ಜಿಲ್ಲಾ ಕ್ರೀಡಾಂಗಣಗಳಲ್ಲಿ ಬೃಹತ್ ಪರದೆಯಲ್ಲಿ ನೇರಪ್ರಸಾರ
1 min readಗುಜರಾತಿನ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
ಸಾರ್ವಜನಿಕರು ಹಾಗೂ ಕ್ರೀಡಾಪಟುಗಳು, ಕ್ರೀಡಾ ಪ್ರೇಮಿಗಳು ಅಂತಿಮ ಪಂದ್ಯ ವೀಕ್ಷಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಜಿಲ್ಲಾ ಕ್ರೀಡಾಂಗಣಗಳಲ್ಲಿ ಅಗತ್ಯ ಅಳತೆಯ ದೊಡ್ಡ ಪರದೆ ವ್ಯವಸ್ಥೆಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಂದ್ಯ ವೀಕ್ಷಿಸಲು ಕ್ರಮ ವಹಿಸಲು ಕ್ರೀಡಾ ಇಲಾಖೆ ಸುತ್ತೋಲೆ ಹೊರಡಿಸಿದೆ.
ಟೀಂ ಇಂಡಿಯಾಗೆ ಸಿಎಂ ಶುಭ ಹಾರೈಕೆ:
ವಿಶ್ವಕಪ್ ಕ್ರಿಕೆಟ್ 2023ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿರುವ ಭಾರತೀಯ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಟೀಂ ಇಂಡಿಯಾಗೆ ಶುಭ ಕೋರಿರುವ ಸಿಎಂ, ನನ್ನಂತಹ 140 ಕೋಟಿ ಭಾರತೀಯರ ಹರಕೆ, ಹಾರೈಕೆ ನಿಮ್ಮೊಂದಿಗಿದೆ. ಗೆಲುವಿನ ಅಭಿಯಾನ ಮುಂದುವರಿಯಲಿ. ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ ಎಂದು ಶುಭಾಶಯ ಕೋರಿದ್ದಾರೆ.