ಉಚಿತ ಆರೋಗ್ಯ ಶಿಬಿರದಲ್ಲಿ ೪೫೦ಕ್ಕೂ ಹೆಚ್ಚು ಮಂದಿ ಭಾಗಿ
1 min readಮಳ್ಳೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಉಚಿತ ಆರೋಗ್ಯ ಶಿಬಿರದಲ್ಲಿ ೪೫೦ಕ್ಕೂ ಹೆಚ್ಚು ಮಂದಿ ಭಾಗಿ
ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗೌರಮ್ಮ ಮಲ್ಲಿಶೆಟ್ಟಿ ಆರೋಗ್ಯ ಕೇಂದ್ರ, ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ಇಂದು ಮಳ್ಳೂರು ಗೌರಮ್ಮ ಮಲ್ಲಿಶೆಟ್ಟಿ ಆರೋಗ್ಯ ಕೇಂದ್ರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ 12 ನೇ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ಶಿಡ್ಲಘಟ್ಟ ತಾಲೂಕಿನ ಮಳ್ಳೂರು ಗೌರಮ್ಮ ಮಲ್ಲಿಶೆಟ್ಟಿ ಆರೋಗ್ಯ ಕೇಂದ್ರದ ಮುಖ್ಯಸ್ಥ ಡಾ.ಸಂದೀಪ್ ಪುವ್ವಾಡ ಮಾತನಾಡಿ, ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಜತೆಗೆ ದಂತ, ಕ್ಯಾನ್ಸರ್ ಮತ್ತು ಹೃದಯ ತಪಾಸಣೆ ಶಿಬಿರ ನಡೆಯುತ್ತಿದೆ. ಜತೆಗೆ ಮಕ್ಕಳ ರೋಗ ತಜ್ಞರು, ಸ್ತಿರೋಗ ತಜ್ಞರು, ನೇತೃ ತಜ್ಞರು ಮತ್ತು ಚರ್ಮ ರೋಗ ತಜ್ಞರು ಆಗಮಿಸಿದ್ದು, ತಪಾಸಣೆ ಮತ್ತು ಔಷಧಪಚಾರ ಮಾಡುತ್ತಿದ್ದಾರೆ. ಅಗತ್ಯ ಔಷಧಿಗಳನ್ನು ಉಚಿತವಾಗಿ ನೀಡುತ್ತಿರುವುದಾಗಿ ಹೇಳಿದರು.
ಸುಮಾರು ೪೫ ಮಂದಿಗೆ ಹೃದಯ ಮತ್ತು ಕಣ್ಣಿನ ಶಸ್ತ ಚಿಕಿತ್ಸೆ ಅಗತ್ಯವಿದ್ದು, ಅವರಿಗೆ ಉಚಿತವಾಗಿ ಶಸ್ತ ಚಿಕಿತ್ಸೆ ಮಾಡಿಸಿ ಕರೆತರಲಾಗುವುದು ಎಂದರು. ಮಳ್ಳೂರಿನ ಮಲ್ಲಿಶೆಟ್ಟಿ ಆರೋಗ್ಯ ಕೇಂದ್ರದಲ್ಲಿ ಮಕ್ಕಳು ಹಾಗೂ ಗರ್ಭಿಣಿಯರಿಗೆ ಚಿಕಿತ್ಸಾ ಕೇಂದ್ರ ಪ್ರಾರಂಭಿಸಿದ್ದು, ಪ್ರತಿ ಭಾನುವಾರ ಬೆಳಗ್ಗೆ 10 ರಿಂದ ಮಧ್ಯಹ್ನ 1 ಗಂಟೆಯವರೆಗೂ ಉಚಿತ ಚಿಕಿತ್ಸೆ ಮತ್ತು ಔಷಧಪಚಾರ ಒದಗಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಬೆಳಗ್ಗೆ 9 ಗಂಟೆಯಿ0ದ ಮಧ್ಯಹ್ನ 2 ರವರೆಗೂ ನಡೆದ ಶಿಬಿರದಲ್ಲಿ 450 ಕ್ಕೂ ಹೆಚ್ಚು ಮಂದಿ ನುರಿತ ತಜ್ಞರಿಂದ ತಪಾಸಣೆ ಮಾಡಲಾಯಿತು. ರಕ್ತದಾನಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ತಜ್ಞ ವೈದ್ಯರಾದ ಡಾ.ಜ್ಯೋತಿ, ಡಾ.ಪ್ರಸಾದ್, ಡಾ. ಸುನಿಲ್ ಹಾಜರಿದ್ದರು.