ರೈತ ಸಂಪರ್ಕ ಕೇಂದ್ರದ ಮೇಲೆ ಲೋಕಾಯುಕ್ತರ ದಾಳಿ
1 min readರೈತ ಸಂಪರ್ಕ ಕೇಂದ್ರದ ಮೇಲೆ ಲೋಕಾಯುಕ್ತರ ದಾಳಿ
ಲೋಕಾಯುಕ್ತ ದಾಳಿಯಿಂದ ಕಕ್ಕಾಬಿಕ್ಕಿಯಾದ ಸಿಬ್ಬಂದಿ
ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ನೀಡಬೇಕಾದ ಸೌಲತ್ತುಗಳು ಸಮರ್ಪಕವಾಗಿ ವಿತರಣೆಯಾಗುತ್ತಿವೆಯೇ ಇಲ್ಲವೇ ಎಂಬ ಬಗ್ಗೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ಲೋಕಾಯುಕ್ತರ ದಾಳಿಯಿಂದ ರೈತ ಸಂಪರ್ಕ ಕೇಂದ್ರದಲ್ಲಿ ಕರ್ತವ್ಯ ರ‍್ವಿಹಿಸುವ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದಾರೆ,
ರೈತರ ಅನುಕೂಲಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೈತ ಸಂಪರ್ಕ ಕೇಂದ್ರಗಳನ್ನು ತೆಗೆದಿರುವ ಸರ್ಕಾರ, ಆ ಕೇಂದ್ರಗಳ ಮೂಲಕ ರೈತರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುತ್ತಿದೆ. ಅಲ್ಲದೆ ಕೃಷಿ ಮತ್ತು ತೋಟಗಾರಿಕಾ ವಿಚಾರಗಳಿಗೆ ಸಂಬ0ಧಿಸಿ ರೈತರು ಅರ್ಜಿ ಸಲ್ಲಿಸಲೂ ರೈತ ಸಂಪರ್ಕ ಕೇಂದ್ರಗಳನ್ನೇ ಅವಲಂಭಿಸಬೇಕಿದೆ. ಇಂತಹ ರೈತಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಸಮರ್ಪಕವಾಗಿ ಸೌಲಭ್ಯಗಳು ಸಿಗುತ್ತಿವೇ ಇಲ್ಲವೇ ಎಂಬುದನ್ನು ಪರಿಶೀಲಿಸಿಲು ಇಂದು ಲೋಕಾಯುಕ್ತ ಪೊಲೀಸರು ದಿಢೀರ್ ಭೇಟಿ ನಡೀಇ, ಪರಿಶೀಲನೆ ನಡೆಸ್ದಿ ಘಟನೆ ನಡೆಯಿತು.
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ರೈತ ಸಂಪರ್ಕ ಕೇಂದ್ರಕ್ಕೆ ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಹಾಗೂ ಡಿವೈಎಸ್ಪಿ ದಿಢೀರ್ ದಾಳಿ ಮಾಡಿ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಅಧಿಕಾರಿಗಳ ದಾಳಿಯಿಂದ ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಕೆಲ ಕಾಲ ಕಕ್ಕಾಬಿಕ್ಕಿಯಾಗಿದ್ದಾರೆ. ಸಿಬ್ಬಂದಿ ಬಳಿ ಮಾಹಿತಿ ಪಡೆದುಕೊಂಡ ಅಧಿಕಾರಿಗಳು, ರೈತರಿಗೆ ಸಮರ್ಪಕವಾಗಿ ಸವಲತ್ತುಗಳನ್ನ ಒದಗಿಸುವಂತೆ ತಾಕೀತು ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಆಂಟನಿ ಜಾನ್ ಹಾಗೂ ಡಿವೈಎಸ್ಪಿ ವಿರೇಂದ್ರಬಾಬು ದಾಳಿ ನಡೆಸಿದ್ದರು.