ಸಂಚಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಚಿವ ಮುನಿಯಪ್ಪ ಚಾಲನೆ
1 min readಸಂಚಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಚಿವ ಮುನಿಯಪ್ಪ ಚಾಲನೆ
ಸಾರ್ವಜನಿಕರಿಗೆ ಉಚಿತ ಹಾಗೂ ಗುಣಮಟ್ಟದ ಆರೋಗ್ಯ ನೀಡುವ ಗುರಿ
ಪ್ರತಿಷ್ಠಿತ ಸಂಸ್ಥೆಗಳ ಸಹಕಾರಕ್ಕೆ ಸಚಿವ ಮುನಿಯಪ್ಪ ಶ್ಲಾಘನೆ
ಸಾರ್ವಜನಿಕರಿಗೆ ಉಚಿತ ಹಾಗೂ ಗುಣಮಟ್ಟದ ಆರೋಗ್ಯ ನೀಡಲು ಪ್ರತಿಷ್ಠಿತ ಸಂಸ್ಥೆಗಳ ಸಹಕಾರ ಶ್ಲಾಘನೀಯವಾದದ್ದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ ಹೇಳಿದರು.
ದೇವನಹಳ್ಳಿ ಸರ್ಕಾರಿ ಆಸ್ಪತ್ರೆ, ವೋಲ್ವೋ ಮತ್ತು ನಾರಾಯಣ ಹೃದಯಲಯ ಸಹಾಭಾಗಿತ್ವದಲ್ಲಿ ಇಂದು ಪ್ರಾರಂಭಗೊoಡ ಸಂಚಾರಿ ಸಮುದಾಯ ಆರೋಗ್ಯ ಕೇಂದ್ರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ. ಹೆಚ್. ಮುನಿಯಪ್ಪ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ನಂತರ ಮಾತನಾಡಿದ ಸಚಿವರು, ಬಡವರಿಗೆ ಹಾಗೂ ಮದ್ಯಮ ವರ್ಗದ ಜನರಿಗೆ ಸರಿಯಾದ ಆರೋಗ್ಯ ಸೇವೆ ಕಲ್ಪಿಸಲು ಪ್ರತಿಷ್ಠಿತ ಸಂಸ್ಥೆಯಾದ ವೋಲ್ವೋ ಹಾಗೂ ನಾರಾಯಣ ಹೃದಯಾಲಯ ಉತ್ತಮ ಸೇವೆ ನೀಡಲು ಮುಂದಾಗಿರುವುದು ಸಂತಸ ತಂದಿದೆ ಈ ಸೇವೆಯಿಂದ ಕಾನ್ಸರ್, ಹೃದಯ ಸಂಬoಧಿ ಸಮಸ್ಯೆಗಳು, ರೋಗನಿರ್ಣಯ ಸಮಸ್ಯೆಗಳಿಗೆ ಉಚಿತ ವೈದ್ಯಕೀಯ ಸೇವೆ ಒದಗಿಸಿ ಆರೋಗ್ಯ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲು ಸೃಷ್ಟಿಸಲಿದೆ ಎಂದರು.
ವಿ. ಶಾಂತಕುಮಾರ್ ಮಾತನಾಡಿ, ದೇವನಹಳ್ಳಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಮೊಬೈಲ್ ಕ್ಲಿನಿಕ್ ವಾಹನಕ್ಕೆ ಚಾಲನೆ ನೀಡುವ ಮೂಲಕ ಗ್ರಾಮೀಣ ಪ್ರದೇಶದ ಜನರಿಗೂ ಗುಣಮಟ್ಟದ ವೈದ್ಯಕೀಯ ಸೌಲಭ್ಯ, ಚಿಕಿತ್ಸೆ ದೊರಕಿಸುವತ್ತ ಮಹತ್ತರ ಹೆಜ್ಜೆ ಇಟ್ಟಿದ್ದು ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಶಿವಶಂಕರ್,ವೋಲ್ವೋ ಪ್ರಾಜೆಕ್ಟ್ ನಿರ್ದೇಶಕ ಜಿ.ವಿ.ರಾವ್ ದೇವನಹಳ್ಳಿ ಪುರಸಭೆ ಮುಖ್ಯಾಧಿಕಾರಿ ದೊಡ್ಡಮಲುವಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಚನ್ನಹಳ್ಳಿ ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಸದಸ್ಯರಾದ ಪ್ರಸನ್ನ ಕುಮಾರ್ ಇದ್ದರು.