ಮುನೇಶ್ವರ ಸ್ವಾಮಿ ದೇವಾಲಯ ನೂತನ ವಿಗ್ರಹ ಪ್ರತಿಷ್ಠಾಪನೆ
1 min readಮುನೇಶ್ವರ ಸ್ವಾಮಿ ದೇವಾಲಯ ನೂತನ ವಿಗ್ರಹ ಪ್ರತಿಷ್ಠಾಪನೆ
ಸತತ 1,675 ದಿನಗಳ ನಿರಂತರ ಅನ್ನ ದಾಸೋಹ ಕಾರ್ಯಕ್ರಮ
ನಿರ0ತರ ಅನ್ನದಾಸೋಹ ಸಮಿತಿ ದಾನಿಗಳ ನೆರವಿನಿಂದ ಶ್ರೀ ಮುನೇಶ್ವರ ಸ್ವಾಮಿ ದೇವಾಲಯ ನಿರ್ಮಿಸಿ, ನೂತನ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ದೊಡ್ಡಬಳ್ಳಾಪುರ ತಾಲ್ಲೂಕಿನ ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸತತ ೧,೬೭೫ ದಿನಗಳಿಂದ ನಿರಂತರ ಅನ್ನ ದಾಸೋಹ ಕಾರ್ಯಕ್ರಮವನ್ನು ಮಲ್ಲೆಶ್ ನೆಡೆಸಿಕೊಂಡು ಬರುತ್ತಿದ್ದು. ಅವರ ಸೇವೆ ಕೇವಲ ಅನ್ನದಾಸೋಹಕ್ಕೆ ಸೀಮಿತವಾಗದೆ ನೂತನ ದೇವಾಲಯ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಎಂ. ಮಲ್ಲೆಶ್ ಮಾತನಾಡಿ, ನೂರಾರು ವೃದ್ಧರಿಗೆ, ಬಡವರಿಗೆ, ಶಾಲಾ ಮಕ್ಕಳಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಮಲ್ಲೆಶ್ ಇಂದು ದೇವಾಲಯದ ನೂತನ ವಿಗ್ರಹ ಪ್ರತಿಷ್ಠಾಪನಾ ಕಾರ್ಯ ಮಾಡಿದ್ದಾರೆ. ದಾನಿಗಳ ನೆರವಿನಿಂದ ಇಂತಹ ದೊಡ್ಡ ಕಾರ್ಯಕ್ರಮ ರೂಪಿಸಿದ್ದು, ಸಮಾಜಕ್ಕೆ ಮಾದರಿಯಾಗಿದೆ, ಸದಾ ಸಮಾಜ ಸೇವೆಯಲ್ಲಿ ತೊಡಗಿರುವ ಮಲ್ಲೆಶ್ ಮತ್ತು ತಂಡಕ್ಕೆ ಶುಭವಾಗಲಿ ಎಂದರು.