ಗೌರಿಬಿದನೂರು ತಾಲೂಕಿನಾಧ್ಯಂತ ಸಂಭ್ರಮದ ಕ್ರಿಸ್ಮಸ್

ಬಾಗೇಪಲ್ಲಿಯಲ್ಲಿ ಮುಗಿಲು ಮುಟ್ಟಿದ ಕ್ರಿಸ್ ಮಸ್ ಸಂಭ್ರಮ

ಬಾಗೇಪಲ್ಲಿಯಲ್ಲಿ ಸಂಭ್ರಮದ ಕ್ರಿಸ್‌ಮಸ್ ಆಚರಣೆ

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕ್ರಿಸ್‌ಮಸ್ ಸಂಭ್ರಮ

December 27, 2024

Ctv News Kannada

Chikkaballapura

ಪರಿಸರಕ್ಕೆ ಹಾನಿ ಮಾಡುವ ಗಣೇಶ ಮೂರ್ತಿಗಳ ತಯಾರಿಕೆ ಪತ್ತೆ

1 min read

ಪರಿಸರಕ್ಕೆ ಹಾನಿ ಮಾಡುವ ಗಣೇಶ ಮೂರ್ತಿಗಳ ತಯಾರಿಕೆ ಪತ್ತೆ
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಂದ ದಾಳಿ

ಗೌರಿ-ಗಣೇಶ ಹಬ್ಬಕ್ಕೆ ಇನ್ನೆರೆಡು ತಿಂಗಳು ಬಾಕಿ ಇದೆ, ಗಣೇಶ ಮೂರ್ತಿಗಳ ತಯಾರಿಕೆ ಭರ್ಜರಿಯಾಗಿ ನಡೆಯುತ್ತಿದೆ, ಆದರೆ ಬಹುತೇಕ ಗಣೇಶ ಮೂರ್ತಿ ತಯಾರಿಕ ಘಟಕಗಳು ಕಾನೂನು ಬಾಹಿರವಾಗಿ ಗಣೇಶ ಮೂರ್ತಿಗಳ ತಯಾರಿಕೆಗೆ ಮುಂದಾಗಿದ್ದಾರೆ, ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಮತ್ತು ೫ ಆಡಿಗಿಂತ ಎತ್ತರದ ಗಣೇಶ ಮೂರ್ತಿಗಳ ತಯಾರಿಕೆಯನ್ನ ನಿಷೇಧಿಸಲಾಗಿದೆ. ಆದರೆ ಸರ್ಕಾರಿ ನಿಯಮವನ್ನ ಗಾಳಿಗೆ ತೂರಿ ಕಾನೂನು ಬಾಹಿರವಾಗಿ ಗಣೇಶ ಮೂರ್ತಿಗಳ ತಯಾರಿಕೆ ಮಾಡಲಾಗುತ್ತಿದೆ.

ಗೌರಿ-ಗಣೇಶ ಹಬ್ಬಕ್ಕೆ ಇನ್ನೆರೆಡು ತಿಂಗಳು ಬಾಕಿ ಇದೆ, ಗಣೇಶ ಮೂರ್ತಿಗಳ ತಯಾರಿಕೆ ಭರ್ಜರಿಯಾಗಿ ನಡೆಯುತ್ತಿದೆ, ಆದರೆ ಬಹುತೇಕ ಗಣೇಶ ಮೂರ್ತಿ ತಯಾರಿಕ ಘಟಕಗಳು ಕಾನೂನು ಬಾಹಿರವಾಗಿ ಗಣೇಶ ಮೂರ್ತಿಗಳ ತಯಾರಿಕೆಗೆ ಮುಂದಾಗಿದ್ದಾರೆ, ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಮತ್ತು 5 ಆಡಿಗಿಂತ ಎತ್ತರದ ಗಣೇಶ ಮೂರ್ತಿಗಳ ತಯಾರಿಕೆಯನ್ನ ನಿಷೇಧಿಸಲಾಗಿದೆ. ಆದರೆ ಸರ್ಕಾರಿ ನಿಯಮವನ್ನ ಗಾಳಿಗೆ ತೂರಿ ಕಾನೂನು ಬಾಹಿರವಾಗಿ ಗಣೇಶ ಮೂರ್ತಿಗಳ ತಯಾರಿಕೆ ಮಾಡಲಾಗುತ್ತಿದೆ. ದೊಡ್ಡಬಳ್ಳಾಪುರ ತಾಲೂಕಿಗೆ ಹೊಂದಿಕೊoಡಿರುವ ಮಾರಸಂದ್ರದಲ್ಲಿ ಗಣೇಶ ಮೂರ್ತಿ ತಯಾರಿಕೆಯ 9 ಘಟಕಗಳು ಪತ್ತೆಯಾಗಿವೆ.

