ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ: ಇಲ್ಲಿದೆ ವಿವಿಧೆಡೆ ದಾಳಿಯ ವಿವರ
1 min readಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮತ್ತು ಅವರಿಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಯಾದಗಿರಿ ಡಿ.ಹೆಚ್.ಒ. ಡಾ. ಪ್ರಭುಲಿಂಗ ಮಾನಕರ್ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದಲ್ಲಿ ಮತ್ತು ಫಾರ್ಮೌಸ್ ಮೇಲೆ ದಾಳಿ ನಡೆಸಲಾಗಿದೆ.
ಬೀದರ್ ಜಿಲ್ಲೆಯಲ್ಲಿ ಪಶು ವೈದ್ಯಕೀಯ ವಿವಿ ನೌಕರ ಸುನಿಲ್ ಕುಮಾರ್ ಮನೆ ಮತ್ತು ಕಾಂಪ್ಲೆಕ್ಸ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಚಂದ್ರಶೇಖರ, ಅರಣ್ಯ ಇಲಾಖೆ ಅಧಿಕಾರಿ ಮಾರುತಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಮಾರುತಿ ಅವರಿಗೆ ಸೇರಿದ ಹೊಸಪೇಟೆ, ಗಂಗಾವತಿ, ಕಂಪ್ಲಿ ನಿವಾಸಗಳ ಮೇಲೆಯೂ ದಾಳಿ ಮಾಡಲಾಗಿದೆ.
ಮೈಸೂರಿನಲ್ಲಿ ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹಾದೇವಸ್ವಾಮಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಮೇರಿ ಆಸ್ತಿಗಳಿಗೆ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ ಬೆಸ್ಕಾಂ ಜಾಗೃತ ದಳ ಅಧಿಕಾರಿ ಸುಧಾಕರ ರೆಡ್ಡಿ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರ ಮನೆ ಮೇಲೆ ದಾಳಿ ನಡೆದಿದೆ.
ಚಿಕ್ಕಬಳ್ಳಾಪುರ ದಲ್ಲೂ ಲೋಕಾಯುಕ್ತ ದಾಳಿ.
ರಾಮನಗರ ತೋಟಗಾರಿಕಾ ಇಲಾಖಾ ಡಿಡಿ ನಿವಾಸಗಳ ಮೇಲೆ ದಾಳಿ.
ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮುನೇಗೌಡ ನಿವಾಸಗಳ ಮೇಲೆ ದಾಳಿ.
ನಂದಿಕ್ರಾಸ್ ಬಳಿಯ ಮುನೇಗೌಡ ಪತ್ನಿ ನಿವಾಸದ ಮೇಲೆ ದಾಳಿ.
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿ ಇರುವ ನಿವಾಸ.
ಮುನೇಗೌಡ ಸ್ವಗ್ರಾಮ ಕೆ ಜಿ ಪುರದ ನಿವಾಸಗಳ ಮೇಲೂ ದಾಳಿ.
ಉಪನಿರ್ದೇಶಕ ಮುನೇಗೌಡ ಸ್ವಗ್ರಾಮ ಕೆ ಜಿ ಪುರ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೆ ಜಿ ಪುರ