ನಂಜನಗೂಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಚಾಲನೆ
1 min readನಂಜನಗೂಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಚಾಲನೆ
ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಶಾಸಕ ದರ್ಶನ್ ಧ್ರುವನಾರಾಯಣ್ ನಂಜನಗೂಡು ತಾಲ್ಲೂಕಿನಲ್ಲಿ 1.40 ಕೋಟಿ ವೆಚ್ಚದ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದರು. ಹೆಗ್ಗಡಹಳ್ಳಿ, ಶಿರ ಮಳ್ಳಿ, ಕುರಿಹುಂಡಿ, ಕಪ್ಪಸೋಗೆ, ರಾಜೂರು, ನೆಲ್ಲಿತಾಳಪುರ, ಆಕಳ, ಕಡಬೂರು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನಡೀಇದರು.
ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿ.ಸಿ.ರಸ್ತೆ, ಚರಂಡಿ, ಬಸವ ಭವನ, ಸಮುದಾಯ ಭವನ, ಅಂಗನವಾಡಿ ಕಟ್ಟಡ ಗಳಿಗೆ ಭೂಮಿ ಪೂಜೆ ನೆರೆವೇರಿಸಿ ಮಾತನಾಡಿದ ಶಶಾಕ ದರ್ಶನ್ ಧ್ರುವನಾರಾಯಣ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಶೇಷ ಅನುದಾನದಲ್ಲಿ 25 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದ್ದು, ತಾಲೂಕಿನಲ್ಲಿ 1.40 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ತಾಲೂಕಿನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿಸಿ ಅಭಿವೃದ್ಧಿಗೆಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ, ಕೆ. ಮಾರುತಿ, ಗ್ರಾ. ಪಂ ಅಧ್ಯಕ್ಷ ಕಾಂತರಾಜು ಇದ್ದರು.