ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ಡಿ.14ರಂದು ಶಿಡ್ಲಘಟ್ಟದಲ್ಲಿ ಲೋಕ ಅದಾಲತ್

1 min read

ಡಿ.14ರಂದು ಶಿಡ್ಲಘಟ್ಟದಲ್ಲಿ ಲೋಕ ಅದಾಲತ್

ವ್ಯಾಜ್ಯ ಪೂರ್ವ ಪ್ರಕರಣಗಳ ಇತ್ಯರ್ಥಕ್ಕೆ ಸಹಕರಿಸಿ

ಶಿಡ್ಲಘಟ್ಟ ತಾಲೂಕು ಕಾನೂನು ಸೇವಾ ಸಮಿತಿಯಿಂದ ಡಿಸೆಂಬರ್ 14 ರಂದು ರಾಷ್ಟಿಯ ಲೋಕ ಅದಾಲತ್ ಆಯೋಜಿಸಿದ್ದು, ನಾಗರೀಕರು ಸದುಪಯೋಗ ಪಡೆಯುವಂತೆ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು, ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಮ್ಮದ್ ರೋಷನ್ ಷಾ ತಿಳಿಸಿದರು.

ಶಿಡ್ಲಘಟ್ಟ ನಗರದ ನ್ಯಾಯಾಲಯದ ಆವರಣದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಮ್ಮದ್ ರೋಷನ್ ಷಾ ಅವರು, ನಗರದ ನ್ಯಾಯಾಲಯ ಆವರಣದಲ್ಲಿ ಡಿ. ೧೪ ರಂದು ರಾಷ್ಟಿಯ ಲೋಕ ಅದಾಲತ್ ನಡೆಯಲಿದ್ದು, ಕೌಟುಂಬಿಕ ವ್ಯಾಜ್ಯ, ಸಿವಿಲ್, ಹಣಕಾಸಿನ ವಿಚಾರ, ಬ್ಯಾಂಕ್‌ನಲ್ಲಿ ಸಾಲ ಪಡೆದಿರುವ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು ಎಂದರು.

ನ್ಯಾಯಾಲಯದಲ್ಲಿ ರಾಜೀ ಮಾಡಿಕೊಂಡರೆ ಮಾನವ ಸಂಬ0ಧ, ಮೌಲ್ಯಗಳು, ಶಾಂತಿ, ನೆಮ್ಮದಿಯ ವಾತಾವರಣ ಮೂಡಿ ಕಕ್ಷಿದಾರರ ಅಮೂಲ್ಯ ಸಮಯ ಮತ್ತು ಹಣ ಉಳಿಯುತ್ತದೆ. ರಾಜಿಗೆ ಯೋಗ್ಯವಾದ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಇಚ್ಛಿಸುವ ಕಕ್ಷಿದಾರರು ಸ್ವಯಂ ಪ್ರೇರಿತರಾಗಿ ತಮ್ಮ ವಕೀಲರ ಮೂಲಕ ಅಥವಾ  ಹಾಜರಾಗಿ ರಾಜಿ ಮಾಡಿಕೊಂಡು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಜೆ. ಪೂಜಾ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ. ಭಾಸ್ಕರ್ ಇದ್ದರು.

About The Author

Leave a Reply

Your email address will not be published. Required fields are marked *