರ ನೀಡುತ್ತೇವೆ ಎಂದು ತಿಳಿಸಿದರು. ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಪಿ.ಎನ್ ನಾರಾಯಣಸ್ವಾಮಿ, ಇಸಿಒಗಳಾದ ರವಿಕುಮಾರ್, ಆನಂದ ಬಾಬು, ಶ್ರೀನಿವಾಸ್ ಇದ್ದರು.

About The Author

Leave a Reply

Your email address will not be published. Required fields are marked *