ಮೈಸೂರು : ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಗಳು ಕೊನೆಗೂ ಸೆರೆ
1 min readಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೋಮವಾರ ಬೆಳಗ್ಗೆ ನಂಜನಗೂಡು ವ್ಯಾಪ್ತಿಯ ಚಿಕ್ಕಯ್ಯನಛತ್ರ ಹೋಬಳಿಯ ಹತ್ಯಾಳು ಗ್ರಾಮದಲ್ಲಿ ಇಡಲಾಗಿದ್ದ ಬೋನಿಗೆ ಬಿದ್ದಿದೆ.
ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಚಿರತೆಗಳ ಕಾಟ ಹೆಚ್ಚಾಗುತ್ತಿದ್ದು ಮೈಸೂರು ಜಿಲ್ಲೆಯ ಎರಡು ಗ್ರಾಮಗಳಲ್ಲಿ 2 ಚಿರತೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದು ರಕ್ಷಿಸಿದೆ.
ಚಿರತೆ ಕಾಟದ ಬಗ್ಗೆ ಹೆಚ್ಚು ದೂರುಗಳು ಹೇಳಿ ಬಂದ ಹಿನ್ನೆಲೆ ಅರಣ್ಯ ಇಲಾಖೆ ಬೋನು ಇರಿಸಿತ್ತು. ಸದ್ಯ ಈಗ 2 ಚಿರತೆಗಳು ಬೋನಿಗೆ ಬಿದ್ದಿವೆ.
ನಂಜನಗೂಡು ತಾಲೂಕಿನ ರಾಂಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ 2 ಚಿರತೆಗಳು ಬೋನಿಗೆ ಬಿದ್ದಿವೆ.ಬಲೆಗೆ ಬಿದ್ದ ಗಂಡು ಚಿರತೆಗೆ ಸುಮಾರು ಐದು ವರ್ಷ ವಯಸ್ಸಾಗಿರಬಹುದು ಎಂದು ಹೇಳಲಾಗುತ್ತಿದೆ. ಈ ಪ್ರದೇಶದಲ್ಲಿ ಚಿರತೆಗಳು ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದರಿಂದ ರೈತರು ಜಾನುವಾರುಗಳನ್ನು ಮೇಯಿಸಲು ಭಯಪಡುತ್ತಿದ್ದರು.
ಈ ಭಾಗದಲ್ಲಿ ಬೀಡುಬಿಟ್ಟಿರುವ ಇತರ ಚಿರತೆಗಳನ್ನು ಸೆರೆ ಹಿಡಿಯುವಂತೆ ಇಲ್ಲಿನ ನಿವಾಸಿಗಳು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಟಿ.ನರಸೀಪುರ ವ್ಯಾಪ್ತಿಯ ತಲಕಾಡು ಹೋಬಳಿಯ ಕುರುಬೋಳನಹುಂಡಿಯಲ್ಲಿ ಭಾನುವಾರ ರಾತ್ರಿ ಬಾಳೆ ತೋಟದಲ್ಲಿ ಹಾಕಲಾಗಿದ್ದ ಬಲೆಗೆ ಮತ್ತೊಂದು ಚಿರತೆ ಬಿದ್ದಿದೆ. ಇದು ಕೂಡ ಗಂಡು ಚಿರತೆಯಾಗಿದ್ದು, ಸುಮಾರು ನಾಲ್ಕು ವರ್ಷ ಪ್ರಾಯದ್ದಾಗಿದೆ.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnews