ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 23, 2024

Ctv News Kannada

Chikkaballapura

ಪ್ಲಾಸ್ಟಿಕ್ ಮುಕ್ತ ಬಾಗೇಪಲ್ಲಿ ಮಾಡುವುದೇ ನನ್ನ ಗುರಿ-ಮುಖ್ಯಧಿಕಾರಿ ರುದ್ರಮ್ಮ ಶರಣಯ್ಯ

1 min read

ಅಂಗಡಿ ಮಳಿಗೆಗಲ ಮೇಲೆ ದಾಳಿ ಪುರಸಭೆ ವಶಕ್ಕೆ ಪ್ಲಾಸ್ಟಿಕ್-ಪ್ಲಾಸ್ಟಿಕ್ ಮುಕ್ತ ಬಾಗೇಪಲ್ಲಿ ಮಾಡುವುದೇ ನನ್ನ ಗುರಿ-ಮುಖ್ಯಧಿಕಾರಿ ರುದ್ರಮ್ಮ ಶರಣಯ್ಯ

ಬಾಗೇಪಲ್ಲಿ: ಪ್ಲಾಸ್ಟಿಕ್‌ ಬಳಕೆ ಮತ್ತು ಮಾರಾಟವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಾಗೇಪಲ್ಲಿ ಪುರಸಭೆ ಮುಖ್ಯಧಿಕಾರಿ ರುದ್ರಮ್ಮ ಶರಣಪ್ಪ ಮತ್ತು ಸಿಬ್ಬಂದಿ ಪಟ್ಟಣದಲ್ಲಿ ಅಂಗಡಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಂಡಿದ್ದರೆ.

ಪಟ್ಟಣದಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ಲಾಸ್ಟಿಕ್‌ ಬಳಕೆ ಮತ್ತು ಮಾರಾಟವನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಹಂತ ಹಂತವಾಗಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಕ್ಕೆ ಪಡೆಯುವ ಜತೆಗೆ ದಂಡ ಪ್ರಯೋಗಕ್ಕೂ ಮುಂದಾಗಿದ್ದಾರೆ. ಬಾಗೇಪಲ್ಲಿ ಪಟ್ಟಣದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಕೇಂದ್ರಗಳ ಮೇಲೆ ಕಾರ್ಯಾಚರಣೆ ನಡೆಸಿ 1 ಕ್ವಿಂಟಲ್ ಗೂ ಹೆಚ್ಚಿನ ಪ್ರಮಾಣದ ಪ್ಲಾಸ್ಟಿಕ್‌ ಕವರ್‌,ಗ್ಲಾಸ್‌(ನೀರಿನ ಲೋಟ)ಸೇರಿದಂತೆ ಮತ್ತಿತರ ಪರಿಕರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಕುರಿತು ಬಾಗೇಪಲ್ಲಿ ಪುರಸಭೆ ಮುಖ್ಯಾಧಿಕಾರಿ ರುದ್ರಮ್ಮ ಶರಣಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ”ವರ್ತಕರು ಹಾಗೂ ಸಾರ್ವಜನಿಕರ ಗಮನ ಸೆಳೆಯಲು ಪುರಸಭೆ ವತಿಯಿಂದ ಕಳೆದ 5 ತಿಂಗಳಿಂದ ಹಲವು ರೀತಿಯ ಪ್ರಚಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಪ್ಲಾಸ್ಟಿಕ್‌ ಬಳಕೆ ಮತ್ತು ಮಾರಾಟ ನಿರಂತರವಾಗಿ ನಡೆಯುತ್ತಲೇ ಇದೆ. ಸಾರ್ವಜನಿಕರು ಹಾಗೂ ವರ್ತಕರಿಂದ ನಿರೀಕ್ಷಿತ ಮಟ್ಟದಲ್ಲಿ ಸ್ಪಂದನೆ ಸಿಗುತ್ತಿಲ್ಲ,” ಎಂದು ವಿಷಾದ ವ್ಯಕ್ತಪಡಿಸಿದರು.

”ಇನ್ನು ಮುಂದೆ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸಲು ಗಂಭೀರ ಚಿಂತನೆ ನಡೆಸಲಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ವಸ್ತುಗಳ ತಯಾರಿಕೆ, ಮಾರಾಟ, ಬಳಕೆ, ದಾಸ್ತಾನು ಇಡುವುದು, ಸಾಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಬಾಗೇಪಲ್ಲಿ ಪುರಸಭೆಯನ್ನು ಸಂಪೂರ್ಣ ಪ್ಲಾಸ್ಟಿಕ್‌ ಮುಕ್ತ ಪಟ್ಟಣವನ್ನಾಗಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್‌ ಬಳಕೆ ಮತ್ತು ಮಾರಾಟ ಮಾಡುವ ಅಂಗಡಿ ಹಾಗೂ ಸರಕು ಸಾಗಣೆ ವಾಹನಗಳ ಮೇಲೆ ದಾಳಿ ಮುಂದುವರಿಸಲಾಗುತ್ತಿದೆ.

ಸರಕಾರದ ಅಧಿಸೂಚನೆ ಹಾಗೂ ಕಾಯ್ದೆ ರೀತ್ಯಾ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌, ಪ್ಲಾಸ್ಟಿಕ್‌ ಭಿತ್ತಿಪತ್ರ, ತೋರಣ, ಫ್ಲೆಕ್ಸ್‌, ಬಾವುಟ, ಹಾಗೂ ಪ್ಲಾಸಿಕ್‌ ತಟ್ಟೆ, ಲೋಟ, ಚಮಚಗಳು, ಕ್ಲಿಂಗ್‌ ಫಿಲ್ಮ್‌ ಮತ್ತು ಊಟದ ಮೇಜಿನ ಮೇಲೆ ಹಾಕುವ ಪ್ಲಾಸ್ಟಿಕ್‌ ಹಾಳೆಗಳು, ಥರ್ಮೋಕೋಲ್‌, ಪ್ಲಾಸ್ಟಿಕ್‌ ಮೈಕ್ರೊ ಬೀಡ್ಸ್‌ನಿಂದ ತಯಾರಿಸಿದ ವಸ್ತುಗಳು ಮಾರಾಟ ಮತ್ತು ಬಳಕೆ ಸಂಪೂರ್ಣ ನಿಷೇಧಿಸಲ್ಪಟ್ಟಿದೆ. ನಿಯಮಗಳ ಉಲ್ಲಂಘನೆ ಮಾಡಿದಲ್ಲಿ ಪರಿಸರ ಸಂರಕ್ಷ ಣೆ ಕಾಯಿದೆ 1986ರ ಸೆಕ್ಷ ನ್‌ 19ರ ಅಡಿಯಲ್ಲಿ ದಂಡ ಹಾಗೂ ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದು ಎಂದು ಮುಖ್ಯಾಧಿಕಾರಿ ರುದ್ರಮ್ಮ ಶರಣಪ್ಪ ತಿಳಿಸಿದರು.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

About The Author

Leave a Reply

Your email address will not be published. Required fields are marked *