ಅಧಿಕಾರಿಗಳ, ವಿವಿಧ ಸಂಘಟನೆಗಳ ಮುಖಂಡರ ಸಭೆ
1 min readನಾರಾಯಣ ಗುರು, ಡಿ ದೇವರಾಜ ಅರಸುರವರ ಜಯಂತಿ
ಅಧಿಕಾರಿಗಳ, ವಿವಿಧ ಸಂಘಟನೆಗಳ ಮುಖಂಡರ ಸಭೆ
ಶಾಸಕ ದರ್ಶನ್ ಧ್ರುವನಾರಾಯಣ ಅಧ್ಯಕ್ಷತೆಯಲ್ಲಿ ಸಭೆ
೨೦ ರಂದು ನಾರಾಯಣ ಗುರು ಮತ್ತು ಡಿ. ದೇವರಾಜ ಅರಸು ಅವರ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರೊ0ದಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಪೂರ್ವಭಾವಿ ಸಭೆ ನಡೆಸಿದರು.
ಶಾಸಕ ದರ್ಶನ್ ಧ್ರುವನಾರಾಯಣ್ ಅಧಯಕ್ಷತೆಯಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರ ಜೊತೆ ನಾರಾಯಣ ಗುರು ಮತ್ತು ಡಿ. ದೇವರಾಜ ಅರಸು ಅವರ ಜಯಂತಿ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು. ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, 20 ರಂದು ನಂಜನಗೂಡು ನಗರದ ಅಂಬೇಡ್ಕರ್ ಭವನದಲ್ಲಿ ನಾರಾಯಣ ಗುರು ಮತ್ತು ಡಿ ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು. ನೂರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಡಿ.ದೇವರಾಜು ಅರಸುರವರ ಸಾಧನೆಗಳು ಮತ್ತು ಕೊಡುಗೆಗಳನ್ನು ಈಗಿನ ಯುವ ಪೀಳಿಗೆಗೆ ತಿಳಿಸಿ ಅರ್ಥಪೂರ್ಣವಾಗಿ ಇಬ್ಬರು ಮಹಾನ್ ವ್ಯಕ್ತಿಗಳ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ಅಧಿಕಾರಿ ಸ್ವರ್ಣಲತಾ, ಸಿಪಿಡಿಓಗಳಾದ ದಿವ್ಯಾ ಶ್ರೀ, ಮಂಜುಳಾ, ಆರೋಗ್ಯಾಧಿಕಾರಿ ಡಾ.ಈಶ್ವರ್, ನಂಜು0ಡೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಅಬಕಾರಿ ನಿರೀಕ್ಷಕಿ ದೀಪ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಚಂದ್ರು, ಸುರೇಶ್, ಮಲ್ಲೇಶ್, ಮಾರುತಿ ಇದ್ದರು.