ದೊಡ್ಡಬಳ್ಳಾಪುರ ತಾಲೂಕಿಗೆ ಹೊಂದಿಕೊoಡಿರುವ ಮಾರಸಂದ್ರದಲ್ಲಿ ಗಣೇಶ ಮೂರ್ತಿ ತಯಾರಿಕೆಯ 9 ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಬಹುತೇಕ ಎಲ್ಲಾ ಘಟಕಗಳಲ್ಲಿ ಕಾನೂನು ಬಾಹಿರವಾಗಿಯೇ ಗಣೇಶ ಮೂರ್ತಿಗಳ ತಯಾರಿಕೆ ನಡೆಯುತ್ತಿದೆ, ನಾಗದಳ ಮತ್ತು ಯುವ ಸಂಚಲನ ತಂಡಗಳು ಕಾನೂನು ಬಾಹಿರವಾಗಿ ಗಣೇಶ ಮೂರ್ತಿಗಳ ತಯಾರಿಕೆಗೆ ಕಡಿವಾಣ ಹಾಕುವಂತೆ ಮನವಿ ಮಾಡುತ್ತಲೇ ಬಂದಿದ್ದಾರೆ, ಪರಿಸರ ಪ್ರೇಮಿಗಳ ಒತ್ತಡಕ್ಕೆ ಮಣಿದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಗಣೇಶ ಮೂರ್ತಿ ತಯಾರಿಕ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ.

ಈ ವೇಳೆ ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಗಣೇಶ ಮೂರ್ತಿಗಳು ಪತ್ತೆಯಾಗಿದೆ, ಅಧಿಕಾರಿಗಳ ದಾಳಿಗೆ ಹೆದರಿದ ಉ್ನಳಿದ 8 ಘಟಕಗಳು ಬಾಗಿಲು ಹಾಕಿ ಪರಾರಿಯಾಗಿದ್ದಾರೆ. ಅಧಿಕಾರಿಗಳ ದಾಳಿ ಬಗ್ಗೆ ಮಾತನಾಡಿದ ಯುವ ಸಂಚಲನದ ಮುಖಂಡ ಚಿದಾನಂದ್ ಮೂರ್ತಿ, ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸಿದರು, ಕಳೆದ ವರ್ಷ ನಿಷೇಧಿಸಿದ ಮೂರ್ತಿಗಳನ್ನೇ ಈಗಲೂ ಮರು ತಯಾರಿಕೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆದರೆ ಅಧಿಕಾರಿಗಳು ದಾಳಿ ವೇಳೆ ಹಳೆಯ ವಿಗ್ರಹಗಳು ಮಾತ್ರ ಪತ್ತೆಯಾಗಿದೆ ಎಂದು ಮಹಜರು ಬರೆದಿದ್ದಾರೆ ಎಂದು ಆರೋಪಿಸಿದರು.

ಪರಿಸರವನ್ನ ಕಾಪಾಡ ಬೇಕಾದ ಜವಾಬ್ದಾರಿ ಹೊತ್ತ ಅಧಿಕಾರಿಗಳೇ ಪರಿಸರ ಮಾಲಿನ್ಯಕ್ಕೆ ಮುಂದಾಗಿರುವುದು ಸಮಾಜದ ದುರಂತ ಎಂದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ ಕಾಯ್ದೆ 1974ರ ಪ್ರಕಾರ ಕಲಂ 33 ಕಾಯ್ದೆ ಪ್ರಕಾರ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ , ಬಣ್ಣ ಲೇಪಿತ ವಿಗ್ರಹಗಳನ್ನು, ರಾಜ್ಯದ ಯಾವುದೇ ಜಲಗಳಲ್ಲಿ, ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಲಂ 45-1 ಅನ್ವಯ 10 ಸಾವಿರ ದಂಡ ಮತ್ತು ಜೈಲುವಾಸ ವಿಧಿಸುವ ಅವಕಾಶವಿದೆ. ಅಲ್ಲದೆ ಕಡ್ಡಾಯವಾಗಿ ಗಣೇಶ ಮೂರ್ತಿಗಳು 5 ಅಡಿ ಎತ್ತರವನ್ನು ಮೀರಬಾರದೆಂದು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧ ವಿಧಿಸಿದೆ. ಈಗಾಗಲೇ ಜಲಮೂಲಗಳಿಗೆ ಆಗಿರುವ ಕಲುಷಿತ ಸಾಕು ಇನ್ನಾದರೂ ಸ್ಥಳೀಯ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡು ಈ ಬಾರಿ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬ ಜರಗುವಂತೆ ಕ್ರಮವಹಿಸಬೇಕು ಯಾವುದೇ ಕಾರಣಕ್ಕೂ ವಿಷಕಾರಿ ರಸಾಯನಿಕ ಬಣ್ಣಗಳನ್ನು ಬಳಸಿರುವ, ಹುಲ್ಲು ಮತ್ತು ಬಿದಿರುಕಡ್ಡಿಗಳಲ್ಲಿ ಗಣೇಶ ಮೂರ್ತಿಗಳನ್ನು ಮಾಡಿರುವ ಗಣೇಶಗಳನ್ನು ತಯಾರು ಮಾಡದಂತೆ ಹಾಗೂ ಕೂರಿಸದಂತೆ ತಡೆಗಟ್ಟಿ ಕಾನೂನು ಉಲ್ಲಂಘನೆ ಮಾಡಿದವರ ಮೇಲೆ ಶಿಸ್ತು ಕ್ರಮ ಕೈಗೊಂಡು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.

About The Author

Leave a Reply

Your email address will not be published. Required fields are marked *