ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ನಿಗಮ ಮಂಡಳಿ ಹುದ್ದೆಗಳ ಪರೀಕ್ಷೆಗೆ ಮಂಗಳ ಸೂತ್ರ, ಕಾಲುಂಗುರಕ್ಕೆ ಅವಕಾಶ: ಕೆಇಎಯಿಂದ ವಸ್ತ್ರಸಂಹಿತೆ ಬಿಡುಗಡೆ

1 min read

ಕೆಇಎಯಿಂದ ವಸ್ತ್ರಸಂಹಿತೆ ಬಿಡುಗಡೆಗೊಳಿಸಲಾಗಿದೆ. ನಿಗಮ ಮಂಡಳಿ ಹುದ್ದೆಗಳ ಪರೀಕ್ಷೆಗೆ ಮಂಗಳ ಸೂತ್ರ ಹಾಗೂ ಕಾಲುಂಗುರ ಧರಿಸಲು ಅವಕಾಶ ನೀಡಲಾಗಿದೆ.

ಬೆಂಗಳೂರು: ನವೆಂಬರ್ 18 ಮತ್ತು 19 ರಂದು ನಡೆಯಲಿರುವ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಸ್ತ್ರ ಸಂಹಿತೆ ಬಿಡುಗಡೆ ಮಾಡಿದ್ದು ಅದರಂತೆ ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಕಾಲುಂಗುರ ಧರಿಸಲು ಅನುಮತಿಸಲಾಗಿದೆ.

ಇತ್ತೀಚೆಗೆ ನಡೆದ ಕೆಪಿಎಸ್​ಸಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಾಗಿದ್ದ ಗೃಹಿಣಿಯರ ಮಂಗಳಸೂತ್ರ ಹಾಗೂ ಕಾಲುಂಗುರ ತೆಗೆಸಿದ ಘಟನೆ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನವೆಂಬರ್ 18 ಮತ್ತು 19 ರಂದು ನಡೆಯಲಿರುವ ಪರೀಕ್ಷೆಗಳಿಗೆ ವಸ್ತ್ರ ಸಂಹಿತೆ ರೂಪಿಸಿದೆ. ಅದರಂತೆ ವಿವಾಹಿತ ಮಹಿಳೆಯರು ಮಾಂಗಲ್ಯ ಹಾಗೂ ಕಾಲುಂಗುರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯುವವರಿಗೆ ಈಗಾಗಲೇ ಮಾರ್ಗಸೂಚಿ ರೂಪಿಸಿದ್ದ ಹಿನ್ನೆಲೆಯಲ್ಲಿ ಈಗ ಮಂಗಳಸೂತ್ರ ಮತ್ತು ಕಾಲುಂಗುರ ಕುರಿತ ಸ್ಪಷ್ಟೀಕರಣದೊಂದಿಗೆ ಪರೀಕ್ಷಾ ವಿದ್ಯಾರ್ಥಿಗಳು ಅನುಸರಿಸಬೇಕಾದ ಸೂಚನೆಗಳನ್ನು ಬಿಡುಗಡೆ ಮಾಡಿದೆ.

ಪರುಷ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ:

  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು.
  • ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
  • ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ, ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.
  • ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ಸ್​ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
  • ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ:

  • ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್​ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
  • ಎತ್ತರವಾದ ಹಿಮ್ಮಡಿಯ ಶೂಗಳು, ಚಪ್ಪಲಿಗಳು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
  • ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ)

ನಿಷೇಧಿತ ವಸ್ತುಗಳ ಪಟ್ಟಿ:

  • ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಆಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.
  • ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
  • ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ.
  • ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್​ಗಳು ಮತ್ತು ಲಾಗ್ ಟೇಬಲ್​ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
  • ಬ್ಲೂಟೂಥ್ ಸಾಧನೆಗಳನ್ನು ಪರೀಕ್ಷಾ ಕೊಠಡಿಯಲ್ಲಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರವನ್ನು ಧರಿಸಿವುದನ್ನು ಬಾಯಿ ಕಿವಿ ಹಾಗೂ ತಲೆ ಮುಚ್ಚುವ ವಸ್ತ್ರವನ್ನು, ಸಾಧನವನ್ನು ಧರಿಸುವುದನ್ನು ನಿಷೇಧಿಸಿದೆ.
  • ಯಾವುದೇ ರೀತಿಯ ಮಾಸ್ಕ್ ಅನ್ನು ಧರಿಸುವಂತಿಲ್ಲ.

ಪರೀಕ್ಷೆಯ ದಿನ ಈ ವಸ್ತುಗಳಿಗೆ ಅನುಮತಿ;

  • ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು.
  • ಎರಡು ಇತ್ತೀಚಿನ ಪಾಸ್​ಪೋರ್ಟ್ ಅಳತೆಯ ಫೋಟೋವನ್ನು ತರಬೇಕು.
  • ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದನ್ನು ಕಡ್ಡಾಯಗೊಳಿಸಲಾಗಿದೆ.
  • ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

ಕೆಇಎ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕ್ರಮವನ್ನು ಜರುಗಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